2 ಅರಸುಗಳು 3:27 - ಪರಿಶುದ್ದ ಬೈಬಲ್27 ಆಗ ಮೋವಾಬಿನ ರಾಜನು, ತನ್ನ ನಂತರ ರಾಜನಾಗುವ ಹಿರಿಯ ಮಗನನ್ನು ಕರೆದೊಯ್ದನು. ಮೋವಾಬಿನ ರಾಜನು ನಗರವನ್ನು ಸುತ್ತುವರಿದಿರುವ ಗೋಡೆಯ ಮೇಲೆ ತನ್ನ ಮಗನನ್ನು ವಧಿಸಿ ಸರ್ವಾಂಗಹೋಮವನ್ನಾಗಿ ಅರ್ಪಿಸಿದನು. ಈ ಕಾರ್ಯವು ಇಸ್ರೇಲಿನ ಜನರನ್ನು ತಳಮಳಗೊಳಿಸಿತು. ಇಸ್ರೇಲಿನ ಜನರು ಮೋವಾಬಿನ ರಾಜನನ್ನು ಬಿಟ್ಟು ತಮ್ಮ ಸ್ವಂತ ದೇಶಕ್ಕೆ ಹಿಂದಿರುಗಿ ಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಆಗ ಅವನು ತನಗೆ ಬದಲಾಗಿ ಅರಸನಾಗತಕ್ಕ ತನ್ನ ಚೊಚ್ಚಲಮಗನನ್ನು ಹಿಡಿದು ವಧಿಸಿ ಗೋಡೆಯ ಮೇಲೆ ಸರ್ವಾಂಗಹೋಮ ಮಾಡಿದನು. ಇದರಿಂದ ಮೋವಾಬ್ಯರಿಗೆ ಇಸ್ರಾಯೇಲರ ಮೇಲೆ ಕೋಪೋದ್ರೇಕ ಉಂಟಾಗಲು ಅವರು ಅವನನ್ನು ಬಿಟ್ಟು ತಮ್ಮ ದೇಶಕ್ಕೆ ಹೊರಟುಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಆಗ ಅವನು ತನಗೆ ಬದಲಾಗಿ ಅರಸನಾಗತಕ್ಕ ತನ್ನ ಚೊಚ್ಚಲ ಮಗನನ್ನು ಹಿಡಿದು, ವಧಿಸಿ, ಗೋಡೆಯ ಮೇಲೆ ದಹನಬಲಿ ಮಾಡಿದನು. ಇದರಿಂದ ಮೋವಾಬ್ಯರಿಗೆ ಇಸ್ರಯೇಲರ ಮೇಲೆ ಕೋಪೋದ್ರೇಕವುಂಟಾಯಿತು. ಅವರು ಅವನನ್ನು ಬಿಟ್ಟು ತಮ್ಮ ದೇಶಕ್ಕೆ ಹೊರಟುಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಆಗ ಅವನು ತನಗೆ ಬದಲಾಗಿ ಅರಸನಾಗತಕ್ಕ ತನ್ನ ಚೊಚ್ಚಲಮಗನನ್ನು ಹಿಡಿದು ವಧಿಸಿ ಗೋಡೆಯ ಮೇಲೆ ಸರ್ವಾಂಗಹೋಮ ಮಾಡಿದನು. ಇದರಿಂದ ಮೋವಾಬ್ಯರಿಗೆ ಇಸ್ರಾಯೇಲ್ಯರ ಮೇಲೆ ಕೋಪೋದ್ರೇಕವುಂಟಾಗಲು ಅವರು ಅವನನ್ನು ಬಿಟ್ಟು ತಮ್ಮ ದೇಶಕ್ಕೆ ಹೊರಟುಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಆಗ ಮೋವಾಬಿನ ಅರಸನು ತನಗೆ ಬದಲಾಗಿ ಆಳುವುದಕ್ಕಿರುವ ತನ್ನ ಹಿರಿಯ ಮಗನನ್ನು ತೆಗೆದುಕೊಂಡು, ಅವನನ್ನು ಗೋಡೆಯ ಮೇಲೆ ದಹನಬಲಿಯಾಗಿ ಅರ್ಪಿಸಿದನು. ಮೋವಾಬ್ಯರು ಇಸ್ರಾಯೇಲರಿಗೆ ವಿರೋಧವಾಗಿ ರೋಷವುಳ್ಳವರಾಗಿ ಅವರನ್ನು ಬಿಟ್ಟು, ತಮ್ಮ ದೇಶಕ್ಕೆ ಹಿಂದಿರುಗಿ ಹೋದರು. ಅಧ್ಯಾಯವನ್ನು ನೋಡಿ |