Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 25:7 - ಪರಿಶುದ್ದ ಬೈಬಲ್‌

7 ಅವರು ಚಿದ್ಕೀಯನ ಮಕ್ಕಳನ್ನು ಅವನ ಎದುರಿನಲ್ಲಿಯೇ ಕೊಂದುಹಾಕಿದರು. ನಂತರ ಅವರು ಚಿದ್ಕೀಯನ ಕಣ್ಣುಗಳನ್ನು ಕಿತ್ತುಹಾಕಿದರು. ಅವರು ಅವನನ್ನು ಸರಪಣಿಗಳಿಂದ ಬಂಧಿಸಿ, ಬಾಬಿಲೋನಿಗೆ ಕೊಂಡೊಯ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಚಿದ್ಕೀಯನ ಇಬ್ಬರು ಮಕ್ಕಳನ್ನು ಅವನ ಎದುರಿನಲ್ಲಿಯೇ ಕೊಂದುಹಾಕಿದರಲ್ಲದೆ ಅವನಿಗೆ ಬೇಡಿಹಾಕಿ, ಅವನ ಎರಡು ಕಣ್ಣುಗಳನ್ನು ಕಿತ್ತು ಬಾಬಿಲೋನಿಗೆ ತೆಗೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಇವನ ಇಬ್ಬರು ಮಕ್ಕಳನ್ನು ಅವನ ಕಣ್ಣೆದುರಿಗೇ ವಧಿಸಿ, ಅವನಿಗೆ ಬೇಡಿಹಾಕಿ ಎರಡು ಕಣ್ಣುಗಳನ್ನೂ ಕಿತ್ತು ಬಾಬಿಲೋನಿಗೆ ತೆಗೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವನ ಇಬ್ಬರು ಮಕ್ಕಳನ್ನು ಅವನ ಎದುರಿನಲ್ಲಿಯೇ ವಧಿಸಿ ಅವನಿಗೆ ಬೇಡಿ ಹಾಕಿ ಎರಡು ಕಣ್ಣುಗಳನ್ನೂ ಕಿತ್ತು ಬಾಬೆಲಿಗೆ ತೆಗೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವರು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣೆದುರಿಗೇ ವಧಿಸಿದರು. ತರುವಾಯ ಅವನ ಕಣ್ಣುಗಳನ್ನು ಕೀಳಿಸಿ, ಅವನಿಗೆ ಬೇಡಿಹಾಕಿಸಿ ಅವನನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 25:7
23 ತಿಳಿವುಗಳ ಹೋಲಿಕೆ  

ಸತ್ತುಹೋದ ಜನರಿಗಾಗಿ ನಿಮ್ಮ ರಾಜನು ಗೋಳಾಡುವನು; ನಾಯಕನಿಗೆ ನಿರೀಕ್ಷೆಯು ಇಲ್ಲವಾಗುವುದು. ಸಾಮಾನ್ಯ ಜನರು ಭಯಗ್ರಸ್ತರಾಗುವರು. ಯಾಕೆಂದರೆ ನಾನು ಅವರ ನಡತೆಗೆ ತಕ್ಕಂತೆ ಅವರಿಗೆ ಮಾಡುವೆನು; ಅವರು ಬೇರೆಯವರಿಗೆ ನ್ಯಾಯ ತೀರಿಸಿದಂತೆ ನಾನು ಅವರಿಗೆ ನ್ಯಾಯತೀರಿಸುವೆನು. ನಾನೇ ಯೆಹೋವನೆಂದು ಆಗ ಅವರು ತಿಳಿದುಕೊಳ್ಳುವರು.”


ಚಿದ್ಕೀಯನೇ, ನೀನು ಬಾಬಿಲೋನಿನ ರಾಜನಿಂದ ತಪ್ಪಿಸಿಕೊಳ್ಳಲಾರೆ. ನಿಶ್ಚಿತವಾಗಿ ನಿನ್ನನ್ನು ಹಿಡಿದು ಅವನಿಗೆ ಒಪ್ಪಿಸಲಾಗುವುದು. ಬಾಬಿಲೋನಿನ ರಾಜನನ್ನು ನೀನು ಪ್ರತ್ಯಕ್ಷವಾಗಿ ನೋಡುವೆ. ಅವನು ನಿನ್ನೊಂದಿಗೆ ಮುಖಾಮುಖಿಯಾಗಿ ಮಾತನಾಡುವನು; ನೀನು ಬಾಬಿಲೋನಿಗೆ ಹೋಗುವೆ.


ಯೆಹೋವನು ಹೇಳುವುದೇನೆಂದರೆ: “ಯೆಹೋಯಾಚೀನನು ಮಕ್ಕಳಿಲ್ಲದವನೆಂದು ನೊಂದಾಯಿಸಿರಿ. ಯೆಹೋಯಾಚೀನನು ತನ್ನ ಜೀವನದಲ್ಲಿ ಯಶಸ್ವಿಯಾಗುವುದಿಲ್ಲ. ಅವನ ಮಕ್ಕಳಲ್ಲಿ ಯಾರೂ ದಾವೀದನ ಸಿಂಹಾಸನವನ್ನೇರುವದಿಲ್ಲ. ಅವನ ಮಕ್ಕಳಲ್ಲಿ ಯಾರೂ ಯೆಹೂದದಲ್ಲಿ ರಾಜ್ಯಭಾರ ಮಾಡುವುದಿಲ್ಲ.”


ದೇವಜನರು ಆ ರಾಜರುಗಳನ್ನು ಮತ್ತು ಪ್ರಮುಖರನ್ನು ಸರಪಣಿಗಳಿಂದಲೂ ಕಬ್ಬಿಣದ ಬೇಡಿಗಳಿಂದಲೂ ಬಂಧಿಸುವರು.


ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಯೆಹೂದ ಪ್ರಾಂತ್ಯದ ಮೇಲೆ ಯುದ್ಧಕ್ಕೆ ಬಂದನು. ಯೆಹೋಯಾಕೀಮನನ್ನು ಸೆರೆಹಿಡಿದು ಅವನನ್ನು ಕಂಚಿನ ಸರಪಣಿಯಿಂದ ಕಟ್ಟಿಸಿದನು. ನಂತರ ಯೆಹೋಯಾಕೀಮನನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದನು.


ಆದ್ದರಿಂದ ಅಶ್ಶೂರ್ ದೇಶದ ಅರಸನ ಸೇನಾಪತಿಗಳು ಬಂದು ಯೆಹೂದದ ಮೇಲೆ ಯುದ್ಧ ಮಾಡುವಂತೆ ಯೆಹೋವನು ಮಾಡಿದನು. ಆ ಸೇನಾಪತಿಗಳು ಮನಸ್ಸೆಯನ್ನು ಬಂಧಿಸಿ ಸೆರೆಯಲ್ಲಿಟ್ಟರು. ಅವನಿಗೆ ಕೊಂಡಿಗಳನ್ನು ಸಿಕ್ಕಿಸಿ ಬೇಡಿಹಾಕಿ ಬಾಬಿಲೋನಿಗೆ ಒಯ್ದರು.


ಫಿಲಿಷ್ಟಿಯರು ಸಂಸೋನನನ್ನು ಬಂಧಿಸಿ ಅವನ ಕಣ್ಣುಗಳನ್ನು ಕಿತ್ತು ಗಾಜಾ ನಗರಕ್ಕೆ ತೆಗೆದುಕೊಂಡು ಹೋದರು. ಅವನು ಓಡಿಹೋಗದಂತೆ ಅವನಿಗೆ ಸಂಕೋಲೆಗಳನ್ನು ಬಿಗಿದರು. ಅವರು ಸಂಸೋನನನ್ನು ಒಂದು ಸೆರೆಮನೆಯಲ್ಲಿಟ್ಟು ಧಾನ್ಯಬೀಸುವ ಕೆಲಸಕ್ಕೆ ಹಚ್ಚಿದರು.


ನೀವು ನೋಡುವ ಸಂಗತಿಗಳು ನಿಮ್ಮನ್ನು ಹುಚ್ಚರನ್ನಾಗಿ ಮಾಡುತ್ತವೆ.


ನನ್ನ ಜೊತೆಯಲ್ಲಿ ಈ ಹುಡುಗನಿಲ್ಲದೆ ನಾನು ನನ್ನ ತಂದೆಯ ಬಳಿಗೆ ಹಿಂತಿರುಗಿ ಹೋಗಲು ಸಾಧ್ಯವಿಲ್ಲ. ನಮ್ಮ ತಂದೆಗೆ ಸಂಭವಿಸುವುದನ್ನು ನೋಡಲು ನನಗೆ ತುಂಬ ಭಯವಾಗಿದೆ” ಎಂದು ಹೇಳಿದನು.


ಹಾಗರಳು ಸ್ವಲ್ಪ ದೂರ ನಡೆದುಹೋಗಿ ಕುಳಿತುಕೊಂಡು ತನ್ನ ಮಗನು ಸಾಯುವುದನ್ನು ನೋಡಲಾರದೆ ಅಳತೊಡಗಿದಳು.


“ಯೆಹೋವನು ನಿಮ್ಮನ್ನೂ ನಿಮ್ಮ ಅರಸನನ್ನೂ ನೀವು ಅರಿಯದ ದೇಶಕ್ಕೆ ಅಟ್ಟಿಬಿಡುವನು. ನೀವಾಗಲಿ ನಿಮ್ಮ ಪೂರ್ವಿಕರಾಗಲಿ ಆ ದೇಶವನ್ನು ಎಂದೂ ನೋಡಲಿಲ್ಲ. ಅಲ್ಲಿ ಮರ, ಕಲ್ಲುಗಳಿಂದ ಮಾಡಿದ ಸುಳ್ಳುದೇವರನ್ನು ಆರಾಧಿಸುವಿರಿ.


“ನಿನ್ನ ಎಲ್ಲಾ ಹೆಂಡತಿಯರನ್ನು ಮತ್ತು ಮಕ್ಕಳನ್ನು ಹೊರತರಲಾಗುವುದು. ಅವರನ್ನು ಬಾಬಿಲೋನಿನ ಸೈನಿಕರಿಗೆ ಒಪ್ಪಿಸಲಾಗುವುದು. ನೀನೂ ಬಾಬಿಲೋನಿನ ಸೈನಿಕರಿಂದ ತಪ್ಪಿಸಿಕೊಳ್ಳಲಾರೆ. ಬಾಬಿಲೋನಿನ ರಾಜನು ನಿನ್ನನ್ನು ವಶಪಡಿಸಿಕೊಳ್ಳುವನು ಮತ್ತು ಜೆರುಸಲೇಮ್ ನಗರವನ್ನು ಸುಟ್ಟುಹಾಕಲಾಗುವುದು” ಎಂದು ಉತ್ತರಿಸಿದನು.


ಅಧಿಪತಿಗಳೆಲ್ಲಾ ಒಟ್ಟಾಗಿ ಪಲಾಯನಗೈದರು. ಆದರೆ ಅವರೆಲ್ಲಾ ಬಿಲ್ಲುಗಳಿಲ್ಲದೆ ಹಿಡಿಯಲ್ಪಟ್ಟರು. ನಿಮ್ಮ ಎಲ್ಲಾ ಅಧಿಕಾರಿಗಳು ಒಟ್ಟಾಗಿ ಬಹು ದೂರಪ್ರದೇಶಗಳಿಗೆ ಓಡಿದರು. ಆದರೆ ಅವರೆಲ್ಲಾ ಹಿಡಿಯಲ್ಪಟ್ಟರು.


“‘ಇದಾದ ಮೇಲೆ ನಾನು ಯೆಹೂದದ ರಾಜನಾದ ಚಿದ್ಕೀಯನನ್ನು ಮತ್ತು ಅಧಿಪತಿಗಳನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೆ ಒಪ್ಪಿಸುತ್ತೇನೆ. ಜೆರುಸಲೇಮಿನ ಕೆಲವು ಜನರು ಭಯಂಕರವಾದ ರೋಗದಿಂದ ಸಾಯುವುದಿಲ್ಲ; ಕೆಲವು ಜನರು ಖಡ್ಗಗಳಿಗೆ ಆಹುತಿಯಾಗುವದಿಲ್ಲ; ಕೆಲವರು ಹಸಿವಿನಿಂದ ಸಾಯುವುದಿಲ್ಲ. ಅಂಥವರನ್ನು ನಾನು ನೆಬೂಕದ್ನೆಚ್ಚರನಿಗೆ ಕೊಡುತ್ತೇನೆ. ಯೆಹೂದದ ವೈರಿಯು ಗೆಲ್ಲುವಂತೆ ನಾನು ಮಾಡುತ್ತೇನೆ. ನೆಬೂಕದ್ನೆಚ್ಚರನ ಸೈನಿಕರು ಯೆಹೂದ್ಯರನ್ನು ಕೊಲ್ಲಬಯಸುತ್ತಾರೆ. ಆದ್ದರಿಂದ ಯೆಹೂದ ಮತ್ತು ಜೆರುಸಲೇಮಿನ ಜನರು ಖಡ್ಗಗಳಿಗೆ ಬಲಿಯಾಗುವರು. ನೆಬೂಕದ್ನೆಚ್ಚರನು ಸ್ವಲ್ಪವೂ ದಯೆ ತೋರುವದಿಲ್ಲ. ಆ ಜನರ ಸಲುವಾಗಿ ಅವನು ಮರುಗುವದಿಲ್ಲ.’


ಆಗ ರಾಜನಾದ ಚಿದ್ಕೀಯನು ಯೆರೆಮೀಯನನ್ನು ತನ್ನ ಅರಮನೆಗೆ ಕರೆತರಿಸಿದನು. ಚಿದ್ಕೀಯನು ಯೆರೆಮೀಯನೊಂದಿಗೆ ರಹಸ್ಯವಾಗಿ ಮಾತನಾಡಿ, “ಯೆಹೋವನಿಂದ ಏನಾದರೂ ಸಂದೇಶವಿದೆಯೊ?” ಎಂದು ಕೇಳಿದನು. “ಹೌದು, ಯೆಹೋವನಿಂದ ಒಂದು ಸಂದೇಶವಿದೆ. ಚಿದ್ಕೀಯನೇ, ನಿನ್ನನ್ನು ಬಾಬಿಲೋನಿನ ರಾಜನಿಗೆ ಒಪ್ಪಿಸಲಾಗುವುದು” ಎಂದು ಯೆರೆಮೀಯನು ಉತ್ತರಿಸಿದನು.


ಜೆರುಸಲೇಮಿನ ಹೆಬ್ಬಾಗಿಲುಗಳು ನೆಲದಲ್ಲಿ ಹೂತುಹೋಗಿವೆ. ಆತನು ಹೆಬ್ಬಾಗಿಲುಗಳ ಸರಳುಗಳನ್ನು ಮುರಿದು ಚೂರುಚೂರು ಮಾಡಿದ್ದಾನೆ. ಅವಳ ರಾಜನು ಮತ್ತು ರಾಜಕುಮಾರರು ಅನ್ಯಜನಾಂಗಗಳ ಮಧ್ಯದಲ್ಲಿದ್ದಾರೆ. ಆ ಜನರಿಗೆ ಉಪದೇಶ ಮಾಡಲು ಯಾರೂ ಇಲ್ಲ. ಪ್ರವಾದಿಗಳಿಗೆ ಯೆಹೋವನಿಂದ ಯಾವ ದರ್ಶನಗಳೂ ಇಲ್ಲ.


‘ನೀನು ಅವರಿಗೆ ಹೀಗೆ ಹೇಳು: ನಾನು ನಿಮಗೆ ಒಂದು ಸೂಚನೆಯಾಗಿದ್ದೇನೆ. ನಾನು ಮಾಡಿದ ಸೂಚಕಕಾರ್ಯ ಖಂಡಿತವಾಗಿ ನಿಮಗೆ ಸಂಭವಿಸುವುದು. ನೀವು ದೂರದೇಶಕ್ಕೆ ಸೆರೆಯಾಳುಗಳಾಗಿ ಹೋಗುವಿರಿ.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು