Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 4:27 - ಪರಿಶುದ್ದ ಬೈಬಲ್‌

27 ಆದರೆ ಶೂನೇಮಿನ ಈ ಸ್ತ್ರೀಯು ದೇವಮನುಷ್ಯನಿದ್ದ ಬೆಟ್ಟದವರೆಗೆ ಹೋದಳು. ಅವಳು ನೆಲಕ್ಕೆ ಬಾಗಿ, ಎಲೀಷನ ಪಾದಗಳನ್ನು ಹಿಡಿದುಕೊಂಡಳು. ಶೂನೇಮಿನ ಆ ಸ್ತ್ರೀಯನ್ನು ತಳ್ಳಿಬಿಡಲು ಗೇಹಜಿಯು ಹತ್ತಿರಕ್ಕೆ ಬಂದನು. ಆದರೆ ದೇವಮನುಷ್ಯನು ಗೇಹಜಿಗೆ, “ಅವಳನ್ನು ತಡೆಯಬೇಡ! ಅವಳು ಬಹಳ ತಳಮಳಗೊಂಡಿದ್ದಾಳೆ. ಯೆಹೋವನು ನನಗೆ ಆಕೆಯ ದುಃಖವನ್ನು ಪ್ರಕಟಿಸಲಿಲ್ಲ; ನನಗೆ ಮರೆಮಾಡಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಬೆಟ್ಟದ ಮೇಲಿದ್ದ ದೇವರ ಮನುಷ್ಯನ ಬಳಿಗೆ ಬಂದು, ಅವನ ಪಾದಗಳನ್ನು ಹಿಡಿದಳು. ಗೇಹಜಿಯು ಆಕೆಯನ್ನು ದೂರ ಮಾಡುವುದಕ್ಕಾಗಿ ಹತ್ತಿರ ಬರಲು, ದೇವರ ಮನುಷ್ಯನು ಅವನಿಗೆ, “ಬಿಡು, ಆಕೆಯ ಮನಸ್ಸಿನಲ್ಲಿ ಬಹು ದುಃಖವಿರುವ ಹಾಗೆ ತೋರುತ್ತದೆ. ಯೆಹೋವನು ಆಕೆಯ ದುಃಖವನ್ನು ನನಗೆ ಪ್ರಕಟಿಸದೆ, ಮರೆಮಾಡಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಗೇಹಜಿಯು ಆಕೆಯನ್ನು ದೂಡುವುದಕ್ಕಾಗಿ ಹತ್ತಿರ ಬಂದನು. ದೈವಪುರುಷನು, “ಬಿಡು, ತಡೆಯಬೇಡ; ಆಕೆಗೆ ಮನಸ್ಸಿನಲ್ಲಿ ತೀವ್ರ ದುಃಖವಿರುವ ಹಾಗೆ ತೋರುತ್ತದೆ. ಸರ್ವೇಶ್ವರ ಆಕೆಯ ದುಃಖವನ್ನು ನನಗೆ ತಿಳಿಸಲಿಲ್ಲ; ಮರೆಮಾಡಿದ್ದಾರೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಬೆಟ್ಟದ ಮೇಲಿದ್ದ ದೇವರ ಮನುಷ್ಯನ ಬಳಿಗೆ ಬಂದು ಅವನ ಪಾದಗಳನ್ನು ಹಿಡಿದಳು. ಗೇಹಜಿಯು ಆಕೆಯನ್ನು ದೂಡುವದಕ್ಕಾಗಿ ಹತ್ತಿರ ಬರಲು ದೇವರ ಮನುಷ್ಯನು ಅವನಿಗೆ - ಬಿಡು, ಆಕೆಯ ಮನಸ್ಸಿನಲ್ಲಿ ಬಹುದುಃಖವಿರುವ ಹಾಗೆ ತೋರುತ್ತದೆ; ಯೆಹೋವನು ಆಕೆಯ ದುಃಖವನ್ನು ನನಗೆ ಪ್ರಕಟಿಸಲಿಲ್ಲ, ಮರೆ ಮಾಡಿದ್ದಾನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅವಳು ಬೆಟ್ಟಕ್ಕೆ ದೇವರ ಮನುಷ್ಯನ ಬಳಿಗೆ ಬಂದು, ಅವನ ಪಾದಗಳನ್ನು ಹಿಡಿದಳು. ಆದರೆ ಅವಳನ್ನು ತಳ್ಳಿ ಹಾಕಲು ಗೇಹಜಿಯು ಹತ್ತಿರ ಬಂದದ್ದರಿಂದ ದೇವರ ಮನುಷ್ಯನು, “ಅವಳನ್ನು ಬಿಡು. ಏಕೆಂದರೆ ಅವಳ ಹೃದಯವು ಬಹಳ ನೋವಿನಿಂದ ತುಂಬಿದೆ. ಯೆಹೋವ ದೇವರು ಅದನ್ನು ನನಗೆ ತಿಳಿಸದೆ ಮರೆಮಾಡಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 4:27
19 ತಿಳಿವುಗಳ ಹೋಲಿಕೆ  

ನಾತಾನನು ರಾಜನಾದ ದಾವೀದನಿಗೆ, “ನೀನು ನಿಜವಾಗಿಯೂ ಏನನ್ನು ಮಾಡಬೇಕೆಂದಿರುವೆಯೋ ಅದನ್ನು ಮಾಡು; ಯೆಹೋವನು ನಿನ್ನೊಂದಿಗಿದ್ದಾನೆ” ಎಂದು ಹೇಳಿದನು.


ಯೆಹೋವನು ತನ್ನೊಳಗೆ ಹೀಗೆಂದುಕೊಂಡನು: “ನಾನು ಈಗ ಮಾಡುವ ಕಾರ್ಯವನ್ನು ಅಬ್ರಹಾಮನಿಗೆ ತಿಳಿಸಲೇ?


ಆದರೆ ಯೇಸು ಆ ಸ್ತ್ರೀಗೆ ಉತ್ತರ ಕೊಡಲಿಲ್ಲ. ಆದ್ದರಿಂದ ಶಿಷ್ಯರು ಯೇಸುವಿನ ಬಳಿಗೆ ಬಂದು, “ಆ ಸ್ತ್ರೀಗೆ ಹೊರಟುಹೋಗುವುದಕ್ಕೆ ಹೇಳು. ಆಕೆಯು ಕೂಗಿಕೊಂಡು ನಮ್ಮ ಹಿಂದೆಯೇ ಬರುತ್ತಿದ್ದಾಳೆ” ಎಂದು ಕೇಳಿಕೊಂಡರು.


ನನ್ನ ಒಡೆಯನಾದ ಯೆಹೋವನು ಒಂದು ಕಾರ್ಯವನ್ನು ಮಾಡಲು ನಿರ್ಧರಿಸಬಹುದು. ಆದರೆ ಆತನು ಹಾಗೆ ಮಾಡುವ ಮುಂಚಿತವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ಮುಂತಿಳಿಸುವನು.


ಅಸ್ವಸ್ಥನನ್ನು ಅವನ ಮನಸ್ಸು ಜೀವಂತವಾಗಿಡಬಲ್ಲದು. ಆದರೆ ಮುರಿದ ಆತ್ಮವನ್ನು ಯಾರು ಸಹಿಸಿಕೊಳ್ಳಬಲ್ಲರು?


ಅವನವನ ವ್ಯಥೆಯು ಅವನವನಿಗೆ ಮಾತ್ರ ತಿಳಿದಿದೆ. ಹಾಗೆಯೇ ಅವನವನ ಸಂತೋಷವು ಅವನವನಿಗೆ ಮಾತ್ರ ತಿಳಿದಿರುತ್ತದೆ.


ಯೋಬನು ತನ್ನ ಮಾತನ್ನು ಮುಂದುವರಿಸಿದನು: “ನನ್ನ ಜೀವಿತವೇ ನನಗೆ ಅಸಹ್ಯವಾಗಿದೆ. ಹೃದಯ ಬಿಚ್ಚಿ ಮೊರೆಯಿಡುವೆನು; ಮನೋವ್ಯಥೆಯಿಂದ ನುಡಿಯುವೆನು.


ಅರಾಮ್ಯರ ರಾಜನ ಅಧಿಕಾರಿಗಳಲ್ಲೊಬ್ಬನು, “ನನ್ನ ಒಡೆಯನೇ, ರಾಜನೇ, ನಮ್ಮಲ್ಲಿ ಯಾರೊಬ್ಬರೂ ಗೂಢಚಾರರಲ್ಲ. ಇಸ್ರೇಲಿನ ಪ್ರವಾದಿಯಾದ ಎಲೀಷನು ಅನೇಕ ರಹಸ್ಯ ಸಂಗತಿಗಳನ್ನು ಅಂದರೆ ನೀವು ನಿಮ್ಮ ಮಲಗುವ ಕೊಠಡಿಯಲ್ಲಿ ಮಾತನಾಡುವುದನ್ನೂ ಸಹ ಇಸ್ರೇಲಿನ ರಾಜನಿಗೆ ತಿಳಿಸಬಲ್ಲವನಾಗಿದ್ದಾನೆ!” ಎಂದು ಹೇಳಿದನು.


ಆ ಸ್ತ್ರೀಯು ದೇವಮನುಷ್ಯನನ್ನು ಕಾಣಲು ಕರ್ಮೆಲ್ ಪರ್ವತಕ್ಕೆ ಹೋದಳು. ಶೂನೇಮಿನ ಸ್ತ್ರೀಯು ದೂರದಿಂದ ಬರುತ್ತಿರುವುದನ್ನು ಕಂಡ ಎಲೀಷನು ತನ್ನ ಸೇವಕನಾದ ಗೇಹಜಿಗೆ, “ನೋಡು, ಶೂನೇಮ್ಯಳಾದ ಸ್ತ್ರೀಯು ಬರುತ್ತಿದ್ದಾಳೆ!


ಹನ್ನಳು ಬಹು ದುಃಖಿತಳಾಗಿದ್ದುದರಿಂದ ಕಣ್ಣೀರು ಸುರಿಯುತ್ತಿತ್ತು. ಅವಳು ಯೆಹೋವನಿಗೆ ಪ್ರಾರ್ಥಿಸುತ್ತಿದ್ದಳು.


ಈಗ ನಾನು ನಿಮ್ಮನ್ನು ನನ್ನ ಸೇವಕರುಗಳೆಂದು ಕರೆಯುವುದಿಲ್ಲ. ಯಜಮಾನನ ಕೆಲಸಕಾರ್ಯಗಳು ಸೇವಕನಿಗೆ ತಿಳಿದಿರುವುದಿಲ್ಲ. ಆದರೆ ಈಗ ನಾನು ನಿಮ್ಮನ್ನು ನನ್ನ ಗೆಳೆಯರೆಂದು ಕರೆಯುತ್ತೇನೆ. ಏಕೆಂದರೆ ನನ್ನ ತಂದೆಯಿಂದ ಕೇಳಿದ ಪ್ರತಿಯೊಂದನ್ನೂ ನಾನು ನಿಮಗೆ ಹೇಳಿದ್ದೇನೆ.


ಆ ಸಮಯದಲ್ಲಿ ಆತನ ಶಿಷ್ಯರು ಹಿಂತಿರುಗಿ ಬಂದರು. ಯೇಸು ಒಬ್ಬ ಸ್ತ್ರೀಯೊಂದಿಗೆ ಮಾತಾಡುತ್ತಿರುವುದನ್ನು ನೋಡಿ ಅವರು ಆಶ್ಚರ್ಯಗೊಂಡರು. ಆದರೆ, “ನಿನಗೇನು ಬೇಕು?” ಎಂದಾಗಲಿ “ನೀನು ಆಕೆಯೊಂದಿಗೆ ಏಕೆ ಮಾತಾಡುತ್ತಿರುವೆ?” ಎಂದಾಗಲಿ ಅವರಲ್ಲಿ ಒಬ್ಬರೂ ಕೇಳಲಿಲ್ಲ.


ಆಕೆ ಯೇಸುವಿನ ಪಾದಗಳ ಬಳಿ ಅಳುತ್ತಾ, ತನ್ನ ಕಣ್ಣೀರಿನಿಂದ ಆತನ ಪಾದಗಳನ್ನು ತೇವ ಮಾಡಿ ತನ್ನ ತಲೆಯ ಕೂದಲಿನಿಂದ ಯೇಸುವಿನ ಪಾದಗಳನ್ನು ಒರೆಸಿದಳು. ಆಕೆ ಅನೇಕಸಲ ಆತನ ಪಾದಗಳಿಗೆ ಮುದ್ದಿಟ್ಟು ಪರಿಮಳತೈಲವನು ಹಚ್ಚಿದಳು.


ಯೇಸು, “ಆಕೆಗೆ ತೊಂದರೆ ಕೊಡಬೇಡಿ. ನೀವು ಆಕೆಯನ್ನು ಕಾಡಿಸುವುದೇಕೆ? ಅವಳು ನನಗಾಗಿ ಬಹಳ ಒಳ್ಳೆಯದನ್ನು ಮಾಡಿದಳು.


ಜನರು, ತಮ್ಮ ಚಿಕ್ಕಮಕ್ಕಳನ್ನು ಮುಟ್ಟಿ ಆಶೀರ್ವದಿಸಲೆಂದು ಅವರನ್ನು ಯೇಸುವಿನ ಬಳಿಗೆ ತಂದರು. ಆದರೆ ಮಕ್ಕಳನ್ನು ಯೇಸುವಿನ ಬಳಿಗೆ ತರಕೂಡದೆಂದು ಶಿಷ್ಯರು ಜನರನ್ನು ಗದರಿಸಿದರು.


ಯೇಸು ಅವರ ಮುಂದೆ ಪ್ರತ್ಯಕ್ಷನಾಗಿ, “ನಿಮಗೆ ಶುಭವಾಗಲಿ” ಎಂದನು. ಆ ಸ್ತ್ರೀಯರು ಯೇಸುವಿನ ಬಳಿಗೆ ಹೋಗಿ, ಆತನ ಪಾದಗಳನ್ನು ಹಿಡಿದುಕೊಂಡು ಆತನನ್ನು ಆರಾಧಿಸಿದರು.


ಜನರೆಲ್ಲರೂ ಕುರುಡರನ್ನು ಗದರಿಸಿ, ಸುಮ್ಮನಿರಬೇಕೆಂದು ಹೇಳಿದರು. ಆದರೆ ಆ ಕುರುಡರು, “ಪ್ರಭುವೇ, ದಾವೀದನ ಕುಮಾರನೇ, ದಯಮಾಡಿ ನಮಗೆ ಸಹಾಯ ಮಾಡು!” ಎಂದು ಹೆಚ್ಚುಹೆಚ್ಚು ಕೂಗಿಕೊಂಡರು.


ಅವಳನ್ನು ಭೇಟಿ ಮಾಡುವುದಕ್ಕೆ ಓಡಿಹೋಗಿ ಅವಳಿಗೆ, ‘ನೀನು ಕ್ಷೇಮವಾಗಿರುವೆಯಾ? ನಿನ್ನ ಗಂಡ ಕ್ಷೇಮವಾಗಿರುವನೇ? ನಿನ್ನ ಮಗು ಕ್ಷೇಮವಾಗಿರುವುದೇ?’ ಎಂದು ಕೇಳು” ಎಂಬುದಾಗಿ ಹೇಳಿ ಕಳುಹಿಸಿದನು. ಅಂತೆಯೇ ಗೇಹಜಿಯು ಆಕೆಯನ್ನು ಕೇಳಿದನು. ಅವಳು “ಹೌದು, ಕ್ಷೇಮವಾಗಿದ್ದೇವೆ” ಎಂದು ಉತ್ತರಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು