2 ಅರಸುಗಳು 4:41 - ಪರಿಶುದ್ದ ಬೈಬಲ್41 ಆದರೆ ಎಲೀಷನು, “ಸ್ವಲ್ಪ ಹಿಟ್ಟನ್ನು ತನ್ನಿ” ಎಂದು ಹೇಳಿದನು. ಅವರು ಎಲೀಷನ ಬಳಿಗೆ ಹಿಟ್ಟನ್ನು ತಂದರು. ಅವನು ಅದನ್ನು ಪಾತ್ರೆಯೊಳಗೆ ಹಾಕಿದನು. ನಂತರ ಎಲೀಷನು, “ಜನರಿಗೆ ಸಾರನ್ನು ಬಡಿಸಿ, ಅವರು ಊಟಮಾಡಲಿ” ಎಂದು ಹೇಳಿದನು. ಆಗ ಆ ಸಾರಿನಲ್ಲಿ ಯಾವ ದೋಷವೂ ಇರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ಆಗ ಎಲೀಷನು, “ಹಿಟ್ಟನ್ನು ತಂದು ಕೊಡಿರಿ” ಎಂದು ಹೇಳಿದನು. ಅವರು ತಂದಾಗ, ಅದನ್ನು ಆ ಪಾತ್ರೆಯೊಳಗೆ ಹಾಕಿ, “ಈಗ ಇದನ್ನು ಬಡಿಸಬಹುದು. ಜನರು ಇದನ್ನು ಊಟಮಾಡಲಿ” ಎಂದನು. ಕೂಡಲೇ ಪಾತ್ರೆಯಲ್ಲಿದ್ದ ವಿಷವೆಲ್ಲಾ ಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ಆಗ ಅವನು, “ಹಿಟ್ಟನ್ನು ತಂದುಕೊಡಿ,” ಎಂದು ಹೇಳಿದನು; ಅವರು ತರಲು ಅದನ್ನು ಆ ಪಾತ್ರೆಯೊಳಗೆ ಹಾಕಿ, “ಈಗ ಇದನ್ನು ಬಡಿಸಬಹುದು,” ಎಂದನು. ಕೂಡಲೆ ಪಾತ್ರೆಯಲ್ಲಿದ್ದ ವಿಷವೆಲ್ಲಾ ಹೋಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ಆಗ ಅವನು - ಹಿಟ್ಟನ್ನು ತಂದುಕೊಡಿರಿ ಎಂದು ಹೇಳಿದನು; ಅವರು ತರಲು ಅದನ್ನು ಆ ಪಾತ್ರೆಯೊಳಗೆ ಹಾಕಿ ಈಗ ಇದನ್ನು ಬಡಿಸಬಹುದು ಅಂದನು. ಕೂಡಲೆ ಪಾತ್ರೆಯಲ್ಲಿದ್ದ ವಿಷವೆಲ್ಲಾ ಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 ಆಗ ಎಲೀಷನು ಹಿಟ್ಟನ್ನು ತೆಗೆದುಕೊಂಡು ಬರಲು ಹೇಳಿ, ಅದನ್ನು ಗಡಿಗೆಯಲ್ಲಿ ಹಾಕಿ, “ಈಗ ಇದನ್ನು ಜನರಿಗೆ ಬಡಿಸಿರಿ,” ಎಂದನು. ಆಗ ಆ ಗಡಿಗೆಯಲ್ಲಿನ ವಿಷವೆಲ್ಲಾ ಹೋಗಿತ್ತು. ಅಧ್ಯಾಯವನ್ನು ನೋಡಿ |