2 ಅರಸುಗಳು 3:6 - ಪರಿಶುದ್ದ ಬೈಬಲ್6 ಆಗ ರಾಜನಾದ ಯೋರಾಮನು ಸಮಾರ್ಯದಿಂದ ಹೊರಗೆ ಹೋಗಿ, ಇಸ್ರೇಲಿನ ಜನರನ್ನೆಲ್ಲ ಒಟ್ಟುಗೂಡಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆದುದರಿಂದ ಅರಸನಾದ ಯೋರಾಮನು ಕೂಡಲೆ ಇಸ್ರಾಯೇಲರನ್ನು ಸೇರಿಸಿಕೊಂಡು ಸಮಾರ್ಯದಿಂದ ಹೊರಟು ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆದುದರಿಂದ ಅರಸನಾದ ಯೋರಾಮನು ಒಡನೆ ಇಸ್ರಯೇಲರನ್ನು ಕೂಡಿಸಿಕೊಂಡು ಸಮಾರಿಯದಿಂದ ಹೊರಟನು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆದದರಿಂದ ಅರಸನಾದ ಯೋರಾಮನು ಒಡನೆ ಇಸ್ರಾಯೇಲ್ಯರನ್ನು ಕೂಡಿಸಿಕೊಂಡು ಸಮಾರ್ಯದಿಂದ ಹೊರಟು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆ ದಿವಸದಲ್ಲಿ ಅರಸನಾದ ಯೋರಾಮನು ಸಮಾರ್ಯದಿಂದ ಹೊರಟುಹೋಗಿ ಇಸ್ರಾಯೇಲರನ್ನು ಕೂಡಿಸಿದನು. ಅಧ್ಯಾಯವನ್ನು ನೋಡಿ |
ಯೋರಾಮನು ಯೆಹೂದದ ರಾಜನಾದ ಯೆಹೋಷಾಫಾಟನ ಬಳಿಗೆ ಸಂದೇಶಕರನ್ನು ಕಳುಹಿಸಿ, “ನನ್ನ ಆಳ್ವಿಕೆಯಿಂದ ಮೋವಾಬಿನ ರಾಜನು ಬೇರ್ಪಟ್ಟಿದ್ದಾನೆ. ಮೋವಾಬಿನ ವಿರುದ್ಧ ಹೋರಾಡಲು ನನ್ನ ಜೊತೆ ಬರುವೆಯಾ?” ಎಂದು ಕೇಳಿದನು. ಯೆಹೋಷಾಫಾಟನು, “ಆಗಲಿ, ನಿನ್ನ ಜೊತೆ ನಾನೂ ಬರುತ್ತೇನೆ. ನಾನೂ ನೀನೂ ಒಂದೇ. ನನ್ನ ಜನರೂ ನಿನ್ನ ಜನರೂ ಒಂದೇ. ನನ್ನ ಕುದುರೆಗಳೂ ನಿನ್ನ ಕುದುರೆಗಳೂ ಒಂದೇ” ಎಂದು ಹೇಳಿದನು.