2 ಅರಸುಗಳು 25:6 - ಪರಿಶುದ್ದ ಬೈಬಲ್6 ಬಾಬಿಲೋನಿನವರು ರಾಜನಾದ ಚಿದ್ಕೀಯನನ್ನು ರಿಬ್ಲದಲ್ಲಿ ಬಾಬಿಲೋನ್ ರಾಜನಿಗೆ ಒಪ್ಪಿಸಿದರು. ಬಾಬಿಲೋನ್ ರಾಜನು ಚಿದ್ಕೀಯನನ್ನು ದಂಡಿಸಲು ತೀರ್ಮಾನಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅನಂತರ ಕಸ್ದೀಯರು ಬಾಬೆಲಿನ ಅರಸನನ್ನು ಹಿಡಿದು ರಿಬ್ಲದಲ್ಲಿದ್ದ ತಮ್ಮ ಅರಸನ ಬಳಿಗೆ ತೆಗೆದುಕೊಂಡು ಬಂದು ಅವನಿಗೆ ಶಿಕ್ಷೆಯನ್ನು ವಿಧಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅನಂತರ ಬಾಬಿಲೋನಿಯರು ಅವನನ್ನು ರಿಬ್ಲದಲ್ಲಿದ್ದ ತಮ್ಮ ಅರಸನ ಬಳಿಗೆ ಎಳೆದು ತಂದು ಅವನಿಗೆ ಶಿಕ್ಷೆಯನ್ನು ವಿಧಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅನಂತರ ಕಸ್ದೀಯರು ಅವನನ್ನು ರಿಬ್ಲದಲ್ಲಿದ್ದ ತಮ್ಮ ಅರಸನ ಬಳಿಗೆ ತೆಗೆದುಕೊಂಡು ಬಂದು ಅವನಿಗೆ ಶಿಕ್ಷೆಯನ್ನು ವಿಧಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅವರು ಅರಸನನ್ನು ಹಿಡಿದುಕೊಂಡರು. ರಿಬ್ಲದಲ್ಲಿರುವ ಬಾಬಿಲೋನಿನ ಅರಸನ ಬಳಿಗೆ ತೆಗೆದುಕೊಂಡು ಬಂದು, ಅವನ ಮೇಲೆ ನ್ಯಾಯವನ್ನು ನಿರ್ಣಯಿಸಿದರು. ಅಧ್ಯಾಯವನ್ನು ನೋಡಿ |
“‘ಇದಾದ ಮೇಲೆ ನಾನು ಯೆಹೂದದ ರಾಜನಾದ ಚಿದ್ಕೀಯನನ್ನು ಮತ್ತು ಅಧಿಪತಿಗಳನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೆ ಒಪ್ಪಿಸುತ್ತೇನೆ. ಜೆರುಸಲೇಮಿನ ಕೆಲವು ಜನರು ಭಯಂಕರವಾದ ರೋಗದಿಂದ ಸಾಯುವುದಿಲ್ಲ; ಕೆಲವು ಜನರು ಖಡ್ಗಗಳಿಗೆ ಆಹುತಿಯಾಗುವದಿಲ್ಲ; ಕೆಲವರು ಹಸಿವಿನಿಂದ ಸಾಯುವುದಿಲ್ಲ. ಅಂಥವರನ್ನು ನಾನು ನೆಬೂಕದ್ನೆಚ್ಚರನಿಗೆ ಕೊಡುತ್ತೇನೆ. ಯೆಹೂದದ ವೈರಿಯು ಗೆಲ್ಲುವಂತೆ ನಾನು ಮಾಡುತ್ತೇನೆ. ನೆಬೂಕದ್ನೆಚ್ಚರನ ಸೈನಿಕರು ಯೆಹೂದ್ಯರನ್ನು ಕೊಲ್ಲಬಯಸುತ್ತಾರೆ. ಆದ್ದರಿಂದ ಯೆಹೂದ ಮತ್ತು ಜೆರುಸಲೇಮಿನ ಜನರು ಖಡ್ಗಗಳಿಗೆ ಬಲಿಯಾಗುವರು. ನೆಬೂಕದ್ನೆಚ್ಚರನು ಸ್ವಲ್ಪವೂ ದಯೆ ತೋರುವದಿಲ್ಲ. ಆ ಜನರ ಸಲುವಾಗಿ ಅವನು ಮರುಗುವದಿಲ್ಲ.’