2 ಅರಸುಗಳು 4:12 - ಪರಿಶುದ್ದ ಬೈಬಲ್12 ಎಲೀಷನು ತನ್ನ ಸೇವಕನಾದ ಗೇಹಜಿಗೆ, “ಶೂನೇಮ್ಯಳಾದ ಆ ಸ್ತ್ರೀಯನ್ನು ಕರೆದುಕೊಂಡು ಬಾ” ಎಂದು ಹೇಳಿದನು. ಸೇವಕನು ಶೂನೇಮ್ಯಳಾದ ಆ ಸ್ತ್ರೀಯನ್ನು ಕರೆದುಕೊಂಡು ಬಂದಾಗ ಆಕೆಯು ಎಲೀಷನ ಎದುರಿನಲ್ಲಿ ನಿಂತುಕೊಂಡಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅನಂತರ, “ಆ ಶೂನೇಮ್ಯಳನ್ನು ಕರೆಯಿರಿ” ಎಂದು ತನ್ನ ಸೇವಕನಾದ ಗೇಹಜಿಗೆ ಆಜ್ಞಾಪಿಸಿದನು. ಅವನು ಹೋಗಿ ಆಕೆಯನ್ನು ಕರೆಯಲು, ಆಕೆಯು ಬಂದು ಅವನ ಮುಂದೆ ನಿಂತಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅನಂತರ ಆ ಶೂನೇಮ್ಯಳನ್ನು ಕರೆಯಬೇಕೆಂದು ತನ್ನ ಸೇವಕನಾದ ಗೇಹಜಿಗೆ ಆಜ್ಞಾಪಿಸಿದನು. ಅವನು ಹೋಗಿ ಆಕೆಯನ್ನು ಕರೆಯಲು ಆಕೆ ಬಂದು ಮುಂದೆ ನಿಂತಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆ ಶೂನೇಮ್ಯಳನ್ನು ಕರೆಯಬೇಕೆಂದು ತನ್ನ ಸೇವಕನಾದ ಗೇಹಜಿಗೆ ಆಜ್ಞಾಪಿಸಿದನು. ಅವನು ಹೋಗಿ ಆಕೆಯನ್ನು ಕರೆಯಲು ಆಕೆಯು ಬಂದು ಮುಂದೆ ನಿಂತಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆಗ ಎಲೀಷನು ತನ್ನ ಸೇವಕನಾದ ಗೇಹಜಿಗೆ, “ನೀನು ಶೂನೇಮ್ಯಳನ್ನು ಕರೆ,” ಎಂದನು. ಅವನು ಅವಳನ್ನು ಕರೆದದ್ದರಿಂದ ಅವಳು ಎಲೀಷನ ಮುಂದೆ ಬಂದು ನಿಂತಳು. ಅಧ್ಯಾಯವನ್ನು ನೋಡಿ |
ಎಲೀಷನು ಗೇಹಜಿಗೆ (ಸೇವಕನಿಗೆ), “ನೀನು ಆ ಸ್ತ್ರೀಯ ಬಳಿಗೆ ಹೋಗಿ, ‘ನೋಡು, ನೀನು ನಮ್ಮನ್ನು ಉಪಚರಿಸುವುದಕ್ಕಾಗಿ ನಿನ್ನಿಂದ ಸಾಧ್ಯವಾದಷ್ಟು ಮಾಡಿರುವೆ. ನಮ್ಮಿಂದ ನಿನಗೇನಾದರೂ ಉಪಕಾರವಾಗಬೇಕೇ? ನಿನ್ನ ಬಗ್ಗೆ ರಾಜನ ಬಳಿಯಲ್ಲಾದರೂ ಅಥವಾ ಸೈನ್ಯಾಧಿಕಾರಿಯ ಬಳಿಯಲ್ಲಾದರೂ ನಾವು ಮಾತನಾಡಬೇಕೇ?’ ಎಂದು ಕೇಳು” ಎಂಬುದಾಗಿ ಹೇಳಿದನು. ಆ ಸ್ತ್ರೀಯು, “ಇಲ್ಲಿ ನಾನು ನನ್ನ ಜನರೊಡನೆ ಸುಖವಾಗಿ ಜೀವಿಸುತ್ತಿದ್ದೇನೆ” ಎಂದು ಉತ್ತರಿಸಿದಳು.