2 ಅರಸುಗಳು 4:14 - ಪರಿಶುದ್ದ ಬೈಬಲ್14 ಎಲೀಷನು ಗೇಹಜಿಗೆ, “ನಾನು ಅವಳಿಗೆ ಏನು ಮಾಡಲಿ?” ಎಂದು ಕೇಳಿದನು. ಗೇಹಜಿಯು, “ನನಗೆ ತಿಳಿದಿದೆ! ಅವಳಿಗೆ ಮಕ್ಕಳಿಲ್ಲ, ಅವಳ ಗಂಡ ಮುದುಕನಾಗಿದ್ದಾನೆ” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆ ಮೇಲೆ ಎಲೀಷನು ಗೇಹಜಿಗೆ, “ನಾವು ಆಕೆಗೆ ಯಾವ ಉಪಕಾರವನ್ನು ಮಾಡಬಹುದು” ಎಂದು ಕೇಳಲು ಅವನು, “ಆಕೆಗೆ ಮಗನಿಲ್ಲ, ಗಂಡನು ಮುದುಕನಾಗಿದ್ದಾನೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆಮೇಲೆ ಎಲೀಷನು ಗೇಹಜಿಯನ್ನು, “ನಾವು ಆಕೆಗೆ ಯಾವ ಉಪಕಾರ ಮಾಡಬಹುದು?” ಎಂದು ಕೇಳಿದನು. ಅವನು, “ಆಕೆಗೆ ಮಗನಿಲ್ಲ, ಗಂಡನು ಮುದುಕನಾಗಿದ್ದಾನೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆಮೇಲೆ ಎಲೀಷನು ಗೇಹಜಿಯನ್ನು - ನಾವು ಆಕೆಗೆ ಯಾವ ಉಪಕಾರವನ್ನು ಮಾಡಬಹುದು ಎಂದು ಕೇಳಲು ಅವನು - ಆಕೆಗೆ ಮಗನಿಲ್ಲ, ಗಂಡನು ಮುದುಕನಾಗಿದ್ದಾನೆ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಎಲೀಷನು ಗೇಹಜಿಗೆ, “ಅವಳಿಗೋಸ್ಕರ ಮಾಡಬೇಕಾದದ್ದೇನು?” ಎಂದನು. ಅದಕ್ಕೆ ಗೇಹಜಿಯು, “ಅವಳಿಗೆ ಮಕ್ಕಳಿಲ್ಲ. ಅವಳ ಗಂಡನು ವೃದ್ಧನಾಗಿದ್ದಾನೆ,” ಎಂದನು. ಅಧ್ಯಾಯವನ್ನು ನೋಡಿ |
ಎಲೀಷನು ಗೇಹಜಿಗೆ (ಸೇವಕನಿಗೆ), “ನೀನು ಆ ಸ್ತ್ರೀಯ ಬಳಿಗೆ ಹೋಗಿ, ‘ನೋಡು, ನೀನು ನಮ್ಮನ್ನು ಉಪಚರಿಸುವುದಕ್ಕಾಗಿ ನಿನ್ನಿಂದ ಸಾಧ್ಯವಾದಷ್ಟು ಮಾಡಿರುವೆ. ನಮ್ಮಿಂದ ನಿನಗೇನಾದರೂ ಉಪಕಾರವಾಗಬೇಕೇ? ನಿನ್ನ ಬಗ್ಗೆ ರಾಜನ ಬಳಿಯಲ್ಲಾದರೂ ಅಥವಾ ಸೈನ್ಯಾಧಿಕಾರಿಯ ಬಳಿಯಲ್ಲಾದರೂ ನಾವು ಮಾತನಾಡಬೇಕೇ?’ ಎಂದು ಕೇಳು” ಎಂಬುದಾಗಿ ಹೇಳಿದನು. ಆ ಸ್ತ್ರೀಯು, “ಇಲ್ಲಿ ನಾನು ನನ್ನ ಜನರೊಡನೆ ಸುಖವಾಗಿ ಜೀವಿಸುತ್ತಿದ್ದೇನೆ” ಎಂದು ಉತ್ತರಿಸಿದಳು.