2 ಅರಸುಗಳು 4:35 - ಪರಿಶುದ್ದ ಬೈಬಲ್35 ಎಲೀಷನು ಕೊಠಡಿಯಿಂದ ಹೊರಗೆ ಬಂದು ಮನೆಯಲ್ಲಿ ಸುತ್ತಲೂ ನಡೆದಾಡಿದನು. ನಂತರ ಅವನು ಕೊಠಡಿಯೊಳಕ್ಕೆ ಹಿಂದಿರುಗಿ ಹೋಗಿ ಕೈಚಾಚಿ ಮಗುವನ್ನು ಅಪ್ಪಿಕೊಂಡನು. ಆಗ ಮಗು ಏಳು ಸಾರಿ ಸೀನಿ ತನ್ನ ಕಣ್ಣುಗಳನ್ನು ತೆರೆಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಆಮೇಲೆ ಹುಡುಗನನ್ನು ಬಿಟ್ಟು ಎದ್ದು ಮನೆಯಲ್ಲಿ ತುಸುಹೊತ್ತು ಅತ್ತಿತ್ತ ಅಡ್ಡಾಡಿ ತಿರುಗಿ ಅವನ ಮೇಲೆ ಬೋರಲು ಬೀಳಲು ಹುಡುಗನು ಏಳು ಸಾರಿ ಸೀನಿ ಕಣ್ದೆರೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಆಮೇಲೆ ಹುಡುಗನನ್ನು ಬಿಟ್ಟು ಎದ್ದು ಮನೆಯನ್ನು ತುಸುಹೊತ್ತು ಅತ್ತಿತ್ತ ಅಡ್ಡಾಡಿ, ತಿರುಗಿ ಅವನ ಮೇಲೆ ಬೋರಲು ಬೀಳಲು, ಹುಡುಗನು ಏಳು ಸಾರಿ ಸೀತು ಕಣ್ತೆರೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಆಮೇಲೆ ಹುಡುಗನನ್ನು ಬಿಟ್ಟು ಎದ್ದು ಮನೆಯಲ್ಲಿ ತುಸುಹೊತ್ತು ಅತ್ತಿತ್ತ ಅಡ್ಡಾಡಿ ತಿರಿಗಿ ಅವನ ಮೇಲೆ ಬೋರ್ಲ ಬೀಳಲು ಹುಡುಗನು ಏಳು ಸಾರಿ ಸೀತು ಕಣ್ದೆರೆದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಅವನು ಆಮೇಲೆ ಎದ್ದು ಕೋಣೆಯಲ್ಲಿ ಸ್ವಲ್ಪ ಅತ್ತಿತ್ತ ತಿರುಗಾಡಿ, ಪುನಃ ಅವನ ಮೇಲೆ ಬೋರಲು ಬಿದ್ದನು. ಆಗ ಆ ಹುಡುಗನು ಏಳು ಸಾರಿ ಸೀತು ಕಣ್ಣುಗಳನ್ನು ತೆರೆದನು. ಅಧ್ಯಾಯವನ್ನು ನೋಡಿ |
ಎಲೀಷನು ಸತ್ತಬಾಲಕನಿಗೆ ಮತ್ತೆ ಜೀವವನ್ನು ಬರುವಂತೆ ಮಾಡಿದ್ದರ ಬಗ್ಗೆ ಗೇಹಜಿಯು ರಾಜನಿಗೆ ಹೇಳುತ್ತಿದ್ದನು. ಎಲೀಷನು ಮರಳಿ ಜೀವಬರಿಸಿದ ಬಾಲಕನ ತಾಯಿಯು ಆ ಸಮಯದಲ್ಲಿ ರಾಜನ ಬಳಿಗೆ ಹೋದಳು. ತನ್ನ ಮನೆಯನ್ನು ಮತ್ತು ಭೂಮಿಯನ್ನು ತನಗೆ ಕೊಡಿಸಬೇಕೆಂದು ಕೇಳಿಕೊಳ್ಳಲು ಆಕೆ ಬಂದಿದ್ದಳು. ಗೇಹಜಿಯು, “ನನ್ನ ಒಡೆಯನೇ, ರಾಜನೇ, ಇವಳೇ ಆ ಸ್ತ್ರೀಯು! ಎಲೀಷನು ಮರಳಿ ಜೀವಬರಿಸಿದ ಬಾಲಕನು ಇವನೇ!” ಎಂದು ಹೇಳಿದನು.