Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 3:25 - ಪರಿಶುದ್ದ ಬೈಬಲ್‌

25 ಇಸ್ರೇಲರು ನಗರಗಳನ್ನು ಕೆಡವಿಹಾಕಿದರು. ಅವರು ಮೋವಾಬಿನ ಪ್ರತಿಯೊಂದು ಉತ್ತಮ ತೋಟದ ಕಡೆಗೆ ಕಲ್ಲುಗಳನ್ನೆಸೆದರು. ಅವರು ನೀರಿನ ಬುಗ್ಗೆಗಳನ್ನೆಲ್ಲ ನಿಲ್ಲಿಸಿದರು. ಅವರು ಉತ್ತಮವಾದ ಮರಗಳನ್ನು ಕಡಿದು ಉರುಳಿಸಿದರು. ಇಸ್ರೇಲರು ಕೀರ್ಹರೆಷೆತ್‌ನ ಮಾರ್ಗದುದ್ದಕ್ಕೂ ಹೋರಾಟ ಮಾಡಿದರು. ಸೈನಿಕರು ಕೀರ್ಹರೆಷೆತನ್ನು ಸುತ್ತುವರಿದು ಅದಕ್ಕೂ ಮುತ್ತಿಗೆ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅವರು ದೇಶದೊಳಗೆ ನುಗ್ಗಿ ಎಲ್ಲಾ ಪಟ್ಟಣಗಳನ್ನು ನಾಶಮಾಡಿದ್ದರು. ಹೊಲಗಳನ್ನು ಕಲ್ಲುಗಳಿಂದ ತುಂಬಿಸಿದರು. ಒರತೆಗಳನ್ನು ಮುಚ್ಚಿ, ಹಣ್ಣಿನ ಮರಗಳನ್ನು ಕಡಿದುಹಾಕಿದರು. ಕೀರ್ಹರೆಷೆತ್ ಎಂಬ ಒಂದು ಮಾರ್ಗ ಉಳಿಯಿತು. ಕವಣೆಹೊಡೆಯುವವರು ಅದನ್ನು ಸುತ್ತಿಕೊಂಡು ಕಲ್ಲೆಸೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಎಲ್ಲಾ ಪಟ್ಟಣಗಳನ್ನು ಕೆಡವಿ, ಹೊಲಗಳನ್ನು ಕಲ್ಲುಗಳಿಂದ ತುಂಬಿಸಿ, ಬಾವಿಗಳನ್ನು ಮುಚ್ಚಿ, ಹಣ್ಣಿನ ಮರಗಳನ್ನು ಕಡಿದುಹಾಕಿದರು. ಕೀರ್ಹರೆಷೆತ್ ಎಂಬ ಒಂದೇ ಒಂದು ಮಾರ್ಗ ಉಳಿಯಿತು. ಕವಣೆ ಹೊಡೆಯುವವರು ಅದನ್ನೂ ಸುತ್ತಿಕೊಂಡು ಕಲ್ಲೆಸೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅವರ ದೇಶದೊಳಗೆ ನುಗ್ಗಿ ಎಲ್ಲಾ ಪಟ್ಟಣಗಳನ್ನು ಕೆಡವಿ ಹೊಲಗಳನ್ನು ಕಲ್ಲುಗಳಿಂದ ತುಂಬಿಸಿ ಬಾವಿಗಳನ್ನು ಮುಚ್ಚಿ ಹಣ್ಣಿನ ಮರಗಳನ್ನು ಕಡಿದುಹಾಕಿದರು. ಕೀರ್ಹರೆಷೆತ್ ಎಂಬ ಒಂದೇ ದುರ್ಗ ಉಳಿಯಿತು. ಕವಣೆಹೊಡೆಯುವವರು ಅದನ್ನೂ ಸುತ್ತಿಕೊಂಡು ಕಲ್ಲೆಸೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಇದಲ್ಲದೆ ಅವರು ಪಟ್ಟಣಗಳನ್ನು ಕೆಡವಿಹಾಕಿ, ಹೊಲಗಳ ಮೇಲೆ ಕಲ್ಲನ್ನು ಹಾಕಿ ತುಂಬಿಸಿ, ಬಾವಿಗಳನ್ನೆಲ್ಲಾ ಮುಚ್ಚಿ, ಸಮಸ್ತ ಉತ್ತಮವಾದ ಮರಗಳನ್ನು ಕಡಿದುಹಾಕಿದರು. ಕೀರ್ ಹರೆಷೆತ್ ನಲ್ಲಿ ಮಾತ್ರ ಅದರ ಕಲ್ಲುಗಳನ್ನು ಉಳಿಸಿಬಿಟ್ಟರು. ಆದರೆ ಕಲ್ಲೆಸೆಯುವವರು ಅದನ್ನು ಸುತ್ತಿಕೊಂಡು ಹೊಡೆದುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 3:25
16 ತಿಳಿವುಗಳ ಹೋಲಿಕೆ  

“ಮೋವಾಬಿಗಾಗಿ ನಾನು ಬಹಳ ದುಃಖಿತನಾಗಿದ್ದೇನೆ. ಸ್ಮಶಾನಯಾತ್ರೆಯ ಕಾಲದಲ್ಲಿ ಊದುವ ಕೊಳಲಿನಿಂದ ಹೊರಬರುವ ದುಃಖದ ಧ್ವನಿಯಂತೆ ನನ್ನ ಹೃದಯ ಅಳುತ್ತಿದೆ. ಕೀರ್ ಹೆರೆಸಿನ ಜನರಿಗಾಗಿ ನಾನು ದುಃಖಿಸುತ್ತೇನೆ. ಅವರ ಹಣವನ್ನು ಮತ್ತು ಸಂಪತ್ತನ್ನು ಕಿತ್ತುಕೊಳ್ಳಲಾಗಿದೆ.


ಆದ್ದರಿಂದ ನಾನು ಮೋವಾಬಿಗಾಗಿ ಗೋಳಾಡುವೆನು; ಮೋವಾಬಿನ ಪ್ರತಿಯೊಬ್ಬರಿಗಾಗಿ ಗೋಳಾಡುವೆನು. ನಾನು ಕೀರ್ ಹೆರೆಸಿನವರಿಗಾಗಿ ಪ್ರಲಾಪಿಸುವೆನು.


ಆ ಜಂಬದ ಪರಿಣಾಮವಾಗಿ ಇಡೀ ಮೋವಾಬ್ ಪ್ರದೇಶ ಸಂಕಟಕ್ಕೊಳಗಾಗುವದು. ಮೋವಾಬಿನ ಜನರೆಲ್ಲಾ ಅಳುವರು. ಜನರು ತಮಗೆ ಹಿಂದೆ ಇದ್ದದ್ದೆಲ್ಲಾ ಬೇಕು ಎನ್ನುತ್ತಾ ದುಃಖಿಸುವರು. ಕೀರ್ ಹರೆಷೆಥಿನಲ್ಲಿ ತಯಾರಿಸಿದ ಅಂಜೂರದ ತಿಂಡಿ ಪದಾರ್ಥಗಳು ತಮಗೆ ಬೇಕು ಅನ್ನುವರು.


ಪ್ರತಿಯೊಂದು ಬಲಾಢ್ಯವಾದ ನಗರವನ್ನು ಮತ್ತು ಉತ್ತಮ ನಗರವನ್ನು ನೀವು ಮುತ್ತಿಗೆ ಹಾಕುವಿರಿ. ಪ್ರತಿಯೊಂದು ಒಳ್ಳೆಯ ಮರವನ್ನೂ ನೀವು ಕಡಿದು ಉರುಳಿಸುತ್ತೀರಿ. ಎಲ್ಲಾ ನೀರಿನ ಬುಗ್ಗೆಗಳನ್ನೂ ನೀವು ನಿಲ್ಲಿಸುವಿರಿ. ನೀವು ಕಲ್ಲುಗಳನ್ನೆಸೆದು ಪ್ರತಿಯೊಂದು ಒಳ್ಳೆಯ ತೋಟವನ್ನು ನಾಶಗೊಳಿಸುತ್ತೀರಿ.”


ನಾನು ಮೋವಾಬಿಗಾಗಿ ತುಂಬಾ ದುಃಖದಲ್ಲಿದ್ದೇನೆ. ನಾನು ಕೀರ್‌ಹೆರೆಸಿಗಾಗಿಯೂ ತುಂಬಾ ದುಃಖದಲ್ಲಿದ್ದೇನೆ. ಈ ನಗರಗಳಿಗಾಗಿ ನಾನು ಬಹಳವಾಗಿ ದುಃಖದಲ್ಲಿದ್ದೇನೆ.


ಇದು ಮೋವಾಬನ್ನು ಕುರಿತ ದುಃಖಕರವಾದ ಸಂದೇಶ: ಒಂದು ರಾತ್ರಿ ಮೋವಾಬಿನ ಆರ್ ಪಟ್ಟಣದಿಂದ ಸಂಪತ್ತನ್ನು ಸೈನ್ಯವು ಸೂರೆ ಮಾಡಿತು. ಆ ರಾತ್ರಿ ನಗರವು ನಾಶಮಾಡಲ್ಪಟ್ಟಿತು. ಒಂದು ರಾತ್ರಿ ಸೈನ್ಯವು ಮೋವಾಬಿನ ಕೀರ್ ಪಟ್ಟಣದಿಂದ ಸಂಪತ್ತನ್ನು ಸೂರೆ ಮಾಡಿತು. ಆ ರಾತ್ರಿ ಪಟ್ಟಣವು ಕೆಡವಲ್ಪಟ್ಟಿತು.


ಅನೇಕ ಜನರು ಒಟ್ಟಾಗಿ ಬಂದು ದೇಶದ ಮಧ್ಯದಲ್ಲಿ ಹರಿಯುವ ಹಳ್ಳಗಳನ್ನೂ ತೊರೆಗಳನ್ನೂ ಬುಗ್ಗೆಗಳನ್ನೂ ನಿಲ್ಲಿಸಿದರು. ಅಶ್ಶೂರದ ಅರಸನು ಬಂದಾಗ ಅವನಿಗೆ ನೀರು ಸಿಗದಂತೆ ಮಾಡಿದರು.


ಮೋವಾಬಿನ ಜನರನ್ನು ಸಹ ದಾವೀದನು ಸೋಲಿಸಿದನು. ಅವರನ್ನು ನೆಲದ ಮೇಲೆ ಬಲವಂತದಿಂದ ಮಲಗಿಸಿ ಹಗ್ಗದಿಂದ ಅವರನ್ನು ಸಾಲುಸಾಲಾಗಿ ವಿಂಗಡಿಸಿದನು. ಎರಡು ಸಾಲಿನ ಗಂಡಸರನ್ನು ಕೊಲ್ಲಿಸಿದನು; ಆದರೆ ಮೂರನೆಯ ಸಾಲಿನ ಗಂಡಸರನ್ನು ಜೀವಂತವಾಗಿ ಉಳಿಸಿದನು. ಮೋವಾಬಿನ ಜನರು ದಾವೀದನ ಸೇವಕರಾದರು. ಅವರು ಅವನಿಗೆ ಕಪ್ಪಕಾಣಿಕೆಗಳನ್ನು ಅರ್ಪಿಸಿದರು.


ಆ ಇಡೀ ದಿವಸ ಅಬೀಮೆಲೆಕ ಮತ್ತು ಅವನ ಜನರು ಶೆಕೆಮಿನ ಜನರೊಂದಿಗೆ ಯುದ್ಧ ಮಾಡಿದರು. ಅಬೀಮೆಲೆಕ ಮತ್ತು ಅವನ ಜನರು ಶೆಕೆಮ್ ನಗರವನ್ನು ಸ್ವಾಧೀನಪಡಿಸಿಕೊಂಡರು; ಆ ನಗರದ ಜನರನ್ನು ಕೊಂದುಹಾಕಿದರು. ಅಬೀಮೆಲೆಕನು ಊರನ್ನು ಕೆಡವಿ ಹಾಕಿ ಉಪ್ಪನ್ನು ಚೆಲ್ಲಿದನು.


“ಯೆಹೋವನು ನನಗೆ ಹೀಗೆ ಹೇಳಿದನು: ‘ಮೋವಾಬಿನ ಜನರಿಗೆ ತೊಂದರೆ ಕೊಡಬೇಡ. ಅವರ ವಿರುದ್ಧ ಯುದ್ಧಕ್ಕೆ ಹೋಗಬೇಡ; ಅವರ ದೇಶದಲ್ಲಿ ನಿಮಗೆ ಯಾವ ಪಾಲೂ ಸಿಗದು. ಅವರು ಲೋಟನ ಸಂತತಿಯವರು. ನಾನು ಅವರಿಗೆ ಆರ್ ಪಟ್ಟಣವನ್ನು ಕೊಟ್ಟಿರುತ್ತೇನೆ.’”


ಇದಕ್ಕೂ ಬಹುಕಾಲದ ಹಿಂದೆ, ಅಬ್ರಹಾಮನು ಅನೇಕ ಬಾವಿಗಳನ್ನು ತೋಡಿಸಿದ್ದನು. ಅಬ್ರಹಾಮನು ಸತ್ತುಹೋದ ಮೇಲೆ, ಫಿಲಿಷ್ಟಿಯರು ಆ ಬಾವಿಗಳಿಗೆ ಮಣ್ಣುಹಾಕಿ ಮುಚ್ಚಿದ್ದರು. ಇಸಾಕನು ಆ ಬಾವಿಗಳನ್ನು ಮತ್ತೆ ತೋಡಿಸಿ, ತನ್ನ ತಂದೆ ಕೊಟ್ಟಿದ್ದ ಹೆಸರುಗಳನ್ನೇ ಅವುಗಳಿಗೆ ಕೊಟ್ಟನು.


ಆದ್ದರಿಂದ ಅನೇಕ ವರ್ಷಗಳ ಹಿಂದೆ ಅಬ್ರಹಾಮ ಮತ್ತು ಅವನ ಸೇವಕರು ತೋಡಿದ್ದ ಬಾವಿಗಳಿಗೆ ಫಿಲಿಷ್ಟಿಯರು ಮಣ್ಣುಹಾಕಿ ಮುಚ್ಚಿದ್ದರು.


ಮೋವಾಬಿನ ಜನರು ಇಸ್ರೇಲರ ಪಾಳೆಯಕ್ಕೆ ಬಂದರು. ಆದರೆ ಇಸ್ರೇಲರು ಹೊರಗೆ ಬಂದು ಮೋವಾಬಿನ ಸೈನ್ಯದ ಮೇಲೆ ಆಕ್ರಮಣ ಮಾಡಿದರು. ಮೋವಾಬಿನ ಜನರು ಇಸ್ರೇಲಿಯರಿಂದ ತಪ್ಪಿಸಿಕೊಂಡು ಓಡಿಹೋದರು. ಇಸ್ರೇಲರು ಮುನ್ನುಗ್ಗಿ ಮೋವಾಬಿನವರನ್ನು ಕೊಂದುಹಾಕಿದರು.


ಆ ಯುದ್ಧವು ತನ್ನ ಶಕ್ತಿಯನ್ನು ಮೀರಿ ಹೋಯಿತೆಂದು ಮೋವಾಬಿನ ರಾಜನು ಗ್ರಹಿಸಿಕೊಂಡನು. ಆದ್ದರಿಂದ ಅವನು ಎದೋಮಿನ ರಾಜನನ್ನು ಕೊಂದುಹಾಕಲು ಖಡ್ಗಗಳನ್ನು ಹಿಡಿದ ತನ್ನ ಏಳುನೂರು ಜನರೊಂದಿಗೆ ನುಗ್ಗಿಹೋಗಲು ಪ್ರಯತ್ನಿಸಿದನು. ಆದರೆ ಅವರು ಎದೋಮಿನ ರಾಜನ ಬಳಿಗೆ ನುಗ್ಗಿ ಹೋಗಲಾಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು