2 ಅರಸುಗಳು 5:1 - ಪರಿಶುದ್ದ ಬೈಬಲ್1 ಅರಾಮ್ಯರ ರಾಜನ ಸೇನೆಯಲ್ಲಿ ನಾಮಾನನೆಂಬ ಸೇನಾಪತಿಯಿದ್ದನು. ನಾಮಾನನು ಅವನ ರಾಜನಿಗೆ ಬಹಳ ಪ್ರಾಮುಖ್ಯ ವ್ಯಕ್ತಿಯಾಗಿದ್ದನು. ಯೆಹೋವನು ನಾಮಾನನ ಮುಖಾಂತರ ಅರಾಮ್ಯರಿಗೆ ವಿಜಯವನ್ನು ತಂದುಕೊಟ್ಟಿದ್ದರಿಂದ ಅವನು ಪ್ರಮುಖನಾಗಿದ್ದನು. ನಾಮಾನನು ಮಹಾಪುರುಷನೂ ಶಕ್ತಿಶಾಲಿಯೂ ಆದ ಮನುಷ್ಯನಾಗಿದ್ದನು. ಆದರೆ ಅವನು ಕುಷ್ಠರೋಗ ಪೀಡಿತನಾಗಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಅರಾಮ್ಯರ ಅರಸನಿಗೆ ನಾಮಾನನೆಂಬ ಒಬ್ಬ ಸೇನಾಧಿಪತಿಯಿದ್ದನು. ಯೆಹೋವನು ಇವನ ಮುಖಾಂತರವಾಗಿ ಅರಾಮ್ಯರಿಗೆ ಜಯವನ್ನು ಅನುಗ್ರಹಿಸಿದ್ದದರಿಂದ ಅರಸನು ಇವನನ್ನು ಮಹಾ ಪುರುಷನೆಂದೂ ಸನ್ಮಾನಯೋಗ್ಯನೆಂದೂ ಗೌರವಿಸುತ್ತಿದ್ದನು. ಆದರೆ ಪರಾಕ್ರಮಶಾಲಿಯಾದ ಇವನು ಕುಷ್ಠರೋಗಿಯಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸಿರಿಯಾದ ರಾಜನಿಗೆ ನಾಮಾನ್ ಎಂಬೊಬ್ಬ ಸೇನಾಪತಿಯಿದ್ದನು. ಸರ್ವೇಶ್ವರಸ್ವಾಮಿ ಇವನ ಮುಂಖಾತರ ಸಿರಿಯಾದವರಿಗೆ ಜಯವನ್ನು ಅನುಗ್ರಹಿಸಿದ್ದರು. ಆದ್ದರಿಂದ ರಾಜನು ಇವನನ್ನು ಮಹಾಪುರುಷನೆಂದೂ ಸನ್ಮಾನ್ಯನೆಂದೂ ಗೌರವಿಸುತ್ತಿದ್ದನು. ಆದರೆ ಪರಾಕ್ರಮಶಾಲಿಯಾದ ಇವನು ಭೀಕರ ಚರ್ಮರೋಗದಿಂದ ನರಳುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಅರಾಮ್ಯರ ಅರಸನಿಗೆ ನಾಮಾನನೆಂಬೊಬ್ಬ ಸೇನಾಪತಿಯಿದ್ದನು. ಯೆಹೋವನು ಇವನ ಮುಖಾಂತರವಾಗಿ ಅರಾಮ್ಯರಿಗೆ ಜಯವನ್ನು ಅನುಗ್ರಹಿಸಿದದರಿಂದ ಅರಸನು ಇವನನ್ನು ಮಹಾಪುರುಷನೆಂದೂ ಸನ್ಮಾನಯೋಗ್ಯನೆಂದೂ ಎಣಿಸುತ್ತಿದ್ದನು. ಆದರೆ ಪರಾಕ್ರಮಶಾಲಿಯಾದ ಇವನು ಕುಷ್ಠರೋಗಿಯಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಅರಾಮಿನ ಅರಸನ ಸೈನ್ಯಾಧಿಪತಿ ನಾಮಾನನು ತನ್ನ ಯಜಮಾನನ ಮುಂದೆ ಮಹಾಪುರುಷನಾಗಿಯೂ, ಘನವುಳ್ಳವನಾಗಿಯೂ ಇದ್ದನು. ಏಕೆಂದರೆ ಅವನಿಂದ ಯೆಹೋವ ದೇವರು ಅರಾಮ್ಯರಿಗೆ ಬಿಡುಗಡೆಯನ್ನು ಉಂಟುಮಾಡಿದ್ದರು. ಇದಲ್ಲದೆ ಅವನು ಪರಾಕ್ರಮಶಾಲಿಯಾಗಿದ್ದನು. ಆದರೆ ಅವನು ಕುಷ್ಠರೋಗಿಯಾಗಿದ್ದನು. ಅಧ್ಯಾಯವನ್ನು ನೋಡಿ |
ಅರಸನ ನಂತರ ರಾಜ್ಯದಲ್ಲಿ ಯೆಹೂದಿಯಾದ ಮೊರ್ದೆಕೈಯೇ ಮುಖ್ಯ ವ್ಯಕ್ತಿಯಾಗಿದ್ದನು. ರಾಜ್ಯದಲ್ಲಿ ಅವನಿಗೆ ಎರಡನೇ ಸ್ಥಾನವಿತ್ತು. ಯೆಹೂದ್ಯರೊಳಗೆ ಅವನು ಪ್ರಮುಖ ವ್ಯಕ್ತಿಯಾಗಿದ್ದನು. ಯೆಹೂದ್ಯರೆಲ್ಲರೂ ಅವನನ್ನು ಬಹಳವಾಗಿ ಗೌರವಿಸುತ್ತಿದ್ದರು. ತನ್ನ ಜನರ ಒಳಿತಿಗಾಗಿ (ಜನರಿಗೋಸ್ಕರವಾಗಿ) ಮೊರ್ದೆಕೈ ಬಹಳವಾಗಿ ಪ್ರಯಾಸಪಟ್ಟಿದ್ದರಿಂದ ಜನರು ಅವನನ್ನು ಸನ್ಮಾನಿಸಿದರು; ಮೊರ್ದೆಕೈ ಯೆಹೂದ್ಯರೆಲ್ಲರಿಗೆ ಸಮಾಧಾನವನ್ನು ತಂದನು.