2 ಅರಸುಗಳು 3:26 - ಪರಿಶುದ್ದ ಬೈಬಲ್26 ಆ ಯುದ್ಧವು ತನ್ನ ಶಕ್ತಿಯನ್ನು ಮೀರಿ ಹೋಯಿತೆಂದು ಮೋವಾಬಿನ ರಾಜನು ಗ್ರಹಿಸಿಕೊಂಡನು. ಆದ್ದರಿಂದ ಅವನು ಎದೋಮಿನ ರಾಜನನ್ನು ಕೊಂದುಹಾಕಲು ಖಡ್ಗಗಳನ್ನು ಹಿಡಿದ ತನ್ನ ಏಳುನೂರು ಜನರೊಂದಿಗೆ ನುಗ್ಗಿಹೋಗಲು ಪ್ರಯತ್ನಿಸಿದನು. ಆದರೆ ಅವರು ಎದೋಮಿನ ರಾಜನ ಬಳಿಗೆ ನುಗ್ಗಿ ಹೋಗಲಾಗಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಮೋವಾಬ್ಯರ ಅರಸನು ತಾನು ಯುದ್ಧದಲ್ಲಿ ಗೆಲ್ಲಲಾರೆನೆಂದು ತಿಳಿದು, ಏಳು ನೂರು ಮಂದಿ ಭಟರೊಡನೆ, ಸೈನ್ಯದೊಳಗೆ ನುಗ್ಗಿ ಎದೋಮ್ಯರ ಅರಸನ ಕಡೆಗೆ ಹೋಗಲು ಪ್ರಯತ್ನಿಸಿದನು. ಆದರೆ ಆಗದೆಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಮೋವಾಬ್ಯರ ಅರಸನು ತಾನು ಯುದ್ಧದಲ್ಲಿ ಗೆಲ್ಲಲಾರೆನೆಂದು ತಿಳಿದು ಏಳುನೂರು ಮಂದಿ ಯೋಧರೊಡನೆ ಸೈನ್ಯದೊಳಗೆ ನುಗ್ಗಿ ಎದೋಮ್ಯರ ಅರಸನ ಕಡೆಗೆ ಹೋಗಪ್ರಯತ್ನಿಸಿದನು; ಆದರೆ ಆಗದೆ ಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಮೋವಾಬ್ಯರ ಅರಸನು ತಾನು ಯುದ್ಧದಲ್ಲಿ ಗೆಲ್ಲಲಾರೆನೆಂದು ತಿಳಿದು ಏಳು ನೂರು ಮಂದಿ ಭಟರೊಡನೆ ಸೈನ್ಯದೊಳಗೆ ನುಗ್ಗಿ ಎದೋಮ್ಯರ ಅರಸನ ಕಡೆಗೆ ಹೋಗ ಪ್ರಯತ್ನಿಸಿದನು; ಆದರೆ ಆಗದೆಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಮೋವಾಬಿನ ಅರಸನು ಯುದ್ಧವು ತನಗೆ ಅತಿ ಕಷ್ಟವಾಯಿತೆಂದು ಕಂಡಾಗ, ಎದೋಮಿನ ಅರಸನ ಮೇಲೆ ಹೋಗಿ ಬೀಳುವ ನಿಮಿತ್ತ, ಖಡ್ಗ ಹಿಡಿಯುವ ಏಳು ನೂರು ಮಂದಿಯನ್ನು ತನ್ನ ಸಂಗಡ ತೆಗೆದುಕೊಂಡನು. ಆದರೆ ಅದು ಅವರಿಂದ ಆಗದೆ ಹೋಯಿತು. ಅಧ್ಯಾಯವನ್ನು ನೋಡಿ |