Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 3:1 - ಪರಿಶುದ್ದ ಬೈಬಲ್‌

1 ಅಹಾಬನ ಮಗನಾದ ಯೋರಾಮನು ಸಮಾರ್ಯದಲ್ಲಿ ಇಸ್ರೇಲಿನ ರಾಜನಾದನು. ಯೆಹೋಷಾಫಾಟನ ಹದಿನೆಂಟನೆಯ ವರ್ಷದ ಆಳ್ವಿಕೆಯಲ್ಲಿ ಯೋರಾಮನು ಯೆಹೂದದ ರಾಜನಾಗಿ ಆಳಲಾರಂಭಿಸಿದನು. ಯೋರಾಮನು ಹನ್ನೆರಡು ವರ್ಷ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೂದ್ಯರ ಅರಸನಾದ ಯೆಹೋಷಾಫಾಟನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಹಾಬನ ಮಗನಾದ ಯೋರಾಮನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಹನ್ನೆರಡು ವರ್ಷ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಯೆಹೂದ್ಯರ ಅರಸನಾದ ಯೆಹೋಷಾಫಾಟನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಹಾಬನ ಮಗನಾದ ಯೋರಾಮನು ಇಸ್ರಯೇಲರ ಅರಸನಾಗಿ ಸಮಾರಿಯದಲ್ಲಿ ಹನ್ನೆರಡು ವರ್ಷ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೂದ್ಯರ ಅರಸನಾದ ಯೆಹೋಷಾಫಾಟನ ಆಳಿಕೆಯ ಹದಿನೆಂಟನೆಯ ವರುಷದಲ್ಲಿ ಅಹಾಬನ ಮಗನಾದ ಯೋರಾಮನು ಇಸ್ರಾಯೇಲ್ಯರ ಅರಸನಾಗಿ ಸಮಾರ್ಯದಲ್ಲಿ ಹನ್ನೆರಡು ವರುಷ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೂದದ ಅರಸನಾದ ಯೆಹೋಷಾಫಾಟನ ಹದಿನೆಂಟನೆಯ ವರ್ಷದಲ್ಲಿ, ಅಹಾಬನ ಮಗ ಯೋರಾಮನು ಸಮಾರ್ಯದಲ್ಲಿ ಇಸ್ರಾಯೇಲಿನ ಮೇಲೆ ಆಳಲು ಆರಂಭಿಸಿ, ಹನ್ನೆರಡು ವರ್ಷ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 3:1
5 ತಿಳಿವುಗಳ ಹೋಲಿಕೆ  

ಎಲೀಯನ ಮೂಲಕ ಯೆಹೋವನು ಹೇಳಿದಂತೆಯೇ ಅಹಜ್ಯನು ಸತ್ತುಹೋದನು. ಅಹಜ್ಯನಿಗೆ ಮಕ್ಕಳಿರಲಿಲ್ಲ. ಆದ್ದರಿಂದ ಅಹಜ್ಯನ ನಂತರ ಯೆಹೋರಾಮನು ಹೊಸ ರಾಜನಾದನು. ಯೆಹೋಷಾಫಾಟನ ಮಗನಾದ ಯೆಹೋರಾಮನು ಯೆಹೂದದ ರಾಜನಾಗಿದ್ದ ಎರಡನೆಯ ವರ್ಷದಲ್ಲಿ ಯೊಹೋರಾಮನು ಆಳುವುದಕ್ಕೆ ಆರಂಭಿಸಿದನು.


ಯೆಹೋಷಾಫಾಟನ ಮಗನಾದ ಯೆಹೋರಾಮನು ಯೆಹೂದದ ರಾಜನಾಗಿದ್ದನು. ಅಹಾಬನ ಮಗನಾದ ಯೋರಾಮನು ಇಸ್ರೇಲಿನ ರಾಜನಾಗಿದ್ದ ಐದನೆಯ ವರ್ಷದಲ್ಲಿ ಯೆಹೋರಾಮನು ಆಳಲಾರಂಭಿಸಿದನು.


ಅಹಜ್ಯನು ಅಹಾಬನ ಮಗ. ಯೆಹೋಷಾಫಾಟನು ಯೆಹೂದದ ರಾಜನಾಗಿದ್ದ ಹದಿನೇಳನೆಯ ವರ್ಷದಲ್ಲಿ ಅವನು ಇಸ್ರೇಲಿನ ರಾಜನಾದನು. ಅಹಜ್ಯನು ಸಮಾರ್ಯದಲ್ಲಿ ಎರಡು ವರ್ಷ ರಾಜ್ಯವಾಳಿದನು.


ಆದ್ದರಿಂದ ಇಸ್ರೇಲಿನ ರಾಜನು ಯೆಹೂದದ ಮತ್ತು ಎದೋಮಿನ ರಾಜರೊಂದಿಗೆ ಹೋದನು. ಅವರು ಏಳು ದಿನಗಳ ಕಾಲ ಪ್ರಯಾಣ ಮಾಡಿದರು. ಅವರ ಸೇನೆಗೆ ಮತ್ತು ಪ್ರಾಣಿಗಳಿಗೆ ಸಾಕಾಗುವಷ್ಟು ನೀರು ಅಲ್ಲಿ ಇರಲಿಲ್ಲ.


ಅಹಾಬನ ಕುಟುಂಬದವರ ಸಲಹೆಯ ಮೇರೆಗೆ ಅಹಜ್ಯನು ರಾಜನಾದ ಯೋರಾಮನ ಜೊತೆಯಲ್ಲಿ ಅರಾಮ್ಯರ ಅರಸನಾದ ಹಜಾಯೇಲನೊಂದಿಗೆ ಯುದ್ಧಮಾಡಲು ರಾಮೋತ್‌ಗಿಲ್ಯಾದ್ ಎಂಬ ಪಟ್ಟಣಕ್ಕೆ ಹೋದನು. ಯೋರಾಮನು ಇಸ್ರೇಲರ ಅರಸನಾದ ಅಹಾಬನ ಮಗನು. ಅರಾಮ್ಯರು ಯುದ್ಧದಲ್ಲಿ ಯೋರಾಮನನ್ನು ಗಾಯಗೊಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು