Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 4:29 - ಪರಿಶುದ್ದ ಬೈಬಲ್‌

29 ಎಲೀಷನು ಗೇಹಜಿಗೆ, “ಹೊರಡಲು ಸಿದ್ಧನಾಗು. ನನ್ನ ಕೋಲನ್ನು ತೆಗೆದುಕೊಂಡು ಹೋಗು. ಯಾರ ಹತ್ತಿರವಾಗಲಿ ಮಾತನಾಡಲು ನಿಲ್ಲದಿರು! ನೀನು ಯಾರನ್ನಾದರೂ ಸಂಧಿಸಿದರೆ ಅವನಿಗೆ, ‘ಕ್ಷೇಮವಾಗಿರುವೆಯಾ?’ ಎಂದು ಕೇಳದಿರು. ಯಾರಾದರೂ ನಿನ್ನನ್ನು ‘ಕ್ಷೇಮವಾಗಿರುವೆಯಾ?’ ಎಂದು ಕೇಳಿದರೆ, ಅವನಿಗೆ ಉತ್ತರಿಸದಿರು. ಹೀಗೆ ನೀನು ಹೋಗಿ, ನನ್ನ ಕೋಲನ್ನು ಮಗುವಿನ ಮುಖದ ಮೇಲೆ ಇಡು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆಗ ಎಲೀಷನು ಗೇಹಜಿಗೆ, “ನೀನು ನಡುಕಟ್ಟಿಕೊಂಡು, ನನ್ನ ಕೋಲನ್ನು ತೆಗೆದುಕೊಂಡು ಹೋಗಿ ಹುಡುಗನ ಮುಖದ ಮೇಲಿಡು, ಹೋಗುವಾಗ ದಾರಿಯಲ್ಲಿ ಯಾರನ್ನೂ ವಂದಿಸಬೇಡ, ಯಾರ ಅವರ ವಂದನೆಯನ್ನು ಸ್ವೀಕರಿಸಬೇಡ” ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಆಗ ಎಲೀಷನು ಗೇಹಜಿಗೆ, “ನೀನು ಹೋಗಿ, ನಡುಕಟ್ಟಿಕೊಂಡು, ನನ್ನ ಕೋಲನ್ನು ತೆಗೆದುಕೊಂಡು ಹೋಗಿ, ಆ ಹುಡುಗನ ಮುಖದ ಮೇಲಿಡು; ಹೋಗುವಾಗ ದಾರಿಯಲ್ಲಿ ಯಾರನ್ನೂ ವಂದಿಸಬೇಡ; ಯಾವ ವಂದನೆಯನ್ನೂ ಸ್ವೀಕರಿಸಬೇಡ," ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಆಗ ಎಲೀಷನು ಗೇಹಜಿಗೆ - ನೀನು ನಡು ಕಟ್ಟಿಕೊಂಡು ನನ್ನ ಕೋಲನ್ನು ತೆಗೆದುಕೊಂಡು ಹೋಗಿ ಹುಡುಗನ ಮೋರೆಯ ಮೇಲಿಡು; ಹೋಗುವಾಗ ದಾರಿಯಲ್ಲಿ ಯಾರನ್ನೂ ವಂದಿಸಬೇಡ; ಅವರ ವಂದನೆಯನ್ನೂ ಸ್ವೀಕರಿಸಬೇಡ ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಎಲೀಷನು ಗೇಹಜಿಗೆ, “ನೀನು ನಿನ್ನ ಸಡಿಲವಾದ ಉಡುಪನ್ನು ನಡುವಿಗೆ ಕಟ್ಟಿಕೊಂಡು, ನನ್ನ ಕೋಲನ್ನು ನಿನ್ನ ಕೈಯಲ್ಲಿ ಹಿಡಿದುಕೊಂಡು ಹೋಗು. ನಿನಗೆ ಯಾವನಾದರೂ ಎದುರುಗೊಂಡರೆ, ಅವನನ್ನು ವಂದಿಸಬೇಡ; ಯಾವನಾದರೂ ನಿನ್ನನ್ನು ವಂದಿಸಿದರೆ, ಅವನಿಗೆ ಉತ್ತರ ಹೇಳಬೇಡ; ನನ್ನ ಕೋಲನ್ನು ಆ ಹುಡುಗನ ಮುಖದ ಮೇಲೆ ಹಾಕು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 4:29
15 ತಿಳಿವುಗಳ ಹೋಲಿಕೆ  

ಎಲೀಷನು ನೀರನ್ನು ಹೊಡೆದಾಗ, ನೀರು ಎರಡು ಭಾಗವಾಗಿ ಬಲಗಡೆಯಲ್ಲೂ ಎಡಗಡೆಯಲ್ಲೂ ನಿಂತುಕೊಂಡಿತು! ಎಲೀಷನು ನದಿಯನ್ನು ದಾಟಿದನು.


ಯೆಹೋವನ ಶಕ್ತಿಯು ಎಲೀಯನ ಮೇಲೆ ಬಂದಿತು. ಎಲೀಯನು ಓಡುವುದಕ್ಕಾಗಿ ತನ್ನ ಬಟ್ಟೆಗಳನ್ನು ತನ್ನ ಸುತ್ತಲೂ ಬಿಗಿದುಕೊಂಡನು. ನಂತರ ಎಲೀಯನು ರಾಜನಾದ ಅಹಾಬನಿಗಿಂತ ಮುಂಚೆ ಇಜ್ರೇಲಿನ ದಾರಿಯುದ್ದಕ್ಕೂ ಓಡುತ್ತಲೇ ಹೋದನು.


ನಿನ್ನ ಕೈಯಲ್ಲಿರುವ ಊರುಗೋಲನ್ನು ಕೆಂಪುಸಮುದ್ರದ ಮೇಲೆ ಚಾಚು. ಆಗ ಸಮುದ್ರವು ಇಬ್ಭಾಗವಾಗುವುದು. ಜನರು ಒಣನೆಲದ ಮೇಲೆ ಸಮುದ್ರವನ್ನು ದಾಟಬಹುದು.


ಕೈಚೀಲವನ್ನಾಗಲಿ ಹಣವನ್ನಾಗಲಿ ಅಥವಾ ಪಾದರಕ್ಷೆಗಳನ್ನಾಗಲಿ ತೆಗೆದುಕೊಂಡು ಹೋಗಬೇಡಿರಿ. ದಾರಿಯಲ್ಲಿ ನಿಂತುಕೊಂಡು ಜನರೊಡನೆ ಮಾತನಾಡಬೇಡಿ.


ಪ್ರವಾದಿಯಾದ ಎಲೀಷನು ಪ್ರವಾದಿಗಳ ಗುಂಪಿನಿಂದ ಒಬ್ಬನನ್ನು ಕರೆದು ಅವನಿಗೆ, “ಎಣ್ಣೆಯಿರುವ ಈ ಸಣ್ಣ ಸೀಸೆಯನ್ನು ನಿನ್ನ ಕೈಗಳಲ್ಲಿ ತೆಗೆದುಕೊಂಡು ರಾಮೋತ್‌ಗಿಲ್ಯಾದಿಗೆ ಹೋಗು.


ಪೌಲನ ಕರವಸ್ತ್ರಗಳನ್ನು ಮತ್ತು ಬಟ್ಟೆಗಳನ್ನು ಕೆಲವರು ತೆಗೆದುಕೊಂಡು ಹೋಗಿ ರೋಗಿಗಳ ಮೇಲೆ ಹಾಕುತ್ತಿದ್ದರು. ಆ ಕೂಡಲೇ ರೋಗಿಗಳು ಗುಣಹೊಂದುತ್ತಿದ್ದರು. ದೆವ್ವಗಳಿಂದ ಪೀಡಿತರಾಗಿದ್ದವರನ್ನು ದೆವ್ವಗಳು ಬಿಟ್ಟುಹೋಗುತ್ತಿದ್ದವು.


“ನಿಮ್ಮ ಕಣ್ಣೆದುರಿಗಿರುವ ಇವನ ಪರಿಚಯ ನಿಮ್ಮೆಲ್ಲರಿಗೂ ಇದೆ. ಇವನು ಗುಣವಾದದ್ದಕ್ಕೆ ಇವನು ಯೇಸುವಿನ ಹೆಸರಿನಲ್ಲಿ ಇಟ್ಟ ನಂಬಿಕೆಯೇ ಕಾರಣ. ಆ ಹೆಸರೇ ಇವನನ್ನು ಬಲಪಡಿಸಿತು. ಆತನ ಮೂಲಕ ಉಂಟಾಗಿರುವ ನಂಬಿಕೆಯೇ ಇವನನ್ನು ನಿಮ್ಮೆಲ್ಲರ ಮುಂದೆ ಗುಣಪಡಿಸಿತು.


ಎಲೀಯನು ತನ್ನ ಮೇಲಂಗಿಯನ್ನು ತೆಗೆದು ಅದರಿಂದ ನೀರನ್ನು ಹೊಡೆದನು. ಆಗ ನೀರು ಎರಡು ಭಾಗವಾಗಿ ಬಲಗಡೆಯಲ್ಲಿಯೂ ಎಡಗಡೆಯಲ್ಲಿಯೂ ನಿಂತುಕೊಂಡಿತು. ನಂತರ ಎಲೀಯ ಮತ್ತು ಎಲೀಷರು ಒಣನೆಲದ ಮೇಲೆ ನದಿಯನ್ನು ದಾಟಿದರು.


ಆದ್ದರಿಂದ ಹೋಗು. ನಿನ್ನ ಊರುಗೋಲನ್ನೂ ತೆಗೆದುಕೊಂಡು ಹೋಗು. ಯಾಕೆಂದರೆ ಅದರಿಂದಲೇ ನೀನು ಅದ್ಭುತಕಾರ್ಯಗಳನ್ನು ಮಾಡುವೆ” ಎಂದು ಹೇಳಿದನು.


ಆದ್ದರಿಂದ ನೀವು ನಿಮ್ಮ ಮನಸ್ಸುಗಳನ್ನು ಸೇವೆಗಾಗಿ ಸಿದ್ಧಪಡಿಸಿರಿ. ಅಲ್ಲದೆ ನಿಮ್ಮನ್ನು ಹತೋಟಿಯಲ್ಲಿಟ್ಟುಕೊಂಡಿರಿ. ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರೆಯುವ ಕೃಪಾವರದ ಮೇಲೆಯೇ ನಿಮ್ಮ ನಿರೀಕ್ಷೆಯೆಲ್ಲಾ ಇರಬೇಕು.


ಆದ್ದರಿಂದ ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಂಡು ನೀತಿಯೆಂಬ ವಜ್ರಕವಚವನ್ನು ಎದೆಗೆ ಬಿಗಿದುಕೊಂಡು


ಎಲೀಷನು ತನ್ನ ಸೇವಕನಾದ ಗೇಹಜಿಗೆ, “ಶೂನೇಮ್ಯಳಾದ ಆ ಸ್ತ್ರೀಯನ್ನು ಕರೆದುಕೊಂಡು ಬಾ” ಎಂದು ಹೇಳಿದನು. ಸೇವಕನು ಶೂನೇಮ್ಯಳಾದ ಆ ಸ್ತ್ರೀಯನ್ನು ಕರೆದುಕೊಂಡು ಬಂದಾಗ ಆಕೆಯು ಎಲೀಷನ ಎದುರಿನಲ್ಲಿ ನಿಂತುಕೊಂಡಳು.


ಆಕೆ ತುಂಬ ಕಷ್ಟಪಟ್ಟು ಕೆಲಸಮಾಡುವಳು. ಬಲವಾಗಿದ್ದಾಳೆ; ತನ್ನ ಕೆಲಸಗಳನ್ನೆಲ್ಲಾ ಮಾಡಲು ಶಕ್ತಳಾಗಿದ್ದಾಳೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು