Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 4:21 - ಪರಿಶುದ್ದ ಬೈಬಲ್‌

21 ಆ ಸ್ತ್ರೀಯು ಬಾಲಕನನ್ನು ದೇವಮನುಷ್ಯನ (ಎಲೀಷನ) ಹಾಸಿಗೆಯ ಮೇಲೆ ಮಲಗಿಸಿದಳು. ನಂತರ ಅವಳು ಬಾಗಿಲನ್ನು ಮುಚ್ಚಿಕೊಂಡು, ಹೊರಗೆ ಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಕೂಡಲೆ ಆಕೆಯು ಅವನನ್ನು ದೇವರ ಮನುಷ್ಯನ ಕೋಣೆಗೆ ತೆಗೆದುಕೊಂಡು ಹೋಗಿ ಅವನ ಮಂಚದ ಮೇಲೆ ಮಗನನ್ನು ಮಲಗಿಸಿ ಬಾಗಿಲು ಮುಚ್ಚಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಕೂಡಲೆ ಆಕೆ ಅವನನ್ನು ದೈವಪುರುಷನ ಕೋಣೆಗೆ ತೆಗೆದುಕೊಂಡು ಹೋಗಿ, ಅವನ ಮಂಚದ ಮೇಲೆ ಮಲಗಿಸಿ, ಬಾಗಿಲು ಮುಚ್ಚಿ, ಗಂಡನನ್ನು ಕರೆಯಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಕೂಡಲೆ ಆಕೆಯು ಅವನನ್ನು ದೇವರ ಮನುಷ್ಯನ ಕೋಣೆಗೆ ತೆಗೆದುಕೊಂಡು ಹೋಗಿ ಅವನ ಮಂಚದ ಮೇಲೆ ಮಲಗಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆಗ ಅವಳು ಏರಿಹೋಗಿ, ಅವನನ್ನು ದೇವರ ಮನುಷ್ಯನ ಮಂಚದ ಮೇಲೆ ಮಲಗಿಸಿ ಬಾಗಿಲು ಮುಚ್ಚಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 4:21
6 ತಿಳಿವುಗಳ ಹೋಲಿಕೆ  

ಎಲೀಷನು ಮನೆಯೊಳಕ್ಕೆ ಬಂದನು. ಆ ಮಗು ಅವನ ಹಾಸಿಗೆಯ ಮೇಲೆ ಸತ್ತುಬಿದ್ದಿತ್ತು.


ದಯವಿಟ್ಟು ಎಲೀಷನಿಗಾಗಿ ಮಾಳಿಗೆಯ ಮೇಲೆ ಚಿಕ್ಕದೊಂದು ಕೊಠಡಿಯನ್ನು ಕಟ್ಟೋಣ. ಆ ಕೊಠಡಿಯಲ್ಲಿ ಹಾಸಿಗೆಯೊಂದನ್ನು ಹಾಕೋಣ. ಅಲ್ಲಿ ಒಂದು ಮೇಜು, ಕುರ್ಚಿ ಮತ್ತು ದೀಪಸ್ತಂಭವನ್ನು ಇಡೋಣ. ಅವನು ನಮ್ಮ ಮನೆಗೆ ಬಂದಾಗ, ಈ ಕೊಠಡಿಯನ್ನು ತನಗಾಗಿ ಉಪಯೋಗಿಸಲಿ” ಎಂದು ಹೇಳಿದನು.


ಆಗ ಆ ಸ್ತ್ರೀಯು ದೇವರ ಮನುಷ್ಯನ (ಎಲೀಷನ) ಬಳಿಗೆ ಬಂದು ನಡೆದದ್ದನ್ನೆಲ್ಲಾ ತಿಳಿಸಿದಳು. ಎಲೀಷನು ಅವಳಿಗೆ, “ಹೋಗು, ಎಣ್ಣೆಯನ್ನು ಮಾರಾಟಮಾಡಿ, ನಿನ್ನ ಸಾಲವನ್ನು ತೀರಿಸು. ಉಳಿದ ಹಣದಲ್ಲಿ ನೀನು ಮತ್ತು ನಿನ್ನ ಮಕ್ಕಳು ಜೀವನಮಾಡಿ” ಎಂದು ಹೇಳಿದನು.


ಎಲೀಯನು ಅವಳಿಗೆ, “ನಿನ್ನ ಮಗನನ್ನು ನನಗೆ ಕೊಡು” ಎಂದು ಹೇಳಿದನು. ಎಲೀಯನು ಬಾಲಕನನ್ನು ಅವಳಿಂದ ತೆಗೆದುಕೊಂಡು, ಮೇಲಂತಸ್ತಿಗೆ ಹೋದನು. ಅವನು ನೆಲೆಸಿದ್ದ ಕೊಠಡಿಯ ಹಾಸಿಗೆಯ ಮೇಲೆ ಆ ಬಾಲಕನನ್ನು ಮಲಗಿಸಿದನು.


ಆ ಸೇವಕನು ಬಾಲಕನನ್ನು ಅವನ ತಾಯಿಯ ಬಳಿಗೆ ಕರೆದೊಯ್ದನು. ಬಾಲಕನು ಮಧ್ಯಾಹ್ನದವರೆಗೆ ತಾಯಿಯ ತೊಡೆಯ ಮೇಲೆ ಕುಳಿತಿದ್ದನು. ನಂತರ ಅವನು ಸತ್ತುಹೋದನು.


ಅವಳು ತನ್ನ ಗಂಡನನ್ನು ಕರೆದು, “ದಯವಿಟ್ಟು ಒಬ್ಬ ಸೇವಕನನ್ನೂ ಒಂದು ಹೇಸರಕತ್ತೆಯನ್ನೂ ನನಗೆ ಕಳುಹಿಸಿಕೊಡಿ. ನಾನು ದೇವಮನುಷ್ಯನನ್ನು ಕರೆತರಲು ಬೇಗ ಹೋಗಿ ಹಿಂದಿರುಗಿ ಬರುತ್ತೇನೆ” ಎಂದು ಹೇಳಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು