Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 4:23 - ಪರಿಶುದ್ದ ಬೈಬಲ್‌

23 ಆ ಸ್ತ್ರೀಯ ಗಂಡನು, “ಈ ದಿನ ದೇವಮನುಷ್ಯನ ಬಳಿಹೋಗಲು ನೀನೇಕೆ ಅಪೇಕ್ಷೆಪಡುವೆ? ಇಂದು ಅಮಾವಾಸ್ಯೆಯೂ ಅಲ್ಲ, ಸಬ್ಬತ್ ದಿನವೂ ಅಲ್ಲ” ಎಂದು ಹೇಳಿದನು. ಅವಳು, “ಚಿಂತಿಸಬೇಡ, ಎಲ್ಲವೂ ಸರಿಹೋಗುತ್ತದೆ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅದಕ್ಕೆ ಅವನು, “ಇದು ಅಮಾವಾಸ್ಯೆಯಲ್ಲ, ಸಬ್ಬತ್ತಲ್ಲ. ಈ ಹೊತ್ತು ಯಾಕೆ ಹೋಗುತ್ತೀ?” ಎಂದನು. ಅದಕ್ಕೆ ಆಕೆಯು, “ಎಲ್ಲವು ಸರಿಯೇ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅದಕ್ಕೆ ಅವನು, “ಇಂದು ಅಮಾವಾಸ್ಯೆಯೂ ಅಲ್ಲ, ಸಬ್ಬತ್ತೂ ಅಲ್ಲ, ಈ ದಿನ ಹೋಗಿ ಪ್ರಯೋಜನವಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅದಕ್ಕೆ ಅವನು - ಇಂದು ಅಮಾವಾಸ್ಯೆಯಲ್ಲ, ಸಬ್ಬತ್ತಲ್ಲ, ಈಹೊತ್ತು ಯಾಕೆ ಹೋಗುತ್ತೀ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅದಕ್ಕೆ ಅವನು, “ಇದು ಅಮಾವಾಸ್ಯೆ ಅಲ್ಲ, ಸಬ್ಬತ್ ದಿನವೂ ಅಲ್ಲ. ನೀನು ಏಕೆ ಈ ಹೊತ್ತು ಅವನ ಬಳಿಗೆ ಹೋಗುತ್ತೀ?” ಎಂದನು. ಅದಕ್ಕವಳು, “ಅಡ್ಡಿಯೇನಿಲ್ಲ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 4:23
9 ತಿಳಿವುಗಳ ಹೋಲಿಕೆ  

ಇದಲ್ಲದೆ, ನೀವು ಉತ್ಸವಕಾಲಗಳಲ್ಲಿಯೂ ಹಬ್ಬಗಳಲ್ಲಿಯೂ ಅಮಾವಾಸ್ಯೆಯಲ್ಲಿಯೂ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸುವಾಗ ಆ ತುತ್ತೂರಿಗಳನ್ನು ಊದಿಸಬೇಕು. ನಿಮ್ಮನ್ನು ಗಮನಿಸಬೇಕೆಂದು ಆ ತುತ್ತೂರಿ ಧ್ವನಿಗಳು ನಿಮ್ಮ ದೇವರಿಗೆ ನೆನಪನ್ನುಂಟುಮಾಡುತ್ತವೆ. ನೀವು ಇದನ್ನು ಮಾಡಬೇಕೆಂದು ನಾನು ಆಜ್ಞಾಪಿಸುತ್ತೇನೆ. ನಿಮ್ಮ ದೇವರಾದ ಯೆಹೋವನು ನಾನೇ.”


ಸಬ್ಬತ್ ದಿನಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ಬೇರೆ ವಿಶೇಷ ದಿನಗಳಲ್ಲಿಯೂ ದೇವರಿಗೆ ಸಮರ್ಪಿಸುವ ಸರ್ವಾಂಗಹೋಮವನ್ನು ತಯಾರು ಮಾಡುತ್ತಿದ್ದರು. ಪ್ರತಿದಿನ ಎಷ್ಟು ಮಂದಿ ಲೇವಿಯರು ಸೇವೆಮಾಡಬೇಕೆಂಬುದನ್ನು ಮೊದಲೇ ಗೊತ್ತುಪಡಿಸಲಾಗಿತ್ತು.


“ಪ್ರತಿ ತಿಂಗಳ ಮೊದಲನೆಯ ದಿನದಲ್ಲಿ, ನೀವು ಯೆಹೋವನಿಗೆ ಸರ್ವಾಂಗಹೋಮವನ್ನು ಅರ್ಪಿಸಬೇಕು: ಎರಡು ಹೋರಿಗಳು, ಒಂದು ಟಗರು ಮತ್ತು ಒಂದು ವರ್ಷದ ಏಳು ಕುರಿಮರಿಗಳು. ಇವುಗಳೆಲ್ಲಾ ಪೂರ್ಣಾಂಗವಾದವುಗಳಾಗಿರಬೇಕು.


ಅವಳು ತನ್ನ ಗಂಡನನ್ನು ಕರೆದು, “ದಯವಿಟ್ಟು ಒಬ್ಬ ಸೇವಕನನ್ನೂ ಒಂದು ಹೇಸರಕತ್ತೆಯನ್ನೂ ನನಗೆ ಕಳುಹಿಸಿಕೊಡಿ. ನಾನು ದೇವಮನುಷ್ಯನನ್ನು ಕರೆತರಲು ಬೇಗ ಹೋಗಿ ಹಿಂದಿರುಗಿ ಬರುತ್ತೇನೆ” ಎಂದು ಹೇಳಿದಳು.


ನಂತರ ಅವಳು ಒಂದು ತಡಿಯನ್ನು ಕತ್ತೆಯ ಮೇಲೆ ಹಾಕಿ ತನ್ನ ಸೇವಕನಿಗೆ, “ಬೇಗ ಬಾ! ನಾವು ವೇಗವಾಗಿ ಸವಾರಿ ಮಾಡಿಕೊಂಡು ಹೋಗೋಣ. ನಾನು ನಿನಗೆ ಹೇಳಿದಾಗ ನಿಧಾನಿಸು!” ಎಂದು ಹೇಳಿದಳು.


ವರ್ತಕರಾದ ನೀವು ಹೇಳುವುದೇನೆಂದರೆ, “ಅಮಾವಾಸ್ಯೆ ಯಾವಾಗ ಮುಗಿಯುವುದು? ಆಗ ನಾವು ಧಾನ್ಯವನ್ನು ಮಾರಾಟ ಮಾಡುವೆವು. ಸಬ್ಬತ್ ಯಾವಾಗ ಮುಗಿಯುವುದು? ಆಗ ನಾವು ನಮ್ಮ ಗೋದಿಯನ್ನು ಮಾರಾಟ ಮಾಡಲು ತರುವೆವು. ಅದರ ಬೆಲೆಯನ್ನು ಅಧಿಕಗೊಳಿಸಿ ಅಳತೆಯನ್ನು ಕಡಿಮೆ ಮಾಡುವೆವು. ತ್ರಾಸನ್ನು ಕಡಿಮೆ ಮಾಡಿ ಜನರಿಗೆ ಮೋಸ ಮಾಡುವೆವು.


“ಸಬ್ಬತ್‌ದಿನದಲ್ಲಿ ಎರಡು ಪೂರ್ಣಾಂಗವಾದ ಒಂದು ವರ್ಷದ ಗಂಡುಕುರಿಗಳನ್ನೂ ಧಾನ್ಯದ್ರವ್ಯಾರ್ಪಣೆಗಾಗಿ ಎಣ್ಣೆ ಬೆರೆಸಿದ ಆರು ಸೇರು ಗೋಧಿಹಿಟ್ಟನ್ನೂ ಅದಕ್ಕೆ ತಕ್ಕ ಪಾನದ್ರವ್ಯವನ್ನೂ ಸಮರ್ಪಿಸಬೇಕು. ಕ್ರಮವಾಗಿ ಅರ್ಪಿಸತಕ್ಕ ಸರ್ವಾಂಗಹೋಮ ಮತ್ತು ಅದರ ಪಾನದ್ರವ್ಯಾರ್ಪಣೆಗಳಲ್ಲದೆ, ಪ್ರತಿಸಬ್ಬತ್ ದಿನ ಸರ್ವಾಂಗಹೋಮವನ್ನು ಅರ್ಪಿಸಬೇಕು.


ಆಗ ದಾವೀದನು, “ನಾಳೆ ಅಮಾವಾಸ್ಯೆ ಹಬ್ಬ, ನಾನು ರಾಜನ ಜೊತೆಯಲ್ಲಿ ಊಟಮಾಡಬೇಕಾಗಿದೆ. ಆದರೆ ನಾನು ಈಗಲೇ ಹೋಗಿ ಸಂಜೆಯವರೆಗೆ ಹೊಲದಲ್ಲಿ ಅಡಗಿಕೊಳ್ಳಲು ಅವಕಾಶ ಮಾಡಿಕೊಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು