2 ಅರಸುಗಳು 5:24 - ಪರಿಶುದ್ದ ಬೈಬಲ್24 ಗೇಹಜಿಯು ಬೆಟ್ಟಕ್ಕೆ ಬಂದಾಗ, ಅವುಗಳನ್ನು ಸೇವಕರಿಂದ ತೆಗೆದುಕೊಂಡು ಅವರನ್ನು ಕಳುಹಿಸಿಬಿಟ್ಟನು. ನಂತರ ಗೇಹಜಿಯು ಅವುಗಳನ್ನು ಮನೆಯಲ್ಲಿ ಅಡಗಿಸಿಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಗೇಹಜಿಯು ಗುಡ್ಡವನ್ನು ಮುಟ್ಟಿದಾಗ, ಎರಡು ಚೀಲ ಬೆಳ್ಳಿಯನ್ನು ತೆಗೆದುಕೊಂಡು ಮನೆಯಲ್ಲಿ ಅಡಗಿಸಿಟ್ಟು, ಆಳುಗಳನ್ನು ಕಳುಹಿಸಿಬಿಟ್ಟನು, ಅವರು ಹೊರಟು ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಗುಡ್ಡವನ್ನು ಮುಟ್ಟಿದಾಗ, ಗೇಹಜಿಯು ಅವುಗಳನ್ನು ತೆಗೆದುಕೊಂಡು, ಮನೆಯಲ್ಲಿ ಅಡಗಿಸಿಬಿಟ್ಟು, ಆಳುಗಳನ್ನು ಕಳುಹಿಸಿಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಗುಡ್ಡವನ್ನು ಮುಟ್ಟಿದಾಗ ಗೇಹಜಿಯು ಅವುಗಳನ್ನು ತೆಗೆದುಕೊಂಡು ಮನೆಯಲ್ಲಿ ಅಡಗಿಸಿಟ್ಟು ಆಳುಗಳನ್ನು ಕಳುಹಿಸಿಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಆದರೆ ಗೇಹಜಿಯು ಬೆಟ್ಟಕ್ಕೆ ಬಂದಾಗ, ಅವರ ಕೈಯಿಂದ ಅವುಗಳನ್ನು ತೆಗೆದುಕೊಂಡು ಮನೆಯಲ್ಲಿಟ್ಟು, ಆ ಮನುಷ್ಯರನ್ನು ಕಳುಹಿಸಿಬಿಟ್ಟದ್ದರಿಂದ ಅವರು ಹೊರಟು ಹೋದರು. ಅಧ್ಯಾಯವನ್ನು ನೋಡಿ |
ನಾವು ಜೆರಿಕೊ ನಗರವನ್ನು ಮತ್ತು ಅದರಲ್ಲಿದ್ದ ಎಲ್ಲ ವಸ್ತುಗಳನ್ನು ಸ್ವಾಧೀನಪಡಿಸಿಕೊಂಡು ಕೊಳ್ಳೆ ಹೊಡೆಯುತ್ತಿದ್ದಾಗ, ಬಾಬಿಲೋನಿನ ಒಂದು ಸುಂದರವಾದ ನಿಲುವಂಗಿಯನ್ನೂ ಸುಮಾರು ಐದು ಪೌಂಡಿನಷ್ಟು ಬೆಳ್ಳಿಯನ್ನೂ ಒಂದು ಪೌಂಡಿಗಿಂತಲೂ ಹೆಚ್ಚು ಬಂಗಾರವನ್ನೂ ಕಂಡೆನು. ಈ ವಸ್ತುಗಳನ್ನು ನನಗಾಗಿ ಇಟ್ಟುಕೊಳ್ಳಬೇಕೆಂದು ತುಂಬ ಆಶೆಯಾಯಿತು. ಅದಕ್ಕಾಗಿ ನಾನು ಅವುಗಳನ್ನು ತೆಗೆದುಕೊಂಡೆ. ಅವುಗಳನ್ನು ನನ್ನ ಗುಡಾರದಲ್ಲಿ ಹುಗಿದಿಟ್ಟಿದ್ದೇನೆ. ಬೆಳ್ಳಿಯು ನಿಲುವಂಗಿಯ ಕೆಳಗಡೆ ಇದೆ” ಎಂದು ಒಪ್ಪಿಕೊಂಡನು.