2 ಅರಸುಗಳು 3:11 - ಪರಿಶುದ್ದ ಬೈಬಲ್11 ಆದರೆ ಯೆಹೋಷಾಫಾಟನು, “ಯೆಹೋವನ ಪ್ರವಾದಿಗಳಲ್ಲಿ ನಿಜವಾಗಿಯೂ ಯಾರಾದರೊಬ್ಬರು ಇಲ್ಲಿರಬೇಕು. ನಾವೇನು ಮಾಡಬೇಕೆಂದು ಯೆಹೋವನು ಹೇಳುತ್ತಾನೆ. ಅದಕ್ಕಾಗಿ ನಾವು ಆ ಪ್ರವಾದಿಯನ್ನು ಕೇಳೋಣ” ಎಂದು ಹೇಳಿದನು. ಇಸ್ರೇಲಿನ ರಾಜನ ಸೇವಕರಲ್ಲಿ ಒಬ್ಬನು, “ಶಾಫಾಟನ ಮಗನಾದ ಎಲೀಷನು ಇಲ್ಲಿಯೇ ಇದ್ದಾನೆ. ಎಲೀಷನು ಎಲೀಯನ ಸೇವಕನಾಗಿದ್ದನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆದರೆ ಯೆಹೋಷಾಫಾಟನು, “ಯೆಹೋವನ ಸನ್ನಿಧಿಯಲ್ಲಿ ನಮಗೋಸ್ಕರ ವಿಚಾರಿಸಬಲ್ಲವನಾದ ಒಬ್ಬ ಪ್ರವಾದಿಯು ಇಲ್ಲಿ ಇಲ್ಲವೇ?” ಎಂದು ಕೇಳಿದನು. ಆಗ ಇಸ್ರಾಯೇಲರ ಅರಸನ ಸೇವಕರಲ್ಲೊಬ್ಬನು ಅವನಿಗೆ, “ಶಾಫಾಟನ ಮಗನು, ಎಲೀಯನ ಕೈಗೆ ನೀರು ಕೊಡುತ್ತಿದ್ದವನೂ ಆದ ಎಲೀಷನೆಂಬ ಪ್ರವಾದಿಯು ಇಲ್ಲಿರುತ್ತಾನೆ” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆದರೆ ಯೆಹೋಷಾಫಾಟನು, “ಸರ್ವೇಶ್ವರನ ಸನ್ನಿಧಿಯಲ್ಲಿ ನಮ್ಮ ಪರವಾಗಿ ವಿಚಾರಿಸಬಲ್ಲ ಪ್ರವಾದಿ ಇಲ್ಲಿ ಯಾರೂ ಇಲ್ಲವೇ?” ಎಂದು ಕೇಳಿದನು. ಆಗ ಇಸ್ರಯೇಲ್ ಅರಸನ ಸೇವಕರಲ್ಲೊಬ್ಬನು, “ಶಾಫಾಟನ ಮಗನೂ ಎಲೀಯನ ಕೈಗೆ ನೀರು ಕೊಡುತ್ತಿದ್ದವನೂ ಆದ ಎಲೀಷನೆಂಬ ಪ್ರವಾದಿ ಇಲ್ಲಿರುತ್ತಾನೆ,” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆದರೆ ಯೇಹೋಷಾಫಾಟನು - ಯೆಹೋವನ ಸನ್ನಿಧಿಯಲ್ಲಿ ನಮಗೋಸ್ಕರ ವಿಚಾರಿಸಬಲ್ಲವನಾದ ಒಬ್ಬ ಪ್ರವಾದಿಯು ಇಲ್ಲಿರುವದಿಲ್ಲವೋ ಎಂದು ಕೇಳಿದನು. ಆಗ ಇಸ್ರಾಯೇಲ್ಯರ ಅರಸನ ಸೇವಕರಲ್ಲೊಬ್ಬನು ಅವನಿಗೆ - ಶಾಫಾಟನ ಮಗನೂ ಎಲೀಯನ ಕೈಗೆ ನೀರು ಕೊಡುತ್ತಿದ್ದವನೂ ಆದ ಎಲೀಷನೆಂಬ ಪ್ರವಾದಿಯು ಇಲ್ಲಿರುತ್ತಾನೆ ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆದರೆ ಯೆಹೋಷಾಫಾಟನು ಪ್ರವಾದಿಯ ಮೂಲಕವಾಗಿ ಯೆಹೋವ ದೇವರನ್ನು ಕೇಳುವ ಹಾಗೆ, “ಇಲ್ಲಿ ಯೆಹೋವ ದೇವರ ಪ್ರವಾದಿಯು ಯಾವನೂ ಇಲ್ಲವೋ?” ಎಂದನು. ಆಗ ಇಸ್ರಾಯೇಲಿನ ಅರಸನ ಸೇವಕರಲ್ಲಿ ಒಬ್ಬನು ಉತ್ತರವಾಗಿ, “ಎಲೀಯನ ಕೈಗಳ ಮೇಲೆ ನೀರು ಹೊಯ್ಯುತ್ತಿದ್ದ ಶಾಫಾಟನ ಮಗ ಎಲೀಷನು ಇಲ್ಲಿದ್ದಾನೆ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |