2 ಅರಸುಗಳು 4:19 - ಪರಿಶುದ್ದ ಬೈಬಲ್19 ಈ ಬಾಲಕನು ತನ್ನ ತಂದೆಗೆ, “ಅಯ್ಯೋ, ನನ್ನ ತಲೆ ನೋಯುತ್ತಿದೆ! ನನ್ನ ತಲೆ ನೋಯುತ್ತಿದೆ!” ಎಂದು ಹೇಳಿದನು. ತಂದೆಯು ತನ್ನ ಸೇವಕನಿಗೆ, “ಅವನ ತಾಯಿಯ ಬಳಿಗೆ ಅವನನ್ನು ಕೊಂಡೊಯ್ಯಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅಲ್ಲಿದ್ದಾಗ ಅವನು ಪಕ್ಕನೆ, “ಅಪ್ಪಾ, ನನ್ನ ತಲೆ, ನನ್ನ ತಲೆ” ಎಂದು ಕೂಗಲು, ತಂದೆಯು ಒಬ್ಬ ಸೇವಕನನ್ನು ಕರೆದು ಅವನಿಗೆ, “ಇವನನ್ನು ತಾಯಿಯ ಹತ್ತಿರ ಕರೆದುಕೊಂಡು ಹೋಗು” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅಲ್ಲಿದ್ದಾಗ ಅವನು ಇದ್ದಕ್ಕಿದ್ದ ಹಾಗೆ, “ಅಪ್ಪಾ, ನನ್ನ ತಲೆ ಸಿಡಿಯುತ್ತಿದೆ, ಸಿಡಿಯುತ್ತಿದೆ,” ಎಂದು ಕೂಗಿಕೊಂಡನು. ತಂದೆ ಒಬ್ಬ ಸೇವಕನನ್ನು ಕರೆದು, “ಇವನನ್ನು ತಾಯಿಯ ಹತ್ತಿರ ತೆಗೆದುಕೊಂಡು ಹೋಗು,” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅಲ್ಲಿದ್ದಾಗ ಅವನು ಫಕ್ಕನೆ - ಅಪ್ಪಾ, ನನ್ನ ತಲೆ, ನನ್ನ ತಲೆ ಎಂದು ಕೂಗಲು ತಂದೆಯು ಒಬ್ಬ ಸೇವಕನನ್ನು ಕರೆದು ಅವನಿಗೆ - ಇವನನ್ನು ತಾಯಿಯ ಹತ್ತಿರ ತೆಗೆದುಕೊಂಡು ಹೋಗು ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆಗ ಅವನು ತನ್ನ ತಂದೆಗೆ, “ನನ್ನ ತಲೆ, ನನ್ನ ತಲೆ,” ಎಂದನು. ತಂದೆಯು ತನ್ನ ಸೇವಕನಿಗೆ, “ಅವನನ್ನು ಅವನ ತಾಯಿಯ ಬಳಿಗೆ ಎತ್ತಿಕೊಂಡು ಹೋಗು,” ಎಂದನು. ಅಧ್ಯಾಯವನ್ನು ನೋಡಿ |