Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 5:25 - ಪರಿಶುದ್ದ ಬೈಬಲ್‌

25 ಗೇಹಜಿಯು ಒಳಗೆ ಬಂದು ತನ್ನ ಒಡೆಯನಾದ ಎಲೀಷನ ಮುಂದೆ ನಿಂತುಕೊಂಡನು. ಎಲೀಷನು ಗೇಹಜಿಗೆ, “ನೀನು ಎಲ್ಲಿಗೆ ಹೋಗಿದ್ದೆ?” ಎಂದು ಕೇಳಿದನು. ಗೇಹಜಿಯು, “ನಾನು ಎಲ್ಲಿಗೂ ಹೋಗಿರಲಿಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನಂತರ ಗೇಹಜಿಯು ತನ್ನ ಯಜಮಾನನ ಬಳಿಗೆ ಬಂದನು. ಎಲೀಷನು ಅವನನ್ನು, “ಗೇಹಜಿಯೇ, ಎಲ್ಲಿಗೆ ಹೋಗಿ ಬಂದಿರುವೆ?” ಎಂದು ಕೇಳಿದನು. ಅದಕ್ಕೆ ಅವನು, “ನಿನ್ನ ಸೇವಕನಾದ ನಾನು ಎಲ್ಲಿಯೂ ಹೋಗಲಿಲ್ಲ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅವರು ಹೋದನಂತರ, ಇವನು ತನ್ನ ಯಜಮಾನನ ಬಳಿಗೆ ಬಂದನು. ಎಲೀಷನು ಅವನನ್ನು, “ಗೇಹಜಿಯೇ, ಎಲ್ಲಿಗೆ ಹೋಗಿ ಬಂದೆ?” ಎಂದು ಕೇಳಿದನು. ಅದಕ್ಕೆ ಅವನು, “ನಿಮ್ಮ ಸೇವಕನಾದ ನಾನು ಎಲ್ಲಿಯೂ ಹೋಗಲಿಲ್ಲ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅವರು ಹೋದನಂತರ ಇವನು ತನ್ನ ಯಜಮಾನನ ಬಳಿಗೆ ಬಂದನು. ಎಲೀಷನು ಅವನನ್ನು - ಗೇಹಜಿಯೇ, ಎಲ್ಲಿಗೆ ಹೋಗಿ ಬಂದಿ ಎಂದು ಕೇಳಿದನು. ಅದಕ್ಕೆ ಅವನು - ನಿನ್ನ ಸೇವಕನಾದ ನಾನು ಎಲ್ಲಿಯೂ ಹೋಗಲಿಲ್ಲ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆಗ ಗೇಹಜಿಯು ಒಳಗೆ ಪ್ರವೇಶಿಸಿ, ತನ್ನ ಯಜಮಾನನ ಮುಂದೆ ನಿಂತನು. ಎಲೀಷನು ಅವನಿಗೆ, “ಗೇಹಜಿಯೇ, ಎಲ್ಲಿಗೆ ಹೋಗಿ ಬಂದೆ?” ಎಂದನು. ಅದಕ್ಕೆ ಗೇಹಜಿಯು, “ನಿನ್ನ ಸೇವಕನು ಎಲ್ಲಿಗೂ ಹೋಗಲಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 5:25
14 ತಿಳಿವುಗಳ ಹೋಲಿಕೆ  

ಗೇಹಜಿಯು, “ಹೌದು, ಎಲ್ಲವೂ ಕ್ಷೇಮವಾಗಿದೆ. ನನ್ನ ಒಡೆಯನಾದ ಎಲೀಷನು ನನಗೆ, ‘ನೋಡು, ಎಫ್ರಾಯೀಮ್ ಬೆಟ್ಟಪ್ರಾಂತ್ಯದ ಪ್ರವಾದಿಗಳ ಗುಂಪಿನಿಂದ ನನ್ನ ಬಳಿಗೆ ಇಬ್ಬರು ತರುಣರು ಬಂದಿದ್ದಾರೆ. ದಯವಿಟ್ಟು ಅವರಿಗೆ ಮೂವತ್ತೈದು ಕಿಲೋ.ಗ್ರಾಂ. ಬೆಳ್ಳಿಯನ್ನು ಮತ್ತು ಎರಡು ಥಾನು ಬಟ್ಟೆಯನ್ನು ತೆಗೆದುಕೊಂಡು ಬಾ’ ಎಂದು ನನ್ನನ್ನು ಕಳುಹಿಸಿದನು” ಎಂದು ಹೇಳಿದನು.


ಅವರೆಲ್ಲರೂ ಊಟ ಮಾಡುತ್ತಿದ್ದಾಗ ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಇಲ್ಲಿರುವ ಹನ್ನೆರಡು ಮಂದಿಯಲ್ಲಿ ಒಬ್ಬನು ನನ್ನನ್ನು ವೈರಿಗಳಿಗೆ ಒಪ್ಪಿಸುತ್ತಾನೆ” ಎಂದು ಹೇಳಿದನು.


ಎಂದು ಹೇಳುತ್ತಾ ನಿನ್ನ ಬಳಿಗೆ ನನ್ನ ಜನರಂತೆ ಬರುವರು. ನನ್ನ ಜನರಂತೆ ನಿನ್ನ ಎದುರಿನಲ್ಲಿ ಬಂದು ಕುಳಿತುಕೊಳ್ಳುವರು. ನಿನ್ನ ಮಾತುಗಳನ್ನು ಅವರು ಕೇಳಿದರೂ ಅವುಗಳಿಗೆ ವಿಧೇಯರಾಗದೆ ಇಷ್ಟಪಡುವದನ್ನೆ ಮಾಡುವರು. ಇತರರಿಗೆ ಮೋಸ ಮಾಡಿ ಹಣಗಳಿಸುವದೇ ಅವರ ಕೆಲಸ.


ವ್ಯಭಿಚಾರಿಣಿಯ ನಡತೆಯು ಇದೇ. ಆಕೆ ಊಟ ಮಾಡುವಳು, ಬಾಯಿ ಒರಸಿಕೊಳ್ಳುವಳು ಮತ್ತು ತಾನು ಯಾವ ತಪ್ಪನ್ನೂ ಮಾಡಿಲ್ಲವೆಂದು ಹೇಳುವಳು.


ನಂತರ ಪ್ರವಾದಿಯಾದ ಯೆಶಾಯನು ರಾಜನಾದ ಹಿಜ್ಕೀಯನ ಬಳಿಗೆ ಬಂದು, “ಈ ಜನರು ಹೇಳುವುದೇನು? ಇವರು ಎಲ್ಲಿಂದ ಬಂದರು?” ಎಂದು ಕೇಳಿದನು. ಹಿಜ್ಕೀಯನು, “ಅವರು ಬಹಳ ದೂರದೇಶದಿಂದ, ಬಾಬಿಲೋನಿನಿಂದ ಬಂದಿದ್ದಾರೆ” ಎಂದನು.


ದೇವದೂತನು ಅವಳಿಗೆ, “ಹಾಗರಳೇ, ನೀನು ಸಾರಯಳ ಸೇವಕಿಯಾಗಿದ್ದರೂ ಯಾಕೆ ಇಲ್ಲಿರುವೆ? ನೀನು ಎಲ್ಲಿಗೆ ಹೋಗುತ್ತಿರುವೆ?” ಎಂದು ಕೇಳಿದನು. ಹಾಗರಳು, “ನನ್ನ ಯಜಮಾನಿಯಾದ ಸಾರಯಳ ಬಳಿಯಿಂದ ಓಡಿಹೋಗುತ್ತಿರುವೆ” ಎಂದು ಹೇಳಿದಳು.


ತರುವಾಯ ಯೆಹೋವನು ಕಾಯಿನನಿಗೆ, “ನಿನ್ನ ತಮ್ಮನಾದ ಹೇಬೆಲನೆಲ್ಲಿ?” ಎಂದು ಕೇಳಿದನು. ಅದಕ್ಕೆ ಕಾಯಿನನು, “ನನಗೆ ಗೊತ್ತಿಲ್ಲ. ನನ್ನ ತಮ್ಮನನ್ನು ಕಾಯುವುದಾಗಲಿ ನೋಡಿಕೊಳ್ಳುವುದಾಗಲಿ ನನ್ನ ಕೆಲಸವೇ?” ಎಂದು ಉತ್ತರಕೊಟ್ಟನು.


ಯೇಸು ಮತ್ತು ಆತನ ಶಿಷ್ಯರು ರಾತ್ರಿಯ ಊಟಕ್ಕಾಗಿ ಕುಳಿತುಕೊಂಡಿದ್ದರು. ಯೇಸುವಿಗೆ ದ್ರೋಹ ಮಾಡುವಂತೆ ಸೈತಾನನು ಇಸ್ಕರಿಯೋತ ಯೂದನನ್ನು ಈಗಾಗಲೇ ಪ್ರೇರೇಪಿಸಿದ್ದನು. (ಯೂದನು ಸಿಮೋನನ ಮಗ.)


ಇದನ್ನು ಕೇಳಿ ಉಜ್ಜೀಯನು ಕೋಪಗೊಂಡನು. ಅವನು ಧೂಪ ಹಾಕಲು ಧೂಪಾರತಿಯನ್ನು ಕೈಯಲ್ಲಿ ಹಿಡಿದುಕೊಂಡಿದ್ದನು. ಅವನು ಯಾಜಕರ ಮೇಲೆ ಕೋಪಿಸಿಕೊಂಡಾಗ ಕುಷ್ಠರೋಗವು ಅವನ ಹಣೆಯಲ್ಲಿ ಕಾಣಿಸಿಕೊಂಡಿತು. ಇದು ಯಾಜಕರ ಮುಂದೆ ದೇವಾಲಯದೊಳಗೆ ಧೂಪವೇದಿಕೆಯ ಬಳಿಯಲ್ಲೇ ಆಯಿತು.


ಸೌಲನ ಚಿಕ್ಕಪ್ಪನು ಸೌಲನನ್ನು ಮತ್ತು ಅವನ ಸೇವಕನನ್ನು, “ನೀವು ಎಲ್ಲಿಗೆ ಹೋಗಿದ್ದಿರಿ?” ಎಂದು ಕೇಳಿದನು. ಸೌಲನು ಅವನಿಗೆ, “ನಾವು ಕತ್ತೆಗಳನ್ನು ಹುಡುಕುತ್ತಿದ್ದೆವು. ನಾವು ಅವುಗಳನ್ನು ಕಂಡುಕೊಳ್ಳಲಾರದೆ ಹೋದಾಗ ಸಮುವೇಲನನ್ನು ನೋಡಲು ಹೋದೆವು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು