2 ಅರಸುಗಳು 3:20 - ಪರಿಶುದ್ದ ಬೈಬಲ್20 ಮುಂಜಾನೆ, ಯಜ್ಞಗಳನ್ನು ಅರ್ಪಿಸುವ ಕಾಲದಲ್ಲಿ ಎದೋಮಿನ ಕಡೆಯಿಂದ ನೀರು ಹರಿಯಲಾರಂಭಿಸಿತು ಮತ್ತು ಕಣಿವೆಯು ತುಂಬಿಕೊಂಡಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಮುಂಜಾನೆ ವೇಳೆಯಲ್ಲಿ ನೈವೇದ್ಯವನ್ನು ಸಮರ್ಪಿಸುವ ಹೊತ್ತಿನಲ್ಲಿ ಪಕ್ಕನೆ ಎದೋಮಿನ ಕಡೆಯಿಂದ ನೀರು ಬಂದು ದೇಶದಲ್ಲೆಲ್ಲಾ ತುಂಬಿಕೊಂಡಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಪ್ರಾತಃಕಾಲದ ನೈವೇದ್ಯವನ್ನು ಸಮರ್ಪಿಸುವ ಹೊತ್ತಿನಲ್ಲಿ ಫಕ್ಕನೆ ಎದೋಮಿನ ಕಡೆಯಿಂದ ನೀರು ಬಂದು ನಾಡಿನಲ್ಲೆಲ್ಲಾ ತುಂಬಿಕೊಂಡಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಪ್ರಾತಃಕಾಲನೈವೇದ್ಯವನ್ನು ಸಮರ್ಪಿಸುವ ಹೊತ್ತಿನಲ್ಲಿ ಫಕ್ಕನೆ ಎದೋವಿುನ ಕಡೆಯಿಂದ ನೀರು ಬಂದು ದೇಶದಲ್ಲೆಲ್ಲಾ ತುಂಬಿಕೊಂಡಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಉದಯದಲ್ಲಿ ಕಾಣಿಕೆಗಳನ್ನು ಅರ್ಪಿಸುತ್ತಿರುವಾಗ, ನೀರು ಎದೋಮಿನ ಮಾರ್ಗವಾಗಿ ಬಂದದ್ದರಿಂದ ದೇಶವು ನೀರಿನಿಂದ ತುಂಬಿಕೊಂಡಿತು. ಅಧ್ಯಾಯವನ್ನು ನೋಡಿ |
ಅದು ಮಧ್ಯಾಹ್ನದ ಯಜ್ಞಗಳನ್ನು ಅರ್ಪಿಸುವ ಸಮಯ. ಪ್ರವಾದಿಯಾದ ಎಲೀಯನು ಯಜ್ಞವೇದಿಕೆಯ ಹತ್ತಿರಕ್ಕೆ ಹೋಗಿ, “ಅಬ್ರಹಾಮನ, ಇಸಾಕನ ಮತ್ತು ಯಾಕೋಬನ ದೇವರಾದ ಯೆಹೋವನೇ, ನೀನು ಇಸ್ರೇಲಿನಲ್ಲಿರುವ ದೇವರೆಂಬುದನ್ನು ರುಜುವಾತುಪಡಿಸಲು ನಾನೀಗ ನಿನ್ನನ್ನು ಪ್ರಾರ್ಥಿಸುತ್ತಿದ್ದೇನೆ. ನಾನು ನಿನ್ನ ಸೇವಕನೆಂಬುದನ್ನೂ ನೀನು ನಿರೂಪಿಸು. ಈ ಕಾರ್ಯಗಳನ್ನೆಲ್ಲಾ ನಾನು ಮಾಡುವಂತೆ ನೀನು ಆಜ್ಞಾಪಿಸಿದೆ ಎನ್ನುವುದನ್ನೂ ಈ ಜನರಿಗೆ ತೋರಿಸು.