Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 4:43 - ಪರಿಶುದ್ದ ಬೈಬಲ್‌

43 ಎಲೀಷನ ಸೇವಕನು, “ಏನು? ಇಲ್ಲಿ ನೂರು ಮಂದಿ ಜನರಿದ್ದಾರೆ. ಈ ಆಹಾರವನ್ನು ಇಲ್ಲಿರುವ ಜನರಿಗೆಲ್ಲ ಹೇಗೆ ಕೊಡಲಿ?” ಎಂದನು. ಆದರೆ ಎಲೀಷನು, “ಜನರಿಗೆ ತಿನ್ನಲು ಆಹಾರವನ್ನು ಕೊಡು, ಯೆಹೋವನು ಹೀಗೆನ್ನುವನು: ‘ಅವರು ತಿಂದರೂ ಆಹಾರವು ಉಳಿಯುತ್ತದೆ’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಅದಕ್ಕೆ ಅವನು, “ಇಷ್ಟನ್ನು ನೂರು ಮಂದಿಗೆ ಹೇಗೆ ಬಡಿಸಲಿ” ಎಂದನು. ಎಲೀಷನು ಅವನಿಗೆ, “ಇರಲಿ, ಕೊಡು. ಅವರು ಊಟಮಾಡಲಿ. ಅವರು ಅದನ್ನು ಊಟಮಾಡಿ ತೃಪ್ತರಾಗಿ ಇನ್ನೂ ಉಳಿಸಿಕೊಳ್ಳುವರೆಂದು ಯೆಹೋವನು ಎನ್ನುತ್ತಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಅದಕ್ಕೆ ಅವನು, “ಇಷ್ಟನ್ನು ನೂರುಮಂದಿಗೆ ಹೇಗೆ ಬಡಿಸಲಿ,” ಎಂದನು. ಎಲೀಷನು, “ಇರಲಿ, ಕೊಡು; ಅವರು ಊಟಮಾಡಲಿ. ‘ಅವರು ಅದನ್ನು ಊಟಮಾಡಿ ತೃಪ್ತರಾಗಿ ಇನ್ನೂ ಉಳಿಸಿಕೊಳ್ಳುವರು’ ಎಂಬುದು ಸರ್ವೇಶ್ವರನ ನುಡಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಅದಕ್ಕೆ ಅವನು - ಇಷ್ಟನ್ನು ನೂರು ಮಂದಿಗೆ ಹೇಗೆ ಬಡಿಸಲಿ ಅಂದನು. ಎಲೀಷನು ಅವನಿಗೆ - ಇರಲಿ, ಕೊಡು; ಅವರು ಊಟ ಮಾಡಲಿ. ಅವರು ಅದನ್ನು ಊಟಮಾಡಿ ತೃಪ್ತರಾಗಿ ಇನ್ನೂ ಉಳಿಸಿಕೊಳ್ಳುವರೆಂದು ಯೆಹೋವನು ಅನ್ನುತ್ತಾನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಅವನ ಸೇವಕನು, “ಇದನ್ನು ನೂರು ಮಂದಿಗೆ ಬಡಿಸುವುದು ಹೇಗೆ?” ಎಂದನು. “ ‘ತಿನ್ನಲು ಜನರಿಗೆ ನೀಡು, ಅವರು ತಿಂದು ಅನಂತರ ಉಳಿಯುವುದು,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದು ಎಲೀಷನು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 4:43
15 ತಿಳಿವುಗಳ ಹೋಲಿಕೆ  

ಆದರೆ ಯೇಸು ಅಪೊಸ್ತಲರಿಗೆ, “ನೀವೇ ಅವರಿಗೆ ಸ್ವಲ್ಪ ಆಹಾರ ಕೊಡಿರಿ” ಎಂದು ಹೇಳಿದನು. ಅದಕ್ಕೆ ಅಪೊಸ್ತಲರು, “ನಮ್ಮಲ್ಲಿ ಕೇವಲ ಐದು ರೊಟ್ಟಿ ಮತ್ತು ಎರಡು ಮೀನುಗಳಿವೆ. ನಾವೇ ಹೋಗಿ ಈ ಜನರಿಗೆಲ್ಲಾ ಆಹಾರವನ್ನು ಕೊಂಡುಕೊಳ್ಳಬೇಕೇ?” ಎಂದು ಕೇಳಿದರು.


ಜನರೆಲ್ಲರೂ ತಿಂದು ತೃಪ್ತರಾದರು. ಜನರು ತಿಂದು ಮುಗಿಸಿದ ನಂತರ, ತಿನ್ನಲಾರದೆ ಉಳಿಸಿದ ಚೂರುಗಳನ್ನು ಶಿಷ್ಯರು ಶೇಖರಿಸಿದಾಗ ಹನ್ನೆರಡು ಬುಟ್ಟಿಗಳು ತುಂಬಿಹೋದವು.


ಅಂದ್ರೆಯನು, “ಇಲ್ಲಿರುವ ಒಬ್ಬ ಹುಡುಗನ ಬಳಿ ಜವೆಗೋಧಿಯ ಐದು ರೊಟ್ಟಿಗಳಿವೆ ಮತ್ತು ಎರಡು ಚಿಕ್ಕ ಮೀನುಗಳಿವೆ. ಆದರೆ ಅವು ಈ ಜನಸಮೂಹಕ್ಕೆ ಸಾಕಾಗುವುದಿಲ್ಲ” ಎಂದು ಹೇಳಿದನು.


ಎಲ್ಲರೂ ತಿಂದು ತೃಪ್ತರಾದರು. ತಿನ್ನಲಾರದೆ ಬಿಟ್ಟಿದ್ದ ಆಹಾರದ ತುಂಡುಗಳನ್ನು ಶೇಖರಿಸಿದಾಗ ಹನ್ನೆರಡು ಬುಟ್ಟಿಗಳು ತುಂಬಿಹೋದವು.


“ನಾನು ನಾಲ್ಕು ಸಾವಿರ ಜನರಿಗಾಗಿ ಏಳು ರೊಟ್ಟಿಗಳನ್ನು ಮುರಿದು ಕೊಟ್ಟದ್ದನ್ನು ಜ್ಞಾಪಿಸಿಕೊಳ್ಳಿ. ಅವರು ಊಟ ಮಾಡಿದ ಮೇಲೆ ತಿನ್ನಲಾರದೆ ಬಿಟ್ಟ ಚೂರುಗಳನ್ನು ಎಷ್ಟು ಬುಟ್ಟಿಗಳಲ್ಲಿ ತುಂಬಿದಿರಿ ಎಂಬುದು ನಿಮಗೆ ನೆನಪಿಲ್ಲವೇ?” ಎಂದು ಕೇಳಿದನು. ಅದಕ್ಕೆ ಶಿಷ್ಯರು, “ನಾವು ಏಳು ಬುಟ್ಟಿಗಳಲ್ಲಿ ತುಂಬಿದೆವು” ಎಂದು ಉತ್ತರಿಸಿದರು.


ಜನರೆಲ್ಲರೂ ತಿಂದು ತೃಪ್ತರಾದರು. ಬಳಿಕ ತಿನ್ನಲಾರದೆ ಉಳಿದುಹೋದ ಆಹಾರದ ಚೂರುಗಳನ್ನು ಶಿಷ್ಯರು ಶೇಖರಿಸಿದಾಗ ಏಳು ಬುಟ್ಟಿಗಳು ತುಂಬಿಹೋದವು.


ಅದಕ್ಕೆ ಶಿಷ್ಯರು, “ಇಲ್ಲಿಗೆ ಯಾವ ಊರೂ ಸಮೀಪದಲ್ಲಿಲ್ಲ. ಈ ಜನರಿಗೆಲ್ಲಾ ಸಾಕಾಗುವಷ್ಟು ರೊಟ್ಟಿಯನ್ನು ನಾವು ಎಲ್ಲಿಂದ ತರಲು ಸಾದ್ಯ?” ಎಂದು ಉತ್ತರಿಸಿದರು.


ಇವರು ನನ್ನ ಬಳಿಗೆ ಬಂದು, ‘ಮಾಂಸವನ್ನು ನಮಗೆ ತಿನ್ನಲಿಕ್ಕೆ ಕೊಡು’ ಎಂದು ಕೇಳಿಕೊಳ್ಳುತ್ತಾರಲ್ಲಾ! ಇಷ್ಟು ಜನಕ್ಕೆ ಬೇಕಾದ ಮಾಂಸವು ನನಗೆ ಎಲ್ಲಿಂದ ದೊರಕೀತು?


ಆದರೆ ಯೆಹೋವನು ಮೋಶೆಗೆ, “ಯೆಹೋವನ ಶಕ್ತಿಗೆ ಮಿತಿಯಿಲ್ಲ. ನಾನು ಹೇಳುತ್ತಿರುವ ಸಂಗತಿಗಳು ನಡೆಯುವುದನ್ನು ನೀನು ನೋಡುವೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು