2 ಅರಸುಗಳು 4:10 - ಪರಿಶುದ್ದ ಬೈಬಲ್10 ದಯವಿಟ್ಟು ಎಲೀಷನಿಗಾಗಿ ಮಾಳಿಗೆಯ ಮೇಲೆ ಚಿಕ್ಕದೊಂದು ಕೊಠಡಿಯನ್ನು ಕಟ್ಟೋಣ. ಆ ಕೊಠಡಿಯಲ್ಲಿ ಹಾಸಿಗೆಯೊಂದನ್ನು ಹಾಕೋಣ. ಅಲ್ಲಿ ಒಂದು ಮೇಜು, ಕುರ್ಚಿ ಮತ್ತು ದೀಪಸ್ತಂಭವನ್ನು ಇಡೋಣ. ಅವನು ನಮ್ಮ ಮನೆಗೆ ಬಂದಾಗ, ಈ ಕೊಠಡಿಯನ್ನು ತನಗಾಗಿ ಉಪಯೋಗಿಸಲಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆದುದರಿಂದ ನಾವು ಅವನಿಗಾಗಿ ಮಾಳಿಗೆಯ ಮೇಲೆ ಒಂದು ಸಣ್ಣ ಕೋಣೆಯನ್ನು ಕಟ್ಟಿಸಿ ಅದರಲ್ಲಿ ಒಂದು ಮಂಚ, ಮೇಜು, ಕುರ್ಚಿ, ದೀಪಸ್ತಂಭ ಇವುಗಳನ್ನು ಇಡೋಣ. ಅವನು ಇಲ್ಲಿ ಬಂದಾಗಲೆಲ್ಲಾ ಅದರಲ್ಲಿ ಹೋಗಿ ಉಳಿದುಕೊಳ್ಳಲಿ” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆದುದರಿಂದ ನಾವು ಅವನಿಗಾಗಿ ಮಾಳಿಗೆಯ ಮೇಲೆ ಒಂದು ಸಣ್ಣ ಕೋಣೆಯನ್ನು ಕಟ್ಟಿಸೋಣ. ಅದರಲ್ಲಿ ಒಂದು ಮಂಚ, ಮೇಜು, ಕುರ್ಚಿ, ದೀಪಸ್ತಂಭ ಇವುಗಳನ್ನು ಇಡೋಣ; ಅವನು ಇಲ್ಲಿಗೆ ಬಂದಾಗೆಲ್ಲಾ ಅದರಲ್ಲಿ ವಾಸಮಾಡಲಿ,” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆದದರಿಂದ ನಾವು ಅವನಿಗೋಸ್ಕರ ಮಾಳಿಗೆಯ ಮೇಲೆ ಒಂದು ಸಣ್ಣ ಕೋಣೆಯನ್ನು ಕಟ್ಟಿಸಿ ಅದರಲ್ಲಿ ಒಂದು ಮಂಚ, ಮೇಜು, ಕುರ್ಚಿ, ದೀಪಸ್ತಂಭ, ಇವುಗಳನ್ನು ಇಡೋಣ; ಅವನು ಇಲ್ಲಿ ಬಂದಾಗೆಲ್ಲಾ ಅದರಲ್ಲಿ ವಾಸಮಾಡಲಿ ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನಾವು ಮಾಳಿಗೆಯ ಮೇಲೆ ಒಂದು ಚಿಕ್ಕ ಕೊಠಡಿಯನ್ನು ಕಟ್ಟಿಸಿ, ಅದರಲ್ಲಿ ಅವನಿಗೋಸ್ಕರ ಮಂಚವನ್ನೂ, ಮೇಜನ್ನೂ, ಕುರ್ಚಿಯನ್ನೂ, ದೀಪವನ್ನೂ ಇಡೋಣ. ಅವನು ನಮ್ಮ ಬಳಿಗೆ ಬರುವಾಗ ಅಲ್ಲಿ ಇರಲಿ,” ಎಂದಳು. ಅಧ್ಯಾಯವನ್ನು ನೋಡಿ |