2 ಅರಸುಗಳು 3:8 - ಪರಿಶುದ್ದ ಬೈಬಲ್8 ಯೆಹೋಷಾಫಾಟನು ಯೋರಾಮನನ್ನು, “ನಾವು ಯಾವ ಮಾರ್ಗದಲ್ಲಿ ಹೋಗೋಣ?” ಎಂದು ಕೇಳಿದನು. “ನಾವು ಎದೋಮಿನ ಮರಳುಗಾಡಿನ ಮೂಲಕ ಹೋಗೋಣ” ಎಂದು ಯೋರಾಮನು ಉತ್ತರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಮತ್ತೆ ಯೆಹೋಷಾಫಾಟನು, “ಯಾವ ಮಾರ್ಗವಾಗಿ ಹೋಗಬೇಕು?” ಎಂದು ವಿಚಾರಿಸಿದಾಗ ಯೋರಾಮನು, “ಎದೋಮ್ಯರ ಅರಣ್ಯ ಮಾರ್ಗವಾಗಿ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅದೂ ಅಲ್ಲದೆ, “ಯಾವ ಮಾರ್ಗವಾಗಿ ಬರಬೇಕು?” ಎಂದು ವಿಚಾರಿಸಿದನು. ಅದಕ್ಕೆ ಯೋರಾಮನು ಎದೋಮ್ಯರ ಅರಣ್ಯಮಾರ್ಗವಾಗಿ ಬರಬೇಕೆಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಯಾವ ಮಾರ್ಗವಾಗಿ ಹೋಗಬೇಕೆಂದು ವಿಚಾರಿಸಿದಾಗ ಯೋರಾಮನು ಎದೋಮ್ಯರ ಅರಣ್ಯಮಾರ್ಗವಾಗಿ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಯೋರಾಮನು, “ಯಾವ ಮಾರ್ಗವಾಗಿ ಹೋಗೋಣ?” ಎಂದು ಇವನು ಕೇಳಿದನು. ಯೆಹೋಷಾಫಾಟನು, “ಎದೋಮಿನ ಮರುಭೂಮಿಯ ಮಾರ್ಗವಾಗಿ,” ಎಂದನು. ಅಧ್ಯಾಯವನ್ನು ನೋಡಿ |
ಯೋರಾಮನು ಯೆಹೂದದ ರಾಜನಾದ ಯೆಹೋಷಾಫಾಟನ ಬಳಿಗೆ ಸಂದೇಶಕರನ್ನು ಕಳುಹಿಸಿ, “ನನ್ನ ಆಳ್ವಿಕೆಯಿಂದ ಮೋವಾಬಿನ ರಾಜನು ಬೇರ್ಪಟ್ಟಿದ್ದಾನೆ. ಮೋವಾಬಿನ ವಿರುದ್ಧ ಹೋರಾಡಲು ನನ್ನ ಜೊತೆ ಬರುವೆಯಾ?” ಎಂದು ಕೇಳಿದನು. ಯೆಹೋಷಾಫಾಟನು, “ಆಗಲಿ, ನಿನ್ನ ಜೊತೆ ನಾನೂ ಬರುತ್ತೇನೆ. ನಾನೂ ನೀನೂ ಒಂದೇ. ನನ್ನ ಜನರೂ ನಿನ್ನ ಜನರೂ ಒಂದೇ. ನನ್ನ ಕುದುರೆಗಳೂ ನಿನ್ನ ಕುದುರೆಗಳೂ ಒಂದೇ” ಎಂದು ಹೇಳಿದನು.