2 ಅರಸುಗಳು 3:13 - ಪರಿಶುದ್ದ ಬೈಬಲ್13 ಎಲೀಷನು ಇಸ್ರೇಲಿನ ರಾಜನಿಗೆ, “ನನ್ನಿಂದ ನಿನಗೆ ಏನು ಬೇಕಾಗಿದೆ? ನಿನ್ನ ತಂದೆತಾಯಿಯರ ಪ್ರವಾದಿಗಳ ಬಳಿಗೆ ಹೋಗು!” ಎಂದು ಹೇಳಿದನು. ಇಸ್ರೇಲಿನ ರಾಜನು ಎಲೀಷನಿಗೆ, “ಇಲ್ಲ, ನಾವು ನಿನ್ನನ್ನು ನೋಡಲೆಂದು ಇಲ್ಲಿಗೆ ಬಂದಿದ್ದೇವೆ, ಏಕೆಂದರೆ ಯೆಹೋವನು ಮೂವರು ರಾಜರನ್ನು ಒಟ್ಟಿಗೆ ಬರಮಾಡಿ, ನಮ್ಮನ್ನು ಮೋವಾಬ್ಯರು ಸೋಲಿಸುವಂತೆ ಮಾಡಿದ್ದಾನೆ. ನಾವು ನಿನ್ನ ಸಹಾಯವನ್ನು ಬಯಸಿದ್ದೇವೆ” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಎಲೀಷನು ಇಸ್ರಾಯೇಲರ ಅರಸನಿಗೆ, “ನನಗೂ ನಿನಗೂ ಏನು ಸಂಬಂಧ? ನಿನ್ನ ತಂದೆತಾಯಿಗಳ ಪ್ರವಾದಿಗಳ ಬಳಿಗೆ ಹೋಗು” ಎಂದು ಹೇಳಿದನು. ಅದಕ್ಕೆ ಇಸ್ರಾಯೇಲರ ಅರಸನು, “ಹಾಗೆ ಹೇಳಬೇಡ, ಯೆಹೋವನು ಈ ಮೂರು ಮಂದಿ ಅರಸರಾದ ನಮ್ಮನ್ನು ಮೋವಾಬ್ಯರ ಕೈಗೆ ಒಪ್ಪಿಸುವುದಕ್ಕೋಸ್ಕರ ಇಲ್ಲಿಗೆ ಬರಮಾಡಿದನಲ್ಲವೇ?” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಎಲೀಷನು ಇಸ್ರಯೇಲರ ಅರಸನಿಗೆ, “ನನಗೂ ನಿನಗೂ ಏನು ಸಂಬಂಧ? ನಿನ್ನ ತಂದೆತಾಯಿಗಳ ಪ್ರವಾದಿಗಳ ಬಳಿಗೆ ಹೋಗು,” ಎಂದು ಹೇಳಿದನು. ಅದಕ್ಕೆ ಇಸ್ರಯೇಲರ ಅರಸನು, “ಹಾಗೆನ್ನಬೇಡಿ; ಸರ್ವೇಶ್ವರ ಈ ಮೂರು ಮಂದಿ ಅರಸರಾದ ನಮ್ಮನ್ನು ಮೋವಾಬ್ಯರ ಕೈಗೆ ಒಪ್ಪಿಸುವುದಕ್ಕಾಗಿ ಇಲ್ಲಿಗೆ ಬರಮಾಡಿದ್ದಾರೆ ಅಲ್ಲವೇ?’ ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಎಲೀಷನು ಇಸ್ರಾಯೇಲ್ಯರ ಅರಸನಿಗೆ - ನನಗೂ ನಿನಗೂ ಗೊಡವೆಯೇನು? ನಿನ್ನ ತಂದೆತಾಯಿಗಳ ಪ್ರವಾದಿಗಳ ಬಳಿಗೆ ಹೋಗು ಎಂದು ಹೇಳಿದನು. ಅದಕ್ಕೆ ಇಸ್ರಾಯೇಲ್ಯರ ಅರಸನು - ಹಾಗನ್ನಬೇಡ; ಯೆಹೋವನು ಈ ಮೂರು ಮಂದಿ ಅರಸರಾದ ನಮ್ಮನ್ನು ಮೋವಾಬ್ಯರ ಕೈಗೆ ಒಪ್ಪಿಸುವದಕ್ಕೋಸ್ಕರ ಇಲ್ಲಿಗೆ ಬರಮಾಡಿದನಲ್ಲವೋ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಎಲೀಷನು ಇಸ್ರಾಯೇಲಿನ ಅರಸನಿಗೆ, “ನಿನ್ನೊಂದಿಗೆ ನಾನೇನು ಮಾಡಬೇಕು? ನೀನು ನಿನ್ನ ತಂದೆಯ ಪ್ರವಾದಿಗಳ ಬಳಿಗೂ, ನಿನ್ನ ತಾಯಿಯ ಪ್ರವಾದಿಗಳ ಬಳಿಗೂ ಹೋಗು,” ಎಂದನು. ಇಸ್ರಾಯೇಲಿನ ಅರಸನು ಅವನಿಗೆ, “ಇಲ್ಲ, ಯೆಹೋವ ದೇವರು ಈ ಮೂರು ಮಂದಿ ಅರಸರನ್ನು ಮೋವಾಬ್ಯರ ಕೈಯಲ್ಲಿ ಒಪ್ಪಿಸಿಕೊಡುವುದಕ್ಕೆ ಒಟ್ಟಾಗಿ ಕರೆದಿದ್ದಾರಲ್ಲಾ,” ಎಂದನು. ಅಧ್ಯಾಯವನ್ನು ನೋಡಿ |