Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 25:30 - ಪರಿಶುದ್ದ ಬೈಬಲ್‌

30 ಹೀಗೆ ರಾಜನಾದ ಎವೀಲ್ಮೆರೋದಕನ ಪಂಕ್ತಿಯಲ್ಲಿ ಯೆಹೋಯಾಖೀನನು ತನ್ನ ಉಳಿದ ಜೀವಿತದಲ್ಲಿ ಊಟಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಅವನು ಬದುಕಿರುವವರೆಗೂ ಅವನಿಗೆ ಬೇಕಾಗುವ ಎಲ್ಲಾ ಪದಾರ್ಥಗಳು ಪ್ರತಿನಿತ್ಯವೂ ಅರಸನಿಂದಲೇ ಅವನಿಗೆ ಕೊಡಲಾಗುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಅವನ ಜೀವಿತಕಾಲವೆಲ್ಲ, ಅವನಿಗೆ ಬೇಕಾಗಿ ಇದ್ದ ಎಲ್ಲ ಪದಾರ್ಥಗಳು ಅರಸನಿಂದಲೇ ಪ್ರತಿನಿತ್ಯವೂ ದೊರಕುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಅವನು ಬದುಕಿರುವವರೆಗೂ ಅವನಿಗೆ ಬೇಕಾಗುವ ಎಲ್ಲಾ ಪದಾರ್ಥಗಳು ಪ್ರತಿ ನಿತ್ಯವೂ ಅರಸನಿಂದಲೇ ದೊರಕುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಅವನು ಬದುಕಿರುವವರೆಗೂ ಅವನಿಗೆ ಬೇಕಾಗಿದ್ದ ಎಲ್ಲಾ ಪದಾರ್ಥಗಳು ಬಾಬಿಲೋನಿನ ಅರಸನಿಂದಲೇ ಪ್ರತಿನಿತ್ಯವೂ ದೊರಕುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 25:30
10 ತಿಳಿವುಗಳ ಹೋಲಿಕೆ  

ನಮ್ಮ ಅನುದಿನದ ಆಹಾರವನ್ನು ನಮಗೆ ದಯಪಾಲಿಸು.


ನಮ್ಮ ಅನುದಿನದ ಆಹಾರವನ್ನು ಈ ಹೊತ್ತು ನಮಗೆ ದಯಪಾಲಿಸು.


ಗಾಯಕರಾಗಿದ್ದ ಇವರು ದೇವಾಲಯದ ಸೇವಾಕಾರ್ಯಗಳಲ್ಲಿ ಹಾಡುತ್ತಿದ್ದರು. ಇವರ ಅನುದಿನದ ಕರ್ತವ್ಯವನ್ನು ರಾಜನೇ ತಿಳಿಸುತ್ತಿದ್ದನು. ಇವರು ಅದಕ್ಕೆ ವಿಧೇಯರಾಗುತ್ತಿದ್ದರು.


ಅರಸನಾದ ನೆಬೂಕದ್ನೆಚ್ಚರನು ದಿನಾಲು ಆ ತರುಣರಿಗೆ ತಾನು ಸೇವಿಸುವ ಆಹಾರವನ್ನು ಮತ್ತು ದ್ರಾಕ್ಷಾರಸವನ್ನು ಕೊಡುತ್ತಿದ್ದನು. ಅವರನ್ನು ತನ್ನ ಸೇವಕರನ್ನಾಗಿ ಮಾಡಿಕೊಳ್ಳುವ ಉದ್ದೇಶದಿಂದ ಮೂರು ವರ್ಷಗಳ ತರಬೇತಿ ಕೊಡಬೇಕೆಂದು ಆಜ್ಞಾಪಿಸಿದನು.


ಜೆರುಬ್ಬಾಬೆಲ್ ಮತ್ತು ನೆಹೆಮೀಯನ ಕಾಲದಲ್ಲಿ ಇಸ್ರೇಲರೆಲ್ಲರೂ ಗಾಯಕರಿಗೆ ಮತ್ತು ದ್ವಾರಪಾಲಕರಿಗೆ ಅನುದಿನ ಅಗತ್ಯವಾದವುಗಳನ್ನು ಒದಗಿಸಿಕೊಟ್ಟರು. ಇತರ ಲೇವಿಯರಿಗೋಸ್ಕರವಾಗಿಯೂ ಜನರು ಹಣವನ್ನು ಪ್ರತ್ಯೇಕವಾಗಿಟ್ಟರು. ಲೇವಿಯರೂ ಸಹ ಆರೋನನ ವಂಶದ ಯಾಜಕರಿಗಾಗಿ ಹಣವನ್ನು ಪ್ರತ್ಯೇಕವಾಗಿಟ್ಟರು.


ಯೇಸುವಿನ ಶಿಷ್ಯರ ಸಂಖ್ಯೆಯು ಹೆಚ್ಚುಹೆಚ್ಚಾಗುತ್ತಿತ್ತು. ಆದರೆ ಈ ಸಮಯದಲ್ಲಿ ಗ್ರೀಕ್ ಮಾತಾಡುವ ಶಿಷ್ಯರು ಯೆಹೂದ್ಯ ಶಿಷ್ಯರಿಗೆ ದೂರು ಹೇಳಿದರು. ಪ್ರತಿದಿನ ಶಿಷ್ಯರಿಗೆ ಕೊಡುವಂಥವುಗಳಲ್ಲಿ ತಮ್ಮ ವಿಧವೆಯರಿಗೆ ಅವರ ಪಾಲು ದೊರೆಯುತ್ತಿಲ್ಲವೆಂದು ಅವರು ಆಪಾದಿಸಿದರು.


ಪ್ರತಿದಿನ ಬಾಬಿಲೋನಿನ ರಾಜನು ಯೆಹೋಯಾಖೀನನಿಗೆ ಭತ್ಯವನ್ನು ಕೊಡುತ್ತಿದ್ದನು. ಯೆಹೋಯಾಖೀನನು ಸಾಯುವವರೆಗೆ ಈ ಕ್ರಮ ಮುಂದುವರೆಯಿತು.


“ಗಿಲ್ಯಾದಿನವನಾದ ಬರ್ಜಿಲ್ಲ್ಯೆಯನ ಮಕ್ಕಳಿಗೆ ದಯೆಯನ್ನು ತೋರು. ಅವರು ನಿನಗೆ ಸ್ನೇಹಿತರಾಗಿರಲು ಮತ್ತು ನಿನ್ನ ಪಂಕ್ತಿಯಲ್ಲಿ ಊಟಮಾಡಲು ಅವಕಾಶ ಮಾಡು. ನಾನು ನಿನ್ನ ಸೋದರನಾದ ಅಬ್ಷಾಲೋಮನಿಂದ ಓಡಿಹೋದಾಗ ಅವರು ನನಗೆ ಸಹಾಯ ಮಾಡಿದರು.


ನಾನು ನಿನ್ನನ್ನೂ ನಿನ್ನ ತಾಯಿಯನ್ನೂ ನಿಮ್ಮಿಬ್ಬರ ಜನ್ಮಸ್ಥಳವಲ್ಲದ ಬೇರೆ ದೇಶದಲ್ಲಿ ಎಸೆದುಬಿಡುತ್ತೇನೆ. ನೀನು ಮತ್ತು ನಿನ್ನ ತಾಯಿ ಆ ದೇಶದಲ್ಲಿ ಸತ್ತುಹೋಗುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು