Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 5:20 - ಪರಿಶುದ್ದ ಬೈಬಲ್‌

20 ಆದರೆ ದೇವಮನುಷ್ಯನಾದ ಎಲೀಷನ ಸೇವಕನಾದ ಗೇಹಜಿಯು, “ನೋಡು, ಅರಾಮ್ಯನಾದ ನಾಮಾನನು ತಂದಿದ್ದ ಕಾಣಿಕೆಯನ್ನು ಸ್ವೀಕರಿಸದೆ ನನ್ನ ಒಡೆಯನಾದ ಎಲೀಷನು ಅವನನ್ನು ಕಳುಹಿಸಿಬಿಟ್ಟನು! ಯೆಹೋವನಾಣೆಯಾಗಿ, ನಾನು ನಾಮಾನನ ಹಿಂದೆ ಓಡಿಹೋಗಿ ಅವನಿಂದ ಏನನ್ನಾದರೂ ಪಡೆಯುತ್ತೇನೆ!” ಎಂದು ತನ್ನೊಳಗೆ ಅಂದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಾಮಾನನು ಸ್ವಲ್ಪ ದೂರಕ್ಕೆ ಹೋದ ನಂತರ ದೇವರ ಮನುಷ್ಯನಾದ ಎಲೀಷನ ಸೇವಕನಾದ ಗೇಹಜಿಯು ಮನಸ್ಸಿನಲ್ಲಿ, “ನೋಡು, ನನ್ನ ಯಜಮಾನನು ಆ ಅರಾಮ್ಯನಾದ ನಾಮಾನನಿಂದ ಏನೂ ತೆಗೆದುಕೊಳ್ಳದೆ ಅವನನ್ನು ಹಾಗೆಯೇ ಕಳುಹಿಸಿಬಿಟ್ಟನಲ್ಲಾ, ಯೆಹೋವನಾಣೆ, ನಾನು ಅವನ ಹಿಂದೆ ಓಡುತ್ತಾ ಹೋಗಿ ಅವನಿಂದ ಸ್ವಲ್ಪವನ್ನಾದರೂ ತೆಗೆದುಕೊಂಡು ಬರುವೆನು” ಅಂದುಕೊಂಡು ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನಾಮಾನನು ಸ್ವಲ್ಪದೂರಕ್ಕೆ ಹೋದನಂತರ ದೈವಪುರುಷನಾದ ಎಲೀಷನ ಸೇವಕ ಗೇಹಜಿಯು ಮನಸ್ಸಿನಲ್ಲೇ, “ನನ್ನ ಯಜಮಾನ ಆ ಸಿರಿಯಾದ ನಾಮಾನನಿಂದ ಏನೂ ತೆಗೆದುಕೊಳ್ಳದೆ ಅವನನ್ನು ಹಾಗೆಯೇ ಕಳುಹಿಸಿಬಿಟ್ಟರಲ್ಲಾ! ಸರ್ವೇಶ್ವರನಾಣೆ, ನಾನು ಅವನ ಹಿಂದೆ ಓಡುತ್ತಾ ಹೋಗಿ, ಅವನಿಂದ ಸ್ವಲ್ಪವನ್ನಾದರೂ ಬಾಚಿಕೊಂಡು ಬರುವೆನು,” ಎಂದುಕೊಂಡು ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನಾಮಾನನು ಸ್ವಲ್ಪದೂರಕ್ಕೆ ಹೋದನಂತರ ದೇವರ ಮನುಷ್ಯನಾದ ಎಲೀಷನ ಸೇವಕ ಗೇಹಜಿಯು ಮನಸ್ಸಿನಲ್ಲಿ - ನನ್ನ ಯಜಮಾನನು ಆ ಅರಾಮ್ಯನಾದ ನಾಮಾನನಿಂದ ಏನೂ ತೆಗೆದುಕೊಳ್ಳದೆ ಅವನನ್ನು ಹಾಗೆಯೇ ಕಳುಹಿಸಿಬಿಟ್ಟನಲ್ಲಾ; ಯೆಹೋವನಾಣೆ, ನಾನು ಅವನ ಹಿಂದೆ ಓಡುತ್ತಾ ಹೋಗಿ ಅವನಿಂದ ಸ್ವಲ್ಪವನ್ನಾದರೂ ಬಾಚಿಕೊಂಡು ಬರುವೆನು ಅಂದುಕೊಂಡು ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ದೇವರ ಮನುಷ್ಯನಾದ ಎಲೀಷನ ಸೇವಕನಾಗಿರುವ ಗೇಹಜಿಯು, “ನನ್ನ ಯಜಮಾನನು ಈ ಅರಾಮ್ಯನಾದ ನಾಮಾನನು ತೆಗೆದುಕೊಂಡು ಬಂದದ್ದನ್ನು ಅವನ ಕೈಯಿಂದ ತೆಗೆದುಕೊಳ್ಳದೆ ಸುಮ್ಮನೆ ಕಳುಹಿಸಿದ್ದಾನೆ. ಆದರೆ ಯೆಹೋವ ದೇವರ ಜೀವದಾಣೆ, ನಾನು ಅವನ ಹಿಂದೆ ಓಡಿಹೋಗಿ, ಅವನ ಕೈಯಿಂದ ಏನಾದರೂ ತೆಗೆದುಕೊಳ್ಳುವೆನು,” ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 5:20
33 ತಿಳಿವುಗಳ ಹೋಲಿಕೆ  

ಎಲೀಷನು ತನ್ನ ಸೇವಕನಾದ ಗೇಹಜಿಗೆ, “ಶೂನೇಮ್ಯಳಾದ ಆ ಸ್ತ್ರೀಯನ್ನು ಕರೆದುಕೊಂಡು ಬಾ” ಎಂದು ಹೇಳಿದನು. ಸೇವಕನು ಶೂನೇಮ್ಯಳಾದ ಆ ಸ್ತ್ರೀಯನ್ನು ಕರೆದುಕೊಂಡು ಬಂದಾಗ ಆಕೆಯು ಎಲೀಷನ ಎದುರಿನಲ್ಲಿ ನಿಂತುಕೊಂಡಳು.


ಇದಲ್ಲದೆ ರಾಜನು, “ಈ ದಿನದ ಅಂತ್ಯದೊಳಗೆ ನಾನು ಶಾಫಾಟನ ಮಗನಾದ ಎಲೀಷನ ತಲೆಯನ್ನು ಅವನ ದೇಹದ ಮೇಲೆ ಉಳಿಯುವಂತೆ ಮಾಡಿದರೆ ದೇವರು ನನ್ನನ್ನು ದಂಡಿಸಲಿ!” ಎಂದು ಹೇಳಿದನು.


ಎಲೀಷನು ಗೇಹಜಿಯನ್ನು ಕರೆದು, “ಶೂನೇಮಿನ ಸ್ತ್ರೀಯನ್ನು ಕರೆ” ಎಂದು ಹೇಳಿದನು. ಗೇಹಜಿಯು ಶೂನೇಮಿನ ಸ್ತ್ರೀಯನ್ನು ಕರೆದನು. ಅವಳು ಎಲೀಷನ ಹತ್ತಿರಕ್ಕೆ ಬಂದಳು. ಎಲೀಷನು, “ನಿನ್ನ ಮಗನನ್ನು ಎತ್ತಿಕೊ” ಎಂದು ಹೇಳಿದನು.


ಶೂನೇಮಿನ ಆ ಸ್ತ್ರೀಯ ಮನೆಗೆ, ಎಲೀಷನು ಮತ್ತು ಶೂನೇಮಿನ ಸ್ತ್ರೀಯು ಬರುವುದಕ್ಕೆ ಮುಂಚೆಯೇ ಗೇಹಜಿಯು ಬಂದನು. ಗೇಹಜಿಯು ಮಗುವಿನ ಮುಖದ ಮೇಲೆ ಆ ಕೋಲನ್ನಿಟ್ಟನು. ಆದರೆ ಆ ಮಗು ಮಾತನಾಡಲಿಲ್ಲ; ಅಲುಗಾಡಲಿಲ್ಲ. ಆಗ ಗೇಹಜಿಯು ಎಲೀಷನನ್ನು ಸಂಧಿಸಲು ಹಿಂದಿರುಗಿ ಬಂದು ಎಲೀಷನಿಗೆ, “ಮಗು ಎಚ್ಚರಗೊಳ್ಳಲಿಲ್ಲ” ಎಂದು ಹೇಳಿದನು.


ಸಭಾಹಿರಿಯನು ದೇವರ ಸೇವೆಯ ಜವಾಬ್ದಾರಿಯನ್ನು ಹೊತ್ತು ಕೊಂಡವನಾಗಿದ್ದಾನೆ. ಆದ್ದರಿಂದ ಅವನು ಅಪರಾಧಿಯೆಂಬ ನಿಂದನೆಗೆ ಒಳಗಾಗಿರಬಾರದು; ಗರ್ವಿಷ್ಠನಾಗಿರಬಾರದು; ಸ್ವಾರ್ಥಿಯಾಗಿರಬಾರದು ಮತ್ತು ಮುಂಗೋಪಿಯಾಗಿರಬಾರದು; ದ್ರಾಕ್ಷಾರಸವನ್ನು ಅತಿಯಾಗಿ ಕುಡಿಯುವವನಾಗಿರಬಾರದು; ಜಗಳಗಂಟನಾಗಿರಬಾರದು; ಜನರನ್ನು ವಂಚಿಸಿ ಶ್ರೀಮಂತನಾಗಲು ಪ್ರಯತ್ನಿಸುವವನಾಗಿರಬಾರದು.


ದೇಮನು ಈ ಲೋಕವನ್ನು ಬಹಳ ಪ್ರೀತಿಸಿದನು. ಆದಕಾರಣವೇ ಅವನು ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೆ ಹೋದನು. ತೀತನು ದಲ್ಮಾತ್ಯಕ್ಕೆ ಹೋದನು.


“ನಿಮ್ಮ ದೇವರಾದ ಯೆಹೋವನ ಹೆಸರನ್ನು ಅಯೋಗ್ಯ ಕಾರ್ಯಕ್ಕಾಗಿ ಉಪಯೋಗಿಸಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಉಪಯೋಗಿಸುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.


ನೀವು ಜವಾಬ್ದಾರಿ ವಹಿಸಿಕೊಂಡಿರುವ ಸಭೆಯನ್ನು ಪರಿಪಾಲಿಸಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಅವರು ದೇವರ ಮಂದೆ. ನೀವು ಆ ಮಂದೆಯನ್ನು ಕಾಯಿರಿ, ಏಕೆಂದರೆ ಅದು ನಿಮ್ಮ ಬಯಕೆಯಾಗಿದೆ; ಅದು ಬಲವಂತದಿಂದ ಹೊರಿಸಿದ ಹೊರೆಯಲ್ಲ. ದೇವರು ಅದನ್ನೇ ಇಷ್ಟಪಡುತ್ತಾನೆ. ನೀವು ಆ ಮಂದೆಯನ್ನು ಕಾಯುವುದು ಹಣದ ನಿಮಿತ್ತವಲ್ಲ, ದೇವರ ಸೇವೆ ಮಾಡಲು ನಿಮಗಿರುವ ಸಂತಸದ ನಿಮಿತ್ತವಾಗಿಯೇ.


ಆದರೆ, ಬಂದ ಹಣದಲ್ಲಿ ಒಂದು ಭಾಗವನ್ನು ಮಾತ್ರ ಅವನು ಅಪೊಸ್ತಲರ ಪಾದಗಳ ಬಳಿ ಇಟ್ಟನು. ಅವನು ಸ್ವಲ್ಪ ಹಣವನ್ನು ತನಗೋಸ್ಕರ ರಹಸ್ಯವಾಗಿಟ್ಟುಕೊಂಡನು. ಅವನ ಹೆಂಡತಿಗೆ ಇದು ತಿಳಿದಿತ್ತು. ಆಕೆಯೂ ಅದಕ್ಕೆ ಒಪ್ಪಿಕೊಂಡಿದ್ದಳು.


ಯೇಸು ಮತ್ತು ಆತನ ಶಿಷ್ಯರು ರಾತ್ರಿಯ ಊಟಕ್ಕಾಗಿ ಕುಳಿತುಕೊಂಡಿದ್ದರು. ಯೇಸುವಿಗೆ ದ್ರೋಹ ಮಾಡುವಂತೆ ಸೈತಾನನು ಇಸ್ಕರಿಯೋತ ಯೂದನನ್ನು ಈಗಾಗಲೇ ಪ್ರೇರೇಪಿಸಿದ್ದನು. (ಯೂದನು ಸಿಮೋನನ ಮಗ.)


ಬಳಿಕ ಯೇಸು, “ನಾನು ಆರಿಸಿಕೊಂಡ ಹನ್ನೆರಡು ಮಂದಿ ನೀವೇ. ಆದರೆ ನಿಮ್ಮಲ್ಲಿರುವ ಒಬ್ಬನು ಸೈತಾನನ ಮಗನಾಗಿದ್ದಾನೆ” ಎಂದು ಉತ್ತರಕೊಟ್ಟನು.


“ಬಳಿಕ ಯಜಮಾನನು ಮೋಸಗಾರನಾದ ಮೇಲ್ವಿಚಾರಕನಿಗೆ, ‘ನೀನು ಜಾಣತನ ಮಾಡಿದೆ’ ಎಂದು ಹೇಳಿದನು. ಹೌದು, ಲೌಕಿಕ ಜನರು ತಮ್ಮ ಜನರೊಡನೆ ವ್ಯಾಪಾರದಲ್ಲಿ ದೈವಿಕ ಜನರಿಗಿಂತಲೂ ಜಾಣರಾಗಿದ್ದಾರೆ.


ಬಳಿಕ ಯೇಸು ನೆರೆದಿದ್ದ ಜನರಿಗೆ, “ಎಚ್ಚರಿಕೆ, ಯಾವ ವಿಧವಾದ ಸ್ವಾರ್ಥಕ್ಕೂ ಒಳಗಾಗದಂತೆ ಜಾಗರೂಕರಾಗಿರಿ. ಒಬ್ಬನಿಗೆ ಎಷ್ಟೇ ಆಸ್ತಿಯಿದ್ದರೂ ಅದರಿಂದ ಅವನು ಜೀವವನ್ನು ಪಡೆದುಕೊಳ್ಳಲಾರನು” ಎಂದನು.


ಯೆಹೂದ್ಯರ ರಾಜಕೀಯ ಪಂಗಡಕ್ಕೆ ಸೇರಿದ ಸಿಮೋನ ಮತ್ತು ಯೇಸುವನ್ನು ಶತ್ರುಗಳಿಗೆ ಒಪ್ಪಿಸಿದ ಇಸ್ಕರಿಯೋತ ಯೂದ.


“ಹೌದು, ಕೆಟ್ಟದ್ದನ್ನು ಮಾಡಿ ಧನಿಕನಾದವನಿಗೆ ಬಹಳ ಕೇಡಾಗುವುದು. ಆ ಮನುಷ್ಯನು ಒಂದು ಸುರಕ್ಷಿತವಾದ ಸ್ಥಳದಲ್ಲಿ ವಾಸಿಸಲು ಇದನ್ನೆಲ್ಲಾ ಮಾಡುತ್ತಾನೆ. ಹಾಗೆ ಮಾಡುವದರಿಂದ ಬೇರೆ ಜನರು ಅವನಿಂದ ಕಿತ್ತುಕೊಳ್ಳಲು ಸಾಧ್ಯವಿಲ್ಲವೆಂದು ಅವನು ತಿಳಿಯುತ್ತಾನೆ. ಆದರೆ ಕೆಟ್ಟ ಸಂಗತಿಗಳು ಅವನಿಗೆ ಸಂಭವಿಸುವವು.


“ಯೆಹೋಯಾಕೀಮನೇ, ನಿನಗೆ ಲಾಭದಾಯಕವಾದದ್ದು ಮಾತ್ರ ನಿನ್ನ ಕಣ್ಣಿಗೆ ಕಾಣುತ್ತದೆ. ನೀನು ಯಾವಾಗಲೂ ನಿನಗೆ ಹೆಚ್ಚು ಲಾಭ ಬರುವದನ್ನು ನೋಡುವೆ. ನೀನು ನಿರಪರಾಧಿಗಳನ್ನು ಕೊಲ್ಲಲು ಸಿದ್ಧನಾಗಿರುವೆ. ನೀನು ಬೇರೆಯವರ ವಸ್ತುಗಳನ್ನು ಅಪಹರಿಸಲು ಸಿದ್ಧನಾಗಿರುವೆ.”


ತಮ್ಮ ಆಲೋಚನೆಗಳಿಗೆ ಒಳ್ಳೆಯ ಕಾರಣಗಳನ್ನು ಕೊಡುವ ಏಳು ಜನರಿಗಿಂತಲೂ ತಾನು ಜ್ಞಾನಿಯೆಂದು ಸೋಮಾರಿಯು ಭಾವಿಸುವನು.


ಕೆಡುಕರು ತಮ್ಮ ಇಷ್ಟವಾದ ವಸ್ತುಗಳ ಬಗ್ಗೆ ಕೊಚ್ಚಿಕೊಳ್ಳುವರು. ದುರಾಶೆಯುಳ್ಳ ಅವರು ದೇವರನ್ನು ಶಪಿಸುತ್ತಾ ಆತನ ಮೇಲೆ ತಮಗಿರುವ ದ್ವೇಷವನ್ನು ತೋರ್ಪಡಿಸಿಕೊಳ್ಳುವರು.


ಇಸ್ರೇಲನ್ನು ರಕ್ಷಿಸುವ ಯೆಹೋವನಾಣೆಯಿಟ್ಟು ಹೇಳುತ್ತಿದ್ದೇನೆ, ನನ್ನ ಸ್ವಂತ ಮಗನಾದ ಯೋನಾತಾನನೇ ಈ ಪಾಪ ಮಾಡಿದ್ದರೂ ಅವನು ಸಾಯಲೇಬೇಕು” ಎಂದು ಹೇಳಿದನು. ಜನರಲ್ಲಿ ಯಾರೊಬ್ಬರೂ ಮಾತನಾಡಲಿಲ್ಲ.


“ನೀವು ನೆರೆಯವನ ಮನೆಯನ್ನು ಆಶಿಸಬಾರದು. ನೀವು ಮತ್ತೊಬ್ಬನ ಹೆಂಡತಿಯನ್ನಾಗಲಿ ಸೇವಕರನ್ನಾಗಲಿ ದಾಸಿಯರನ್ನಾಗಲಿ ಪಶುಗಳನ್ನಾಗಲಿ ಆಶಿಸಬಾರದು.”


ಎಲೀಯನು ಗಿಲ್ಯಾದಿನ ತಿಷ್ಬೀ ಪಟ್ಟಣದ ಒಬ್ಬ ಪ್ರವಾದಿ. ಎಲೀಯನು ರಾಜನಾದ ಅಹಾಬನಿಗೆ, “ನಾನು ಇಸ್ರೇಲರ ದೇವರಾದ ಯೆಹೋವನ ಸೇವಕನಾಗಿದ್ದೇನೆ. ಮುಂದಿನ ಕೆಲವು ವರ್ಷಗಳವರೆಗೆ ಹಿಮವಾಗಲಿ ಮಳೆಯಾಗಲಿ ಬೀಳುವುದಿಲ್ಲವೆಂದು ನಾನು ಆತನ ಹೆಸರಿನ ಮೇಲೆ ಪ್ರಮಾಣ ಮಾಡುತ್ತೇನೆ. ನಾನು ಬೀಳುವಂತೆ ಮಳೆಗೆ ಆಜ್ಞಾಪಿಸಿದರೆ ಮಾತ್ರ ಅದು ಬೀಳುತ್ತದೆ” ಎಂದು ಹೇಳಿದನು.


ಆದರೆ ಎಲೀಷನು, “ನಾನು ಯೆಹೋವನ ಸೇವೆ ಮಾಡುತ್ತೇನೆ. ಯೆಹೋವನಾಣೆಯಾಗಿ ಪ್ರಮಾಣ ಮಾಡುತ್ತೇನೆ, ನಾನು ಯಾವ ಕಾಣಿಕೆಯನ್ನು ಸ್ವೀಕರಿಸುವುದಿಲ್ಲ” ಎಂದು ಹೇಳಿದನು. ಎಲೀಷನು ಕಾಣಿಕೆಯನ್ನು ಸ್ವೀಕರಿಸುವಂತೆ ನಾಮಾನನು ಬಹಳ ಪ್ರಯತ್ನಿಸಿದನು. ಆದರೆ ಎಲೀಷನು ನಿರಾಕರಿಸಿದನು.


ನಾಮಾನನ ಬಳಿಗೆ ಓಡಿದನು. ನಾಮಾನನು ತನ್ನ ಹಿಂದೆ ಓಡಿಬರುತ್ತಿರುವ ಒಬ್ಬನನ್ನು ನೋಡಿ ಗೇಹಜಿಯನ್ನು ಸಂಧಿಸಲು ರಥದಿಂದ ಇಳಿದನು. ನಾಮಾನನು, “ಎಲ್ಲವೂ ಕ್ಷೇಮವೇ?” ಎಂದು ಕೇಳಿದನು.


ಆ ಸಮಯದಲ್ಲಿ ರಾಜನು ದೇವಮನುಷ್ಯನ ಸೇವಕನಾದ ಗೇಹಜಿಯ ಸಂಗಡ ಮಾತನಾಡುತ್ತಿದ್ದನು. ರಾಜನು ಗೇಹಜಿಗೆ, “ಎಲೀಷನು ಮಾಡಿರುವ ಮಹತ್ಕಾರ್ಯಗಳೆಲ್ಲವುಗಳನ್ನು ನನಗೆ ದಯವಿಟ್ಟು ತಿಳಿಸು” ಎಂದು ಕೇಳಿದನು.


ಎಲೀಷನು ದಮಸ್ಕಕ್ಕೆ ಹೋದನು. ಅರಾಮ್ಯರ ರಾಜನಾದ ಬೆನ್ಹದದನಿಗೆ ಕಾಯಿಲೆಯಾಗಿತ್ತು. ಬೆನ್ಹದದನಿಗೆ ಒಬ್ಬನು, “ದೇವಮನುಷ್ಯನು ಇಲ್ಲಿಗೆ ಬಂದಿದ್ದಾನೆ” ಎಂದು ಹೇಳಿದನು.


ದೇವಮನುಷ್ಯನು (ಎಲೀಷನು) ಯೋವಾಷನ ಮೇಲೆ ಕೋಪಗೊಂಡು, “ನೀನು ಐದು ಅಥವಾ ಆರು ಸಲ ಹೊಡೆಯಬೇಕಾಗಿತ್ತು! ಆಗ ನೀನು ಅರಾಮ್ಯರನ್ನು ನಾಶಗೊಳಿಸುವವರೆಗೆ ಸೋಲಿಸಿ ಬಿಡಬಹುದಾಗಿತ್ತು! ಆದರೆ ಈಗ ನೀನು ಅರಾಮ್ಯರನ್ನು ಮೂರು ಸಲ ಮಾತ್ರ ಸೋಲಿಸುವೆ!” ಎಂದು ಹೇಳಿದನು.


ಆ ಸ್ತ್ರೀಯು ದೇವಮನುಷ್ಯನನ್ನು ಕಾಣಲು ಕರ್ಮೆಲ್ ಪರ್ವತಕ್ಕೆ ಹೋದಳು. ಶೂನೇಮಿನ ಸ್ತ್ರೀಯು ದೂರದಿಂದ ಬರುತ್ತಿರುವುದನ್ನು ಕಂಡ ಎಲೀಷನು ತನ್ನ ಸೇವಕನಾದ ಗೇಹಜಿಗೆ, “ನೋಡು, ಶೂನೇಮ್ಯಳಾದ ಸ್ತ್ರೀಯು ಬರುತ್ತಿದ್ದಾಳೆ!


ಯೆಹೋವನು ಹೇಳುವುದೇನೆಂದರೆ, “ಯಾಕೋಬನ ಮನೆತನದವರೇ, ನನ್ನ ಮಾತುಗಳನ್ನು ಕೇಳಿರಿ. ಜನರು ನಿಮ್ಮನ್ನು ಇಸ್ರೇಲ್ ಎಂದು ಕರೆಯುತ್ತಾರೆ. ನೀವು ಯೆಹೂದದ ಕುಟುಂಬದವರು. ನೀವು ಯೆಹೋವನ ಹೆಸರಿನಲ್ಲಿ ಒಡಂಬಡಿಕೆ ಮಾಡಿಕೊಳ್ಳುವಿರಿ. ನೀವು ಯೆಹೋವನ ನಾಮವನ್ನು ಸ್ತುತಿಸುವಿರಿ, ಆದರೆ ನೀವು ಇವುಗಳನ್ನು ಮಾಡುವಾಗ ನಂಬಿಗಸ್ತರಾಗಿರುವದಿಲ್ಲ; ಯಥಾರ್ಥರಾಗಿರುವುದಿಲ್ಲ.


ಅದನ್ನು ಬಹಳ ಹಣಕ್ಕೆ ಮಾರಿ ಬಡ ಜನರಿಗೆ ಕೊಡಬಹುದಾಗಿತ್ತಲ್ಲಾ” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು