Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 4:4 - ಪರಿಶುದ್ದ ಬೈಬಲ್‌

4 ನಂತರ ನಿನ್ನ ಮನೆಗೆ ಹೋಗಿ ಬಾಗಿಲುಗಳನ್ನು ಮುಚ್ಚು. ನೀನು ಮತ್ತು ನಿನ್ನ ಮಕ್ಕಳು ಮಾತ್ರ ಮನೆಯಲ್ಲಿರಬೇಕು. ಈ ಪಾತ್ರೆಗಳಿಗೆಲ್ಲಾ ಎಣ್ಣೆಯನ್ನು ತುಂಬಿಸಿ ಪ್ರತ್ಯೇಕವಾದ ಸ್ಥಳದಲ್ಲಿಡು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅನಂತರ, ನೀನು, ನಿನ್ನ ಮಕ್ಕಳನ್ನು ಒಳಗೆ ಕರೆದುಕೊಂಡು ಬಾಗಿಲನ್ನು ಮುಚ್ಚಿ, ಎಣ್ಣೆಯನ್ನು ಪಾತ್ರೆಗಳಲ್ಲಿ ಹೊಯ್ದು ತುಂಬಿದವುಗಳನ್ನೆಲ್ಲಾ ಒಂದು ಕಡೆಯಿಡು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅನಂತರ ನಿನ್ನ ಮಕ್ಕಳನ್ನು ಒಳಗೆ ಕರೆದುಕೊಂಡು ಬಾಗಿಲನ್ನು ಮುಚ್ಚಿ ಎಣ್ಣೆಯನ್ನು ಆ ಪಾತ್ರೆಗಳಿಗೆ ಹೊಯ್ಯಿ, ತುಂಬಿದ ಆ ಪಾತ್ರೆಗಳನ್ನೆಲ್ಲಾ ಒಂದು ಕಡೆಯಿಡು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅನಂತರ ನಿನ್ನ ಮಕ್ಕಳನ್ನು ಒಳಗೆ ಕರಕೊಂಡು ಬಾಗಲನ್ನು ಮುಚ್ಚಿ ಎಣ್ಣೆಯನ್ನು ಪಾತ್ರೆಗಳಲ್ಲಿ ಹೊಯ್ದು ತುಂಬಿದವುಗಳನ್ನೆಲ್ಲಾ ಒತ್ತಟ್ಟಿಗಿಡು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನೀನು ಒಳಗೆ ಪ್ರವೇಶಿಸಿ, ನೀನೂ, ನಿನ್ನ ಪುತ್ರರೂ ಬಾಗಿಲು ಮುಚ್ಚಿಕೊಂಡು, ಆ ಪಾತ್ರೆಗಳಲ್ಲೆಲ್ಲಾ ಎಣ್ಣೆ ಹೊಯ್ದು ತುಂಬಿದ್ದನ್ನು ಒಂದು ಕಡೆ ಇಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 4:4
13 ತಿಳಿವುಗಳ ಹೋಲಿಕೆ  

ನೀವು ಪ್ರಾರ್ಥನೆ ಮಾಡಬೇಕಾದರೆ, ನಿಮ್ಮ ಕೋಣೆಯೊಳಗೆ ಹೋಗಿ ಬಾಗಿಲನ್ನು ಮುಚ್ಚಿಕೊಂಡು ನಿಮಗೆ ಕಾಣದಿರುವ ನಿಮ್ಮ ತಂದೆಗೆ ಪ್ರಾರ್ಥಿಸಿ. ರಹಸ್ಯದಲ್ಲಿ ನಡೆಯುವ ಕಾರ್ಯಗಳನ್ನು ನೋಡಬಲ್ಲ ನಿಮ್ಮ ತಂದೆಯು ನಿಮಗೆ ಪ್ರತಿಫಲವನ್ನು ಕೊಡುವನು.


ನಮ್ಮಲ್ಲಿ ಕಾರ್ಯಮಾಡುತ್ತಿರುವ ತನ್ನ ಶಕ್ತಿಯಿಂದ ನಾವು ಕೇಳುವುದಕ್ಕಿಂತಲೂ ಯೋಚಿಸುವುದಕ್ಕಿಂತಲೂ ಎಷ್ಟೋ ಹೆಚ್ಚೆಚ್ಚಾಗಿ ದೇವರು ಮಾಡಬಲ್ಲನು.


ಪೇತ್ರನು ಜನರೆಲ್ಲರನ್ನು ಕೋಣೆಯಿಂದ ಹೊರಗೆ ಕಳುಹಿಸಿ ಮೊಣಕಾಲೂರಿ ಪ್ರಾರ್ಥಿಸಿದನು. ಬಳಿಕ ಅವನು ತಬಿಥಳ ದೇಹದ ಕಡೆಗೆ ತಿರುಗಿ, “ತಬಿಥಾ, ಎದ್ದುನಿಲ್ಲು!” ಎಂದನು. ಆಕೆ ತನ್ನ ಕಣ್ಣುಗಳನ್ನು ತೆರೆದಳು. ಆಕೆಯು ಪೇತ್ರನನ್ನು ಕಂಡು ಎದ್ದು ಕುಳಿತುಕೊಂಡಳು.


ಬಳಿಕ ಯೇಸು ಆ ರೊಟ್ಟಿಗಳನ್ನು ತೆಗೆದುಕೊಂಡು ಅವುಗಳಿಗಾಗಿ ದೇವರಿಗೆ ಸ್ತೋತ್ರಸಲ್ಲಿಸಿ, ಕುಳಿತುಕೊಂಡಿದ್ದ ಜನರಿಗೆ ಕೊಟ್ಟನು. ಆತನು ಮೀನುಗಳನ್ನು ಕೊಡುವಾಗಲೂ ಅದೇ ರೀತಿ ಮಾಡಿದನು. ಎಲ್ಲರೂ ತಮಗೆ ಬೇಕಾದಷ್ಟು ತಿಂದರು.


ಆದರೆ ಆ ಜನರೆಲ್ಲರೂ ಯೇಸುವನ್ನು ಗೇಲಿ ಮಾಡಿದರು. ಯೇಸು ಆ ಜನರೆಲ್ಲರನ್ನು ಹೊರಗೆ ಕಳುಹಿಸಿ, ಆ ಬಾಲಕಿಯ ತಂದೆತಾಯಿಗಳನ್ನು ಮತ್ತು ತನ್ನ ಮೂವರು ಶಿಷ್ಯರನ್ನು ಮಾತ್ರ ತನ್ನೊಂದಿಗೆ ಕರೆದುಕೊಂಡು ಆ ಬಾಲಕಿಯ ಕೊಠಡಿಯೊಳಕ್ಕೆ ಹೋದನು.


ನನ್ನ ಜನರೇ, ನಿಮ್ಮ ನಿಮ್ಮ ಕೋಣೆಯೊಳಗೆ ಹೋಗಿ ಕದಮುಚ್ಚಿರಿ. ಸ್ವಲ್ಪಕಾಲ ನೀವು ಅಲ್ಲಿಯೇ ಅಡಗಿಕೊಳ್ಳಿರಿ. ದೇವರ ಕೋಪ ತೀರುವ ತನಕ ಅಲ್ಲಿಯೇ ಅವಿತುಕೊಳ್ಳಿರಿ.


ಆಗ ಎಲೀಷನು, “ಹೋಗಿ ನಿನ್ನ ನೆರೆಯವರೆಲ್ಲರಿಂದ ಪಾತ್ರೆಗಳನ್ನು ತೆಗೆದುಕೊ. ಅವು ಬರಿದಾಗಿರಬೇಕು. ಆದಷ್ಟು ಪಾತ್ರೆಗಳನ್ನು ತೆಗೆದುಕೊ.


ಆ ಸ್ತ್ರೀಯು ಎಲೀಷನ ಬಳಿಯಿಂದ ತನ್ನ ಮನೆಯೊಳಕ್ಕೆ ಹೋಗಿ ಬಾಗಿಲನ್ನು ಮುಚ್ಚಿದಳು. ಅವಳು ಮತ್ತು ಅವಳ ಮಕ್ಕಳು ಮಾತ್ರ ಮನೆಯಲ್ಲಿದ್ದರು. ಅವಳ ಮಕ್ಕಳು ಪಾತ್ರೆಗಳನ್ನು ಅವಳ ಬಳಿಗೆ ತಂದರು; ಅವಳು ಆ ಪಾತ್ರೆಗಳಿಗೆ ಎಣ್ಣೆಯನ್ನು ಸುರಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು