2 ಅರಸುಗಳು 4:16 - ಪರಿಶುದ್ದ ಬೈಬಲ್16 ಎಲೀಷನು ಆ ಸ್ತ್ರೀಗೆ, “ಮುಂದಿನ ವಸಂತಮಾಸದ ಈ ಕಾಲಕ್ಕೆ ನೀನು ನಿನ್ನ ಗಂಡುಮಗುವನ್ನು ಅಪ್ಪಿಕೊಂಡಿರುವೆ” ಎಂದು ಹೇಳಿದನು. ಆ ಸ್ತ್ರೀಯು, “ದೇವಮನುಷ್ಯನೇ, ಹೀಗೆ ಹೇಳಿ ನಿನ್ನ ಸೇವಕಿಯನ್ನು ವಂಚಿಸಬೇಡ” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಎಲೀಷನು ಆಕೆಗೆ, “ನೀನು ಬರುವ ವರ್ಷ, ಇದೇ ಕಾಲದಲ್ಲಿ, ಒಬ್ಬ ಮಗನನ್ನು ನಿನ್ನ ಮಡಿಲಲ್ಲಿ ಹೊಂದಿರುವಿ” ಎಂದು ಹೇಳಿದನು. ಅದಕ್ಕೆ ಆಕೆಯು, “ದೇವರ ಮನುಷ್ಯನೇ, ಒಡೆಯನೇ, ಹೀಗೆ ನಿನ್ನ ದಾಸಿಗೆ ಸುಳ್ಳನ್ನು ಹೇಳಬೇಡ” ಎಂದು ನುಡಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಎಲೀಷನು ಆಕೆಗೆ, “ನೀನು ಬರುವ ವರ್ಷ ಇದೇ ಕಾಲದಲ್ಲಿ ಒಬ್ಬ ಮಗನನ್ನು ಅಪ್ಪಿಕೊಂಡಿರುವೆ,” ಎಂದನು. ಅದಕ್ಕೆ ಆಕೆ, “ದೈವಪುರುಷರೇ, ಒಡೆಯರೇ, ಹೀಗೆ ಹೇಳಿ ನಿಮ್ಮ ದಾಸಿಯನ್ನು ವಂಚಿಸಬೇಡಿ,” ಎಂದು ನುಡಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಎಲೀಷನು ಆಕೆಗೆ - ನೀನು ಬರುವ ವರುಷ ಇದೇ ಕಾಲದಲ್ಲಿ ಒಬ್ಬ ಮಗನನ್ನು ಅಪ್ಪಿಕೊಂಡಿರುವಿ ಅಂದನು. ಅದಕ್ಕೆ ಆಕೆಯು - ದೇವರ ಮನುಷ್ಯನೇ, ಒಡೆಯನೇ, ಹೀಗೆ ಹೇಳಿ ನಿನ್ನ ದಾಸಿಯನ್ನು ವಂಚಿಸಬೇಡ ಎಂದು ನುಡಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆಗ ಅವನು, “ಮುಂದಿನ ವರ್ಷ ಈ ಸಮಯದಲ್ಲಿ ನಿನ್ನ ಕೈಯಲ್ಲಿ ಒಬ್ಬ ಮಗನನ್ನು ಎತ್ತಿಕೊಂಡಿರುವೆ,” ಎಂದನು. ಅದಕ್ಕವಳು, “ಹಾಗಲ್ಲ, ದೇವರ ಮನುಷ್ಯನೇ, ನನ್ನ ಒಡೆಯನೇ, ನಿನ್ನ ಸೇವಕಿಗೆ ನೀನು ಸುಳ್ಳು ಹೇಳಬೇಡ,” ಎಂದಳು. ಅಧ್ಯಾಯವನ್ನು ನೋಡಿ |