Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 3:22 - ಪರಿಶುದ್ದ ಬೈಬಲ್‌

22 ಮೋವಾಬಿನ ಜನರು ಅಂದು ಮುಂಜಾನೆ ನಸುಕಿನಲ್ಲೇ ಮೇಲೆದ್ದರು. ಸೂರ್ಯನ ಕಿರಣಗಳು ಕಣಿವೆಯ ನೀರಿನ ಮೇಲೆ ಹೊಳೆಯುತ್ತಿದ್ದವು. ಮೋವಾಬಿನ ಜನರಿಗೆ ಅವು ರಕ್ತದಂತೆ ಕಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಬೆಳಿಗ್ಗೆ ಎದ್ದು ನೋಡಲಾಗಿ, ಎದುರಿಗೆ ಇದ್ದ ನೀರು ಮೋವಾಬ್ಯರ ದೃಷ್ಟಿಗೆ ಬಿದ್ದಿತು. ಸೂರ್ಯಪ್ರಕಾಶದಿಂದ ಆ ನೀರು ರಕ್ತದಂತೆ ಕೆಂಪಾಗಿ ಕಾಣಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಬೆಳಿಗ್ಗೆ ಎದ್ದು ನೋಡುವಾಗ ಎದುರಿಗಿದ್ದ ನೀರು ಇವರ ದೃಷ್ಟಿಗೆ ಬಿದ್ದಿತು. ಸೂರ್ಯಪ್ರಕಾಶದಿಂದ ಆ ನೀರು ರಕ್ತದಂತೆ ಕೆಂಪಾಗಿ ಕಾಣಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಎದುರಿಗಿದ್ದ ನೀರು ಇವರ ದೃಷ್ಟಿಗೆ ಬಿದ್ದಿತು. ಸೂರ್ಯ ಪ್ರಕಾಶದಿಂದ ಆ ನೀರು ರಕ್ತದಂತೆ ಕೆಂಪಾಗಿ ಕಾಣಿಸುತ್ತಿದ್ದದರಿಂದ ಇವರು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಮೋವಾಬ್ಯರು ಉದಯಕಾಲದಲ್ಲಿ ಎದ್ದು, ಆ ನೀರಿನ ಮೇಲೆ ಸೂರ್ಯ ಪ್ರಕಾಶ ಮೂಡಿದ್ದರಿಂದ ಆಚೆಯಲ್ಲಿರುವ ಆ ನೀರು ರಕ್ತದ ಹಾಗೆ ಕೆಂಪಾಗಿರುವುದನ್ನು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 3:22
3 ತಿಳಿವುಗಳ ಹೋಲಿಕೆ  

ರಾಜರುಗಳು ತಮ್ಮ ವಿರುದ್ಧ ಹೋರಾಡಲು ಬಂದಿದ್ದಾರೆಂಬುದು ಮೋವಾಬ್ಯರ ಜನರಿಗೆ ತಿಳಿಯಿತು. ಮೋವಾಬಿನ ಗಂಡಸರು ಅಂದರೆ ಯುದ್ಧಕವಚಗಳನ್ನು ಧರಿಸಿಕೊಳ್ಳಲು ಶಕ್ತರಾಗಿದ್ದ ಎಲ್ಲರು ಒಟ್ಟಾಗಿ ಸೇರಿಬಂದು (ಯುದ್ಧಕ್ಕೆ ಸಿದ್ಧರಾಗಿ) ಗಡಿಯಲ್ಲಿ ಕಾಯತೊಡಗಿದರು.


ಮೋವಾಬಿನ ಜನರು, “ರಕ್ತದತ್ತ ನೋಡಿ! ರಾಜರುಗಳು ಪರಸ್ಪರ ಹೋರಾಡಿರಲೇಬೇಕು. ಅವರು ಒಬ್ಬರನ್ನೊಬ್ಬರು ನಾಶಗೊಳಿಸಿರಲೇಬೇಕು. ಸತ್ತಿರುವ ದೇಹಗಳಿಂದ ಬೆಲೆಬಾಳುವ ವಸ್ತುಗಳನ್ನು ದೋಚಿಕೊಳ್ಳೋಣ!” ಎಂದು ಹೇಳಿದರು.


ಅರಾಮ್ಯರ ಸೇನೆಯು ರಥಗಳ, ಕುದುರೆಗಳ ಮತ್ತು ಮಹಾಸೇನೆಯ ರಣಘೋಷವನ್ನು ಕೇಳುವಂತೆ ಯೆಹೋವನು ಮಾಡಿದ್ದನು. ಅರಾಮ್ಯ ಸೈನಿಕರು, “ಇಸ್ರೇಲಿನ ರಾಜನು, ಹಿತ್ತೀಯರಿಗೆ ಮತ್ತು ಈಜಿಪ್ಟಿನವರಿಗೆ ಹಣಕೊಟ್ಟು ನಮ್ಮ ವಿರುದ್ಧ ಹೋರಾಟಕ್ಕೆ ಬರುವಂತೆ ಮಾಡಿದ್ದಾನೆ” ಎಂದು ಮಾತನಾಡಿಕೊಂಡು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು