Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 5:2 - ಪರಿಶುದ್ದ ಬೈಬಲ್‌

2 ಅರಾಮ್ಯರು ಇಸ್ರೇಲಿನಲ್ಲಿ ಹೋರಾಡಲು ಸೈನಿಕರ ಅನೇಕ ಗುಂಪುಗಳನ್ನು ಕಳುಹಿಸಿದರು. ಸೈನಿಕರು ಜನರನ್ನು ತಮ್ಮ ಗುಲಾಮರಂತೆ ಹಿಡಿದುತಂದರು. ಒಂದು ಸಲ ಚಿಕ್ಕ ಹುಡುಗಿಯೊಬ್ಬಳನ್ನು ಇಸ್ರೇಲ್ ದೇಶದಿಂದ ಹಿಡಿದುತಂದರು. ಈ ಚಿಕ್ಕ ಹುಡುಗಿಯು ನಾಮಾನನ ಪತ್ನಿಗೆ ಸೇವಕಿಯಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅರಾಮ್ಯರು ಒಂದು ಸಾರಿ ಸುಲಿಗೆ ಮಾಡುವುದಕ್ಕೋಸ್ಕರ ಇಸ್ರಾಯೇಲರ ಪ್ರಾಂತ್ಯಕ್ಕೆ ಹೋಗಿ ಬರುವಾಗ ಅಲ್ಲಿನ ಒಬ್ಬ ಹುಡುಗಿಯನ್ನು ಹಿಡಿದುಕೊಂಡು ಬಂದಿದ್ದರು. ಆಕೆಯು ನಾಮಾನನ ಹೆಂಡತಿಗೆ ಸೇವಕಿಯಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಸಿರಿಯಾದವರು, ಒಮ್ಮೆ ಸುಲಿಗೆಗಾಗಿ ಇಸ್ರಯೇಲರ ಪ್ರಾಂತ್ಯಕ್ಕೆ ಹೋಗಿಬರುವಾಗ, ಅಲ್ಲಿನ ಒಬ್ಬ ಹುಡುಗಿಯನ್ನು ಹಿಡಿದುಕೊಂಡು ಬಂದರು. ಆಕೆ ನಾಮಾನನ ಹೆಂಡತಿಗೆ ದಾಸಿಯಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅರಾಮ್ಯರು ಒಂದು ಸಾರಿ ಸುಲಿಗೆಮಾಡುವದಕ್ಕೋಸ್ಕರ ಇಸ್ರಾಯೇಲ್ಯರ ಪ್ರಾಂತಕ್ಕೆ ಹೋಗಿ ಬರುವಾಗ ಅಲ್ಲಿನ ಒಬ್ಬ ಹುಡುಗಿಯನ್ನು ಹಿಡಿದುಕೊಂಡು ಬಂದರು; ಆಕೆಯು ನಾಮಾನನ ಹೆಂಡತಿಗೆ ದಾಸಿಯಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅರಾಮಿನವರು ಗುಂಪುಗುಂಪಾಗಿ ಹೊರಟು, ಇಸ್ರಾಯೇಲ್ ದೇಶದಿಂದ ಒಬ್ಬ ಹುಡುಗಿಯನ್ನು ಸೆರೆಯಾಗಿ ಹಿಡಿದುಕೊಂಡು ಬಂದರು. ಅವಳು ನಾಮಾನನ ಹೆಂಡತಿಗೆ ಸೇವಕಿಯಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 5:2
6 ತಿಳಿವುಗಳ ಹೋಲಿಕೆ  

ಇಸ್ರೇಲಿನ ರಾಜನು ಅರಾಮ್ಯರ ಸೇನೆಗೆ ಆಹಾರವನ್ನು ಹೇರಳವಾಗಿ ಸಿದ್ಧಪಡಿಸಿದನು. ಅರಾಮ್ಯರ ಸೇನೆಯು ಊಟಮಾಡಿ, ನೀರನ್ನು ಕುಡಿದರು. ನಂತರ ಇಸ್ರೇಲಿನ ರಾಜನು ಅರಾಮ್ಯರ ಸೇನೆಗೆ ತಮ್ಮ ಒಡೆಯನ ಬಳಿಗೆ ಹೋಗಲು ಆಜ್ಞಾಪಿಸಿದನು. ಅಂದಿನಿಂದ ಇಸ್ರೇಲ್ ದೇಶದ ಮೇಲೆ ಧಾಳಿಮಾಡಲು ಯಾವ ಸೈನಿಕರನ್ನೂ ಅರಾಮ್ಯರು ಕಳುಹಿಸಲಿಲ್ಲ.


ಎಲೀಷನು ತೀರಿಕೊಂಡಾಗ ಜನರು ಅವನನ್ನು ಸಮಾಧಿಮಾಡಿದರು. ವಸಂತಮಾಸದ ಒಂದು ದಿನ, ಮೋವಾಬ್ಯ ಸೈನಿಕರ ಒಂದು ಗುಂಪು ಇಸ್ರೇಲಿಗೆ ಸುಲಿಗೆ ಮಾಡಲು ಬಂದಿತು.


ಸೇವಕರು ತಮಗೆ ಬೇಕಾದವುಗಳಿಗಾಗಿ ತಮ್ಮ ಯಜಮಾನರನ್ನು ಅವಲಂಬಿಸಿಕೊಳ್ಳುವರು; ಸೇವಕಿಯರು ತಮ್ಮ ಯಜಮಾನಿಯರನ್ನು ಅವಲಂಬಿಸಿಕೊಳ್ಳುವರು. ಅಂತೆಯೇ, ನಾವು ನಮ್ಮ ದೇವರಾದ ಯೆಹೋವನನ್ನು ಅವಲಂಬಿಸಿಕೊಳ್ಳುವೆವು. ಆತನ ಕರುಣೆಯನ್ನೇ ನಿರೀಕ್ಷಿಸುವೆವು.


ಅಬೀಮೆಲೆಕ ಮತ್ತು ಅವನ ಸೈನಿಕರು ರಾತ್ರಿಯಲ್ಲಿ ಎದ್ದು ನಗರಕ್ಕೆ ಹೋದರು. ಆ ಸೈನಿಕರು ತಮ್ಮನ್ನು ನಾಲ್ಕು ಗುಂಪುಗಳನ್ನಾಗಿ ಮಾಡಿಕೊಂಡು ಶೆಕೆಮ್ ನಗರದ ಹತ್ತಿರ ಅಡಗಿಕೊಂಡರು.


ಈ ಹುಡುಗಿಯು ನಾಮಾನನ ಪತ್ನಿಗೆ, “ನನ್ನ ಒಡೆಯನಾದ ನಾಮಾನನು ಸಮಾರ್ಯದಲ್ಲಿ ವಾಸಿಸುವ ಪ್ರವಾದಿಯಾದ ಎಲೀಷನನ್ನು ಭೇಟಿಮಾಡಬೇಕೆಂದು ನಾನು ಆಶಿಸುತ್ತೇನೆ. ಆ ಪ್ರವಾದಿಯು ನಾಮಾನನ ಕುಷ್ಠರೋಗವನ್ನು ಗುಣಪಡಿಸಬಲ್ಲನು” ಎಂದು ಹೇಳಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು