2 ಅರಸುಗಳು 3:21 - ಪರಿಶುದ್ದ ಬೈಬಲ್21 ರಾಜರುಗಳು ತಮ್ಮ ವಿರುದ್ಧ ಹೋರಾಡಲು ಬಂದಿದ್ದಾರೆಂಬುದು ಮೋವಾಬ್ಯರ ಜನರಿಗೆ ತಿಳಿಯಿತು. ಮೋವಾಬಿನ ಗಂಡಸರು ಅಂದರೆ ಯುದ್ಧಕವಚಗಳನ್ನು ಧರಿಸಿಕೊಳ್ಳಲು ಶಕ್ತರಾಗಿದ್ದ ಎಲ್ಲರು ಒಟ್ಟಾಗಿ ಸೇರಿಬಂದು (ಯುದ್ಧಕ್ಕೆ ಸಿದ್ಧರಾಗಿ) ಗಡಿಯಲ್ಲಿ ಕಾಯತೊಡಗಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅರಸರು ತಮಗೆ ವಿರುದ್ಧವಾಗಿ ಯುದ್ಧಕ್ಕೆ ಬಂದಿದ್ದಾರೆಂಬುವುದನ್ನು ಮೋವಾಬ್ಯರು ಕೇಳಿ ಆಯುಧಗಳನ್ನು ಧರಿಸಲು ಶಕ್ತರಾದ ಎಲ್ಲಾ ಯೌವನಸ್ಥರನ್ನೂ ಕೂಡಿಸಿಕೊಂಡು ತಮ್ಮ ದೇಶದ ಗಡಿಪ್ರದೇಶಕ್ಕೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಅರಸುಗಳು ತಮಗೆ ವಿರುದ್ಧ ಯುದ್ಧಕ್ಕೆ ಬಂದಿದ್ದಾರೆಂಬುದನ್ನು ಮೋವಾಬ್ಯರು ಕೇಳಿದರು. ಆಯುಧಗಳನ್ನು ಧರಿಸಲು ಶಕ್ತರಾದ ಎಲ್ಲ ಯೌವನಸ್ಥರನ್ನೂ ಪ್ರಾಯಸ್ಥರನ್ನೂ ಕೂಡಿಸಿಕೊಂಡು ತಮ್ಮ ದೇಶದ ಗಡಿಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅರಸುಗಳು ತಮಗೆ ವಿರೋಧವಾಗಿ ಯುದ್ಧಕ್ಕೆ ಬಂದಿದ್ದಾರೆಂಬದನ್ನು ಮೋವಾಬ್ಯರು ಕೇಳಿ ಆಯುಧಗಳನ್ನು ಧರಿಸಶಕ್ತರಾದ ಎಲ್ಲಾ ಯೌವನಸ್ಥರನ್ನೂ ಪ್ರಾಯಸ್ಥರನ್ನೂ ಕೂಡಿಸಿಕೊಂಡು ತಮ್ಮ ದೇಶದ ಮೇರೆಗೆ ಬಂದು ಬೆಳಿಗ್ಗೆ ಎದ್ದು ನೋಡಲು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಅರಸರು ತಮ್ಮ ಸಂಗಡ ಯುದ್ಧಮಾಡುವುದಕ್ಕೆ ಬಂದಿದ್ದಾರೆಂದು ಮೋವಾಬ್ಯರು ಕೇಳಿದಾಗ, ಅವರು ಆಯುಧ ಧರಿಸತಕ್ಕ ಪ್ರಾಯಸ್ಥರು ಮೊದಲುಗೊಂಡು, ಸಮಸ್ತರನ್ನು ಕೂಡಿಸಿಕೊಂಡು ಮೇರೆಯಲ್ಲಿ ನಿಂತರು. ಅಧ್ಯಾಯವನ್ನು ನೋಡಿ |