Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 25:9 - ಪರಿಶುದ್ದ ಬೈಬಲ್‌

9 ನೆಬೂಜರದಾನನು ದೇವಾಲಯವನ್ನೂ ರಾಜನ ಅರಮನೆಯನ್ನೂ ಜೆರುಸಲೇಮಿನಲ್ಲಿದ್ದ ಮನೆಗಳನ್ನೆಲ್ಲಾ ಸುಟ್ಟುಹಾಕಿದನು. ಅವನು ಮಹಾಸೌಧಗಳನ್ನು ನಾಶಗೊಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವನು ಯೆಹೋವನ ಆಲಯವನ್ನೂ, ಅರಸನ ಅರಮನೆಯನ್ನೂ ಯೆರೂಸಲೇಮಿನ ಎಲ್ಲಾ ದೊಡ್ಡ ಮನೆಗಳನ್ನೂ ಹಾಗೂ ಪಟ್ಟಣದ ಮುಖ್ಯ ಕಟ್ಟಡಗಳನ್ನೂ ಸುಟ್ಟುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಸರ್ವೇಶ್ವರನ ಆಲಯವನ್ನೂ ಅರಮನೆಯನ್ನೂ ಜೆರುಸಲೇಮಿನ ಎಲ್ಲ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯೆಹೋವನ ಆಲಯವನ್ನೂ ಅರಮನೆಯನ್ನೂ ಯೆರೂಸಲೇವಿುನ ಎಲ್ಲಾ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯೆಹೋವ ದೇವರ ಆಲಯವನ್ನೂ, ಅರಮನೆಯನ್ನೂ, ಯೆರೂಸಲೇಮಿನಲ್ಲಿರುವ ಸಮಸ್ತ ಮನೆಗಳನ್ನೂ, ಪ್ರತಿ ದೊಡ್ಡಮನುಷ್ಯರ ಮನೆಗಳನ್ನೂ ಬೆಂಕಿಯಿಂದ ಸುಟ್ಟುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 25:9
30 ತಿಳಿವುಗಳ ಹೋಲಿಕೆ  

ಆದ್ದರಿಂದ ನಾನು ಯೆಹೂದದಲ್ಲಿ ಬೆಂಕಿಯನ್ನು ಹಚ್ಚುವೆನು; ಆ ಬೆಂಕಿಯು ಜೆರುಸಲೇಮಿನ ಉನ್ನತ ಬುರುಜುಗಳನ್ನು ನಾಶಮಾಡುವದು.”


ನಾಯಕರೇ, ನಿಮ್ಮಿಂದಾಗಿ ಚೀಯೋನ್ ನಾಶವಾಗುವದು. ನೇಗಿಲಿನಿಂದ ಉತ್ತಲ್ಪಟ್ಟ ಹೊಲದಂತೆ ಅದು ಇರುವದು. ಜೆರುಸಲೇಮ್ ಕಲ್ಲಿನ ರಾಶಿಯಾಗುವದು. ಆಲಯದ ಗುಡ್ಡವು ಬರಿದಾದ ಬೆಟ್ಟವಾಗುವುದು. ಅದರ ಮೇಲೆ ಪೊದೆಗಳು ಹುಲುಸಾಗಿ ಬೆಳೆದುಕೊಳ್ಳುವವು.


ದೇವರೇ, ಅನ್ಯ ಜನಾಂಗಗಳು ನಿನ್ನ ಜನರಿಗೆ ಮುತ್ತಿಗೆ ಹಾಕಿದ್ದಾರೆ. ಅವರು ನಿನ್ನ ಪವಿತ್ರಾಲಯವನ್ನು ಹೊಲಸು ಮಾಡಿದರು; ಜೆರುಸಲೇಮನ್ನು ನಾಶ ಮಾಡಿದರು.


ನೆಬೂಕದ್ನೆಚ್ಚರನು ಮತ್ತು ಅವನ ಸೈನಿಕರು ದೇವಾಲಯವನ್ನು ಸುಟ್ಟುಹಾಕಿದರು; ಜೆರುಸಲೇಮ್ ಪಟ್ಟಣದ ಪೌಳಿಗೋಡೆಯನ್ನು ಕೆಡವಿಹಾಕಿದರು; ಅರಸನ ಮತ್ತು ಅವನ ಪರಿವಾರದವರ ಮನೆಗಳನ್ನೆಲ್ಲಾ ಸುಟ್ಟುಹಾಕಿದರು. ಜೆರುಸಲೇಮಿನಲ್ಲಿದ್ದ ಬೆಲೆಬಾಳುವ ವಸ್ತುಗಳನ್ನೆಲ್ಲಾ ದೋಚಿದರು ಮತ್ತು ಸುಟ್ಟುಹಾಕಿದರು;


ಈ ಆಲಯವನ್ನು ನಾಶಗೊಳಿಸುತ್ತೇನೆ. ಇದನ್ನು ನೋಡುವ ಪ್ರತಿಯೊಬ್ಬರೂ ವಿಸ್ಮಿತರಾಗುವರು. ‘ಈ ದೇಶಕ್ಕೂ ಈ ಆಲಯಕ್ಕೂ ಇಂತಹ ಭೀಕರ ಕಾರ್ಯವನ್ನು ಯೆಹೋವನು ಏಕೆ ಮಾಡಿದನು?’ ಎಂದು ಜನರು ಕೇಳುತ್ತಾರೆ.


ನೆಬೂಜರದಾನನು ಯೆಹೋವನ ಆಲಯವನ್ನು ಸುಟ್ಟನು. ಅವನು ಜೆರುಸಲೇಮಿನಲ್ಲಿದ್ದ ಅರಮನೆಯನ್ನು ಮತ್ತು ಉಳಿದೆಲ್ಲ ಮನೆಗಳನ್ನು ಸುಟ್ಟುಬಿಟ್ಟನು. ಅವನು ಜೆರುಸಲೇಮಿನ ಎಲ್ಲಾ ಮುಖ್ಯ ಕಟ್ಟಡಗಳನ್ನು ಸುಟ್ಟುಹಾಕಿದನು.


ಜೆರುಸಲೇಮಿನ ಜನರೇ, ನಿಮ್ಮ ಮೇಲೆ ಧಾಳಿ ಮಾಡುವ ಬಾಬಿಲೋನಿನ ಎಲ್ಲಾ ಸೈನಿಕರನ್ನು ನೀವು ಸೋಲಿಸಿದರೂ ಅವರ ಗುಡಾರದಲ್ಲಿ ಕೆಲವು ಜನ ಗಾಯಗೊಂಡವರು ಉಳಿದಿರುತ್ತಾರೆ. ಆ ಗಾಯಾಳುಗಳೇ ತಮ್ಮ ಗುಡಾರದಿಂದ ಹೊರಬಂದು ಜೆರುಸಲೇಮನ್ನು ಸುಟ್ಟುಹಾಕುವರು.’”


ಬಳಿಕ ಬಾಬಿಲೋನಿನ ಸೈನ್ಯವು ಇಲ್ಲಿಗೆ ಬರುವುದು. ಅವರು ಜೆರುಸಲೇಮಿನ ಮೇಲೆ ಧಾಳಿ ಮಾಡುವರು. ಆಗ ಬಾಬಿಲೋನಿನ ಆ ಸೈನ್ಯವು ಜೆರುಸಲೇಮನ್ನು ವಶಪಡಿಸಿಕೊಂಡು ಅದನ್ನು ಸುಟ್ಟುಹಾಕುವುದು.’


ಬಾಬಿಲೋನಿನ ಸೈನ್ಯವು ಜೆರುಸಲೇಮಿಗೆ ಬರಬೇಕೆಂದು ನಾನು ಆಜ್ಞಾಪಿಸುತ್ತೇನೆ.’ ಇದು ಯೆಹೋವನ ನುಡಿ. ‘ಆ ಸೈನ್ಯವು ಜೆರುಸಲೇಮಿನ ವಿರುದ್ಧ ಹೋರಾಡುವುದು. ಅವರು ಅದನ್ನು ಸ್ವಾಧೀನಪಡಿಸಿಕೊಳ್ಳುವರು ಮತ್ತು ಅದಕ್ಕೆ ಬೆಂಕಿಯಿಟ್ಟು ಸುಟ್ಟುಬಿಡುವರು. ನಾನು ಯೆಹೂದ ಪ್ರದೇಶದ ನಗರಗಳನ್ನು ನಾಶಮಾಡುವೆನು. ಆ ನಗರಗಳು ಬರಿದಾದ ಮರುಭೂಮಿಗಳಾಗುವವು. ಅಲ್ಲಿ ಯಾರೂ ವಾಸಮಾಡಲಾರರು.’”


ಯೆಹೋವನು ತನ್ನ ಯಜ್ಞವೇದಿಕೆಯನ್ನು ತಿರಸ್ಕರಿಸಿದ್ದಾನೆ. ಆತನು ತನ್ನ ಪವಿತ್ರಾಲಯವನ್ನು ತಿರಸ್ಕರಿಸಿದ್ದಾನೆ. ಆತನು ಜೆರುಸಲೇಮಿನ ಅರಮನೆಗಳ ಗೋಡೆಗಳನ್ನು ಶತ್ರುಗಳ ವಶಮಾಡಿದ್ದಾನೆ. ವೈರಿಗಳು ಯೆಹೋವನ ಪವಿತ್ರ ಆಲಯದಲ್ಲಿ ಗದ್ದಲವನ್ನು ಮಾಡಿದರು. ಅವರು ಉತ್ಸವದ ದಿನದಂತೆ ಗದ್ದಲವನ್ನು ಮಾಡಿದರು.


ಶತ್ರು ತನ್ನ ಕೈಗಳನ್ನು ಚಾಚಿದನು. ಅವಳ ಎಲ್ಲ ಅಮೂಲ್ಯ ವಸ್ತುಗಳನ್ನು ತೆಗೆದುಕೊಂಡನು. ಯೆಹೋವನೇ, ಆ ಜನರು ನಿನ್ನ ಸಭೆಯನ್ನು ಪ್ರವೇಶಿಸಬಾರದೆಂದು ನೀನು ಆಜ್ಞಾಪಿಸಿದ್ದರೂ ಪರಕೀಯರು ತನ್ನ ಪವಿತ್ರಾಲಯವನ್ನು ಪ್ರವೇಶಿಸುವದನ್ನು ಅವಳು ನೋಡಬೇಕಾಯಿತು.


ಬಾಬಿಲೋನಿನ ಸೈನಿಕರು ಅರಮನೆಗೂ ಮತ್ತು ಜೆರುಸಲೇಮಿನ ಉಳಿದ ನಿವಾಸಿಗಳ ಮನೆಗಳಿಗೂ ಬೆಂಕಿಯಿಟ್ಟರು. ಜೆರುಸಲೇಮಿನ ಗೋಡೆಗಳನ್ನು ಕೆಡವಿದರು.


ಯೆಹೋವನ ಹೆಸರಿನಲ್ಲಿ ಹಾಗೆ ಪ್ರವಾದಿಸಲು ನಿನಗೆ ಹೇಗೆ ಧೈರ್ಯ ಬಂದಿತು? ಶಿಲೋವಿನಂತೆ ಯೆಹೋವನ ಈ ಆಲಯವು ಹಾಳಾಗುವದೆಂದು ಹೇಳಲು ನಿನಗೆ ಹೇಗೆ ಧೈರ್ಯ ಬಂದಿತು? ಜೆರುಸಲೇಮು ಜನರಿಲ್ಲದ ಒಂದು ಮರುಭೂಮಿಯಾಗುವುದೆಂದು ಹೇಳಲು ನಿನಗೆ ಹೇಗೆ ಧೈರ್ಯ ಬಂದಿತು?” ಎಂದು ಕೇಳಿದರು. ಯೆಹೋವನ ಆಲಯದಲ್ಲಿ ಎಲ್ಲಾ ಜನರು ಯೆರೆಮೀಯನನ್ನು ಮುತ್ತಿದರು.


ಆದ್ದರಿಂದ ನನ್ನ ಹೆಸರನ್ನು ಹೊಂದಿರುವ ಆಲಯವನ್ನೂ ನೀವು ನಂಬಿರುವ ಆಲಯವನ್ನೂ ನಿಮ್ಮ ಪೂರ್ವಿಕರಿಗೆ ನಾನು ಕೊಟ್ಟಿರುವ ಸ್ಥಳವನ್ನೂ ನಾನು ಶೀಲೋವಿಗೆ ಮಾಡಿದಂತೆ ಮಾಡುವೆನು.


“‘ನೀವು ನನ್ನ ಮಾತನ್ನು ಕೇಳದಿದ್ದರೆ ಮತ್ತು ನನ್ನ ಆಜ್ಞೆಯನ್ನು ಪಾಲಿಸದಿದ್ದರೆ ಕೇಡಾಗುವುದು. ಸಬ್ಬತ್‌ದಿನದಲ್ಲಿ ಹೊರೆಗಳನ್ನು ಹೊತ್ತುಕೊಂಡು ಜೆರುಸಲೇಮಿಗೆ ಹೋದರೆ ನೀವು ಆ ದಿನವನ್ನು ಪವಿತ್ರದಿನವೆಂದು ಆಚರಿಸಿದಂತೆ ಆಗುವುದಿಲ್ಲ. ಆಗ ನಾನು ನಂದಿಸಲಾಗದ ಬೆಂಕಿಯನ್ನು ಹೊತ್ತಿಸುತ್ತೇನೆ. ಆ ಬೆಂಕಿಯು ಜೆರುಸಲೇಮಿನ ದ್ವಾರಗಳಲ್ಲಿ ಪ್ರಾರಂಭವಾಗಿ ಅರಮನೆಗಳನ್ನು ಸುಡುವವರೆಗೂ ಉರಿಯುತ್ತಿರುವುದು.’”


ಬಳಿಕ, ಅನೇಕ ಸ್ತ್ರೀಯರು ನೋಡಲೆಂದು ನಿನ್ನ ಮನೆಗಳನ್ನು ಸುಟ್ಟು, ನಿನ್ನನ್ನು ದಂಡಿಸುವರು. ನೀನು ಸೂಳೆಯಂತೆ ಜೀವಿಸುವದನ್ನು ನಾನು ನಿಲ್ಲಿಸುವೆನು. ನೀನು ನಿನ್ನ ಪ್ರಿಯತಮರಿಗೆ ಹಣ ಕೊಡುವದನ್ನು ನಿಲ್ಲಿಸುತ್ತೇನೆ.


ನೋಡು, ಯೆಹೋವನು ಆಜ್ಞೆಯನ್ನು ಕೊಡುವನು. ಆಗ ಭವ್ಯಭವನಗಳು ಒಡೆದು ಚೂರುಚೂರಾಗಿ ಬೀಳುವವು. ಮತ್ತು ಸಣ್ಣ ಮನೆಗಳು ಚಿಂದಿಚಿಂದಿಯಾಗಿ ಚೂರಾಗುವವು.


ನಾನು ನಿಮ್ಮ ಪಟ್ಟಣಗಳನ್ನು ನಾಶಮಾಡುವೆ. ನಿಮ್ಮ ಪವಿತ್ರಸ್ಥಳಗಳನ್ನು ಬರಿದುಮಾಡುವೆ. ನಿಮ್ಮ ಯಜ್ಞಗಳ ಸುವಾಸನೆಯನ್ನು ನಾನು ಮೂಸಿ ನೋಡುವುದಿಲ್ಲ.


ನಾನು ನಿಮ್ಮನ್ನು ಜನಾಂಗಗಳ ಮಧ್ಯದಲ್ಲಿ ಚದರಿಸಿಬಿಡುವೆನು. ಕತ್ತಿಯನ್ನು ಇರಿದು ನಿಮ್ಮನ್ನು ನಾಶಮಾಡುವೆ. ನಿಮ್ಮ ಭೂಮಿ ಬರಿದಾಗುವುದು ಮತ್ತು ನಿಮ್ಮ ಪಟ್ಟಣಗಳು ನಾಶವಾಗುವವು.


ನಮ್ಮ ಪೂರ್ವಿಕರು ಪರಲೋಕದ ನಮ್ಮ ದೇವರನ್ನು ಸಿಟ್ಟಿಗೆಬ್ಬಿಸಿದರು. ಆಗ ಆತನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಗೆ ನಮ್ಮ ಪೂರ್ವಿಕರನ್ನು ಕೊಟ್ಟುಬಿಟ್ಟನು. ನೆಬೂಕದ್ನೆಚ್ಚರನು ದೇವಾಲಯವನ್ನು ಹಾಳುಗೆಡವಿ ಜನರನ್ನು ಬಲವಂತದಿಂದ ಸೆರೆಯಾಗಿ ಬಾಬಿಲೋನಿಗೆ ಒಯ್ದನು.


ಯೆಹೋವನೇ, ನಮ್ಮ ಮೇಲೆ ಸಿಟ್ಟಿನಿಂದಲೇ ಇರಬೇಡ. ನಮ್ಮ ಪಾಪಗಳನ್ನು ನಿನ್ನ ನೆನಪಿನಲ್ಲಿಟ್ಟುಕೊಂಡೇ ಇರಬೇಡ. ದಯಮಾಡಿ ನಮ್ಮ ಕಡೆಗೆ ನೋಡು. ನಾವು ನಿನ್ನ ಜನರೇ.


ಆ ಸಂದೇಶ ಹೀಗಿತ್ತು: “ಇಸ್ರೇಲಿನ ದೇವರಾದ ಯೆಹೋವನು ಹೀಗೆ ಹೇಳುತ್ತಾನೆ: ಯೆರೆಮೀಯನೇ, ಯೆಹೂದದ ರಾಜನಾದ ಚಿದ್ಕೀಯನ ಬಳಿಗೆ ಹೋಗಿ ಅವನಿಗೆ ಈ ಸಂದೇಶವನ್ನು ತಿಳಿಸು. ‘ಚಿದ್ಕೀಯನೇ, ಯೆಹೋವನು ಹೀಗೆ ಹೇಳುತ್ತಾನೆ: ಅತಿ ಶೀಬ್ರದಲ್ಲಿ ನಾನು ಜೆರುಸಲೇಮ್ ನಗರವನ್ನು ಬಾಬಿಲೋನಿನ ರಾಜನಿಗೆ ಒಪ್ಪಿಸುತ್ತೇನೆ; ಅವನು ಅದನ್ನು ಸುಟ್ಟುಬಿಡುತ್ತಾನೆ.


ಚೀಯೋನ್ ಪರ್ವತವು ನಿರ್ಜನ ಪ್ರದೇಶವಾಗಿದೆ. ಚೀಯೋನ್ ಪರ್ವತದ ಸುತ್ತಮುತ್ತಲೆಲ್ಲ ನರಿಗಳು ಓಡಾಡುತ್ತವೆ.


ಆಗ ಸಿಂಹಾಸನದಲ್ಲಿ ಕೂತಿದ್ದಾತನು ನಾರುಮಡಿ ಧರಿಸಿದ್ದವನಿಗೆ, “ಕೆರೂಬಿದೂತರ ಕೆಳಗಿರುವ ಚಕ್ರಗಳ ನಡುವೆ ಹೋಗು. ಕೆರೂಬಿಗಳ ನಡುವೆ ಇರುವ ಉರಿಯುವ ಕೆಂಡಗಳನ್ನು ನಿನ್ನ ಅಂಗೈಗಳಲ್ಲಿ ತುಂಬಿಕೊಂಡು ಜೆರುಸಲೇಮ್ ನಗರದ ಮೇಲೆ ಹರಡು” ಎಂದು ಹೇಳಿದನು. ನಾನು ನೋಡುತ್ತಿರಲು ಆ ಮನುಷ್ಯನು ಒಳಗೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು