2 ಅರಸುಗಳು 25:8 - ಪರಿಶುದ್ದ ಬೈಬಲ್8 ಬಾಬಿಲೋನ್ ರಾಜನಾಗಿದ್ದ ನೆಬೂಕದ್ನೆಚ್ಚರನು ತನ್ನ ಆಳ್ವಿಕೆಯ ಹತ್ತೊಂಭತ್ತನೆಯ ವರ್ಷದ ಐದನೆಯ ತಿಂಗಳ ಏಳನೆಯ ದಿನದಂದು ಜೆರುಸಲೇಮಿಗೆ ಬಂದನು. ನೆಬೂಜರದಾನ ಎಂಬವನು ನೆಬೂಕದ್ನೆಚ್ಚರನ ರಕ್ಷಕ ದಳದ ಅಧಿಪತಿಯಾಗಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಐದನೆಯ ತಿಂಗಳಿನ ಏಳನೆಯ ದಿನದಲ್ಲಿ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದಲ್ಲಿ ಬಾಬೆಲಿನ ಅರಸನ ಸೇವಕನೂ, ಕಾವಲುದಂಡಿನ ಅಧಿಪತಿಯೂ ಆಗಿದ್ದ ನೆಬೂಜರದಾನ್ ಎಂಬುವವನು ಯೆರೂಸಲೇಮಿಗೆ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಐದನೆಯ ತಿಂಗಳಿನ ಏಳನೆಯ ದಿನ, ಅಂದರೆ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದಲ್ಲಿ, ಬಾಬಿಲೋನಿನ ಅರಸನ ಸೇವಕನೂ ರಕ್ಷಾದಳದ ಅಧಿಪತಿಯೂ ಆಗಿದ್ದ ನೆಬೂಜರದಾನ್ ಎಂಬವನು ಜೆರುಸಲೇಮಿಗೆ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಐದನೆಯ ತಿಂಗಳಿನ ಏಳನೆಯ ದಿನದಲ್ಲಿ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಆಳಿಕೆಯ ಹತ್ತೊಂಭತ್ತನೆಯ ವರುಷದಲ್ಲಿ ಬಾಬೆಲಿನ ಅರಸನ ಸೇವಕನೂ ಕಾವಲುದಂಡಿನ ಅಧಿಪತಿಯೂ ಆಗಿದ್ದ ನೆಬೂಜರದಾನನೆಂಬವನು ಯೆರೂಸಲೇವಿುಗೆ ಬಂದು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದ ಐದನೆಯ ತಿಂಗಳಿನ, ಏಳನೆಯ ದಿನದಲ್ಲಿ ಬಾಬಿಲೋನಿನ ಅರಸನ ಸೇವಕನೂ, ಕಾವಲಿನ ಅಧಿಪತಿಯೂ ಆಗಿದ್ದ ನೆಬೂಜರದಾನನು ಯೆರೂಸಲೇಮಿಗೆ ಬಂದು, ಅಧ್ಯಾಯವನ್ನು ನೋಡಿ |
ಆದ್ದರಿಂದ ಬಾಬಿಲೋನ್ ರಾಜನಾದ ನೆಬೂಕದ್ನೆಚ್ಚರನು ಜೆರುಸಲೇಮಿನ ವಿರುದ್ಧ ಯುದ್ಧಮಾಡಲು ತನ್ನ ಎಲ್ಲಾ ಸೇನೆಯೊಡನೆ ಬಂದನು. ನೆಬೂಕದ್ನೆಚ್ಚರನು ಜೆರುಸಲೇಮಿನ ಸುತ್ತಲೂ ಪಾಳೆಯ ಮಾಡಿಕೊಂಡು ಮಣ್ಣಿನ ದಿಬ್ಬವನ್ನು ನಿರ್ಮಿಸಿದನು. ಅವನು ನಗರದೊಳಕ್ಕೆ ಹೋಗುವ ಮತ್ತು ನಗರದಿಂದ ಬರುವ ಜನರನ್ನು ತಡೆಯಲು ಹೀಗೆ ಮಾಡಿದನು. ಇದು ನೆಬೂಕದ್ನೆಚ್ಚರನ ಆಳ್ವಿಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹತ್ತನೆಯ ದಿನದಂದು ಸಂಭವಿಸಿತು.
ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ನಾಶಮಾಡಲು ಬಾಬಿಲೋನಿನ ಅರಸನನ್ನು ಕಳುಹಿಸಿದನು. ಬಾಬಿಲೋನಿನ ಅರಸನು ದೇವಾಲಯದೊಳಗಿದ್ದ ಯುವಜನರನ್ನು ಕೊಂದುಹಾಕಿದನು. ಅವನಿಗೆ ಯೆಹೂದದ ಮತ್ತು ಜೆರುಸಲೇಮಿನ ಜನರ ಮೇಲೆ ಕರುಣೆಯೇ ಇರಲಿಲ್ಲ. ಅವನು ಚಿಕ್ಕವರನ್ನೂ ದೊಡ್ಡವರನ್ನೂ ಗಂಡಸರನ್ನೂ ಹೆಂಗಸರನ್ನೂ ಬಿಡದೆ ಸಂಹರಿಸಿದನು. ರೋಗಿಗಳನ್ನೂ ಆರೋಗ್ಯವಂತರನ್ನೂ ಸಂಹರಿಸಿದನು; ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ಶಿಕ್ಷಿಸಲು ದೇವರು ನೆಬೂಕದ್ನೆಚ್ಚರನನ್ನು ಉಪಯೋಗಿಸಿದನು.