2 ಅರಸುಗಳು 3:14 - ಪರಿಶುದ್ದ ಬೈಬಲ್14 ಎಲೀಷನು, “ಸರ್ವಶಕ್ತನಾದ ಯೆಹೋವನ ಸೇವೆಯನ್ನು ಮಾಡುವವನು ನಾನು. ಯೆಹೋವನಾಣೆ, ನಾನು ನಿಜವನ್ನು ಹೇಳುತ್ತೇನೆ. ಯೆಹೂದದ ರಾಜನಾದ ಯೆಹೋಷಾಫಾಟನು ಇಲ್ಲಿ ಇಲ್ಲದಿದ್ದರೆ, ನಾನು ನಿನ್ನನ್ನು ಕಣ್ಣೆತ್ತಿಯೂ ನೋಡುತ್ತಿರಲಿಲ್ಲ; ನಿನ್ನನ್ನು ಗಮನಿಸುತ್ತಲೂ ಇರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆಗ ಎಲೀಷನು, “ನಾನು ಸೇವೆಮಾಡುತ್ತಿರುವ ಸೇನಾಧೀಶ್ವರನಾದ ಯೆಹೋವನಾಣೆ, ಯೆಹೂದ್ಯರ ಅರಸನಾದ ಯೆಹೋಷಾಫಾಟನು ನಿನ್ನ ಜೊತೆಯಲ್ಲಿರದಿದ್ದರೆ ನಾನು ನಿನ್ನನ್ನು ನೋಡುತ್ತಿರಲಿಲ್ಲ. ನಿನ್ನನ್ನು ಲಕ್ಷಿಸುತ್ತಲೂ ಇರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆಗ ಎಲೀಷನು, “ನಾನು ಸನ್ನಿಧಿಸೇವೆ ಮಾಡುತ್ತಿರುವ ಸರ್ವೇಶ್ವರನಾಣೆ, ಯೆಹೂದ್ಯರ ಅರಸನಾದ ಯೆಹೋಷಾಫಾಟನು ನಿಮ್ಮ ಜೊತೆಯಲ್ಲಿರದಿದ್ದರೆ ನಾನು ನಿಮ್ಮನ್ನು ನೋಡುತ್ತಿರಲಿಲ್ಲ; ಲಕ್ಷಿಸುತ್ತಲೂ ಇರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆಗ ಎಲೀಷನು - ನಾನು ಸನ್ನಿಧಿಸೇವೆ ಮಾಡುತ್ತಿರುವ ಸೇನಾಧೀಶ್ವರನಾದ ಯೆಹೋವನಾಣೆ, ಯೆಹೂದ್ಯರ ಅರಸನಾದ ಯೆಹೋಷಾಫಾಟನು ನಿನ್ನ ಜೊತೆಯಲ್ಲಿರದಿದ್ದರೆ ನಾನು ನಿನ್ನನ್ನು ನೋಡುತ್ತಿದ್ದಿಲ್ಲ, ಲಕ್ಷಿಸುತ್ತಿದ್ದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಎಲೀಷನು, “ನಾನು ಸನ್ನಿಧಿಸೇವೆ ಮಾಡುತ್ತಿರುವ ಸೇನಾಧೀಶ್ವರ ಯೆಹೋವ ದೇವರ ಆಣೆ, ನಿಶ್ಚಯವಾಗಿ ಯೆಹೂದದ ಅರಸನಾದ ಯೆಹೋಷಾಫಾಟನು ನಿನ್ನ ಜೊತೆಯಲ್ಲಿ ಬಂದಿರುವುದರಿಂದ ಗೌರವಿಸುತ್ತಿದ್ದೇನೆ; ಇಲ್ಲದಿದ್ದರೆ, ನಾನು ನಿನ್ನ ಕಡೆ ಸಹ ನೋಡುತ್ತಿರಲಿಲ್ಲ. ಅಧ್ಯಾಯವನ್ನು ನೋಡಿ |
ಫರಿಸಾಯರು ಯೇಸುವನ್ನು ವಂಚಿಸುವುದಕ್ಕೆ ಕೆಲವರನ್ನು ಕಳುಹಿಸಿದರು. ಅವರಲ್ಲಿ ಕೆಲವರು ಫರಿಸಾಯರ ಹಿಂಬಾಲಕರಾಗಿದ್ದರು. ಇನ್ನು ಕೆಲವರು ಯೆಹೂದ್ಯರ ರಾಜಕೀಯ ಪಂಗಡಕ್ಕೆ ಸೇರಿದವರಾಗಿದ್ದರು. ಈ ಜನರು, “ಬೋಧಕನೇ, ನೀನು ಯಥಾರ್ಥವಂತನೆಂದು ನಾವು ಬಲ್ಲೆವು. ನೀನು ದೇವರ ಮಾರ್ಗದ ಕುರಿತು ಸತ್ಯವನ್ನೇ ಬೋಧಿಸುವೆ ಎಂಬುದು ನಮಗೆ ಗೊತ್ತಿದೆ. ಬೇರೆಯವರು ನಿನ್ನ ವಿಷಯವಾಗಿ ಏನೇ ಯೋಚಿಸಿದರೂ ನೀನು ಹೆದರುವುದಿಲ್ಲ. ನೀನು ಮುಖದಾಕ್ಷಿಣ್ಯ ಮಾಡುವುದಿಲ್ಲ.