2 ಅರಸುಗಳು 4:38 - ಪರಿಶುದ್ದ ಬೈಬಲ್38 ಎಲೀಷನು ಗಿಲ್ಗಾಲಿಗೆ ಮತ್ತೆ ಬಂದನು. ಆಗ ಆ ದೇಶದಲ್ಲಿ ಬರಗಾಲವಿತ್ತು. ಪ್ರವಾದಿಗಳ ಗುಂಪು ಎಲೀಷನ ಎದುರಿನಲ್ಲಿ ಕುಳಿತಿದ್ದರು. ಎಲೀಷನು ತನ್ನ ಸೇವಕನಿಗೆ, “ಒಂದು ದೊಡ್ಡ ಪಾತ್ರೆಯನ್ನು ಒಲೆಯ ಮೇಲಿಟ್ಟು ಪ್ರವಾದಿಗಳ ಗುಂಪಿಗೆಲ್ಲ ಸಾರನ್ನು ಮಾಡು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಎಲೀಷನು ತಿರುಗಿ ಗಿಲ್ಗಾಲಿಗೆ ಹೋದನು. ಆಗ ದೇಶದಲ್ಲಿ ಬರವಿದ್ದಿತು. ಪ್ರವಾದಿಮಂಡಳಿಯವರು ತನ್ನ ಮುಂದೆ ಒಟ್ಟಿಗೆ ಸೇರಿ ಬರಲು ಅವನು ತನ್ನ ಸೇವಕನಿಗೆ, “ದೊಡ್ಡ ಪಾತ್ರೆಯನ್ನು ತೆಗೆದುಕೊಂಡು ಇವರಿಗೋಸ್ಕರ ಅಡಿಗೆ ಮಾಡು” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಎಲೀಷನು ಪುನಃ ಗಿಲ್ಗಾಲಿಗೆ ಹೋದನು. ಆಗ ನಾಡಿನಲ್ಲಿ ಬರವಿತ್ತು. ಪ್ರವಾದಿಮಂಡಲಿಯವರು ತನ್ನ ಮುಂದೆ ಕೂಡಿಬರಲು ಅವನು ತನ್ನ ಸೇವಕನಿಗೆ, “ದೊಡ್ಡ ಹಂಡೆಯನ್ನು ತೆಗೆದುಕೊಂಡು ಇವರಿಗೆ ಅಡಿಗೆಮಾಡು,” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಎಲೀಷನು ತಿರಿಗಿ ಗಿಲ್ಗಾಲಿಗೆ ಹೋದನು. ಆಗ ದೇಶದಲ್ಲಿ ಬರವಿದ್ದಿತು. ಪ್ರವಾದಿ ಮಂಡಲಿಯವರು ತನ್ನ ಮುಂದೆ ಕೂಡಿ ಬರಲು ಅವನು ತನ್ನ ಸೇವಕನಿಗೆ - ದೊಡ್ಡ ಹಂಡೆಯನ್ನು ತೆಗೆದುಕೊಂಡು ಇವರಿಗೋಸ್ಕರ ಅಡಿಗೆಮಾಡು ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಎಲೀಷನು ತಿರುಗಿ ಗಿಲ್ಗಾಲಿಗೆ ಬಂದಾಗ, ದೇಶದಲ್ಲಿ ಬರ ಉಂಟಾಗಿತ್ತು. ಪ್ರವಾದಿಗಳ ಮಂಡಳಿ ಅವನ ಮುಂದೆ ಕುಳಿತಿರುವಾಗ, ಅವನು ತನ್ನ ಸೇವಕನಿಗೆ, “ನೀನು ದೊಡ್ಡ ಗಡಿಗೆಯನ್ನು ಮೇಲಿಟ್ಟು, ಈ ಜನರಿಗೋಸ್ಕರ ಅಡಿಗೆ ಮಾಡು,” ಎಂದನು. ಅಧ್ಯಾಯವನ್ನು ನೋಡಿ |
ಆಗ ಪೌಲನು ಹೀಗೆಂದನು: “ನಾನು ಯೆಹೂದ್ಯನು. ನಾನು ಹುಟ್ಟಿದ್ದು ಸಿಲಿಸಿಯ ದೇಶದ ತಾರ್ಸದಲ್ಲಿ. ಆದರೆ ನಾನು ಬೆಳೆದದ್ದು ಈ ಪಟ್ಟಣದಲ್ಲಿ. ನಾನು ಗಮಲಿಯೇಲನ ವಿದ್ಯಾರ್ಥಿಯಾಗಿದ್ದೆನು. ನಮ್ಮ ಪಿತೃಗಳ ಧರ್ಮಶಾಸ್ತ್ರದ ಬಗ್ಗೆ ಪ್ರತಿಯೊಂದನ್ನೂ ಅವನು ನನಗೆ ಬಹು ಸೂಕ್ಷ್ಮವಾಗಿ ಬೋಧಿಸಿದ್ದಾನೆ. ಇಂದು ಇಲ್ಲಿರುವ ನಿಮ್ಮೆಲ್ಲರಂತೆಯೇ ನಾನೂ ದೇವರ ಸೇವೆಯ ಬಗ್ಗೆ ಬಹಳ ಅಭಿಮಾನ ಉಳ್ಳವನಾಗಿದ್ದೆ.
ಒಂದು ದಿನ ಪ್ರವಾದಿಮಂಡಲಿಯವರಲ್ಲೊಬ್ಬನ ಪತ್ನಿಯು ಗೋಳಾಡುತ್ತಾ ಎಲೀಷನಲ್ಲಿಗೆ ಹೋಗಿ, “ನನ್ನ ಗಂಡನು ನಿನಗೆ ಸೇವಕನಂತಿದ್ದನು. ಈಗ ನನ್ನ ಗಂಡ ಸತ್ತಿದ್ದಾನೆ! ಅವನು ಯೆಹೋವನಲ್ಲಿ ಭಯಭಕ್ತಿ ಉಳ್ಳವನಾಗಿದ್ದದು ನಿನಗೆ ತಿಳಿದಿದೆ. ಆದರೆ ಅವನು ಒಬ್ಬ ಮನುಷ್ಯನಿಗೆ ಹಣವನ್ನು ಕೊಡಬೇಕಾಗಿದೆ. ಈಗ ಆ ಮನುಷ್ಯನು ನನ್ನ ಎರಡು ಗಂಡುಮಕ್ಕಳನ್ನು ತೆಗೆದುಕೊಂಡು ತನ್ನ ಗುಲಾಮರನ್ನಾಗಿ ಮಾಡಿಕೊಳ್ಳಲು ಬರುತ್ತಿದ್ದಾನೆ!” ಎಂದು ಹೇಳಿದಳು.