Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 5:27 - ಪರಿಶುದ್ದ ಬೈಬಲ್‌

27 ಈಗ, ನಿನ್ನನ್ನೂ ನಿನ್ನ ಸಂತಾನದವರನ್ನೂ ಸದಾಕಾಲ ನಾಮಾನನ ರೋಗವು ಹಿಡಿದುಕೊಳ್ಳುವುದು. ನಿನಗೆ ಎಂದೆಂದಿಗೂ ಕುಷ್ಠರೋಗವಿರುವುದು!” ಎಂದು ಹೇಳಿದನು. ಗೇಹಜಿಯು ಎಲೀಷನನ್ನು ಬಿಟ್ಟುಹೋದಾಗ, ಗೇಹಜಿಯ ಚರ್ಮವು ಮಂಜುಗಡ್ಡೆಯಂತೆ ಬಿಳುಪಾಯಿತು! ಗೇಹಜಿಯು ಕುಷ್ಠರೋಗ ಪೀಡಿತನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ನಾಮಾನನ ಕುಷ್ಠವು ನಿನ್ನನ್ನೂ, ನಿನ್ನ ಸಂತಾನದವರನ್ನೂ ಸದಾಕಾಲ ಹಿಡಿದಿರುವುದು” ಎಂದನು. ಕೂಡಲೆ ಅವನಿಗೆ ಕುಷ್ಠ ಹತ್ತಿತು. ಗೇಹಜಿ ಹಿಮದಂತೆ ಬಿಳುಪಾಗಿ ಎಲೀಷನ ಸನ್ನಿಧಿಯಿಂದ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ನಾಮಾನನ ಚರ್ಮರೋಗವು ನಿನ್ನನ್ನೂ ನಿನ್ನ ಸಂತಾನದವರನ್ನೂ ಸದಾಕಾಲ ಬಾಧಿಸುವುದು,” ಎಂದನು. ಕೂಡಲೆ ಅವನಿಗೆ ಆ ರೋಗ ಹತ್ತಿತು. ಅವನು ಹಿಮದಂತೆ ಬಿಳುಪಾಗಿ, ಅಲ್ಲಿಂದ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ನಾಮಾನನ ಕುಷ್ಠವು ನಿನ್ನನ್ನೂ ನಿನ್ನ ಸಂತಾನದವರನ್ನೂ ಸದಾಕಾಲ ಹಿಡಿದಿರುವದು ಅಂದನು. ಕೂಡಲೆ ಅವನಿಗೆ ಕುಷ್ಠ ಹತ್ತಿತು. ಅವನು ಹಿಮದಂತೆ ಬಿಳುಪಾಗಿ ಅವನ ಸನ್ನಿಧಿಯಿಂದ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ನಾಮಾನನ ಕುಷ್ಠರೋಗವು ನಿನಗೂ, ನಿನ್ನ ಸಂತಾನಕ್ಕೂ ನಿತ್ಯವಾಗಿ ಇರುವುದು,” ಎಂದನು. ಆಗ ಗೇಹಜಿಯು ಹಿಮದಂತೆ ಬಿಳುಪಾಗಿ, ಕುಷ್ಠರೋಗಿ ಆಗಿ ಎಲೀಷನಿಂದ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 5:27
20 ತಿಳಿವುಗಳ ಹೋಲಿಕೆ  

ಬಳಿಕ ಯೆಹೋವನು ಮೋಶೆಗೆ, “ನಾನು ನಿನಗೆ ಇನ್ನೊಂದು ಸಾಕ್ಷಿಯನ್ನು ಕೊಡುತ್ತೇನೆ. ನಿನ್ನ ಕೈಯನ್ನು ಉಡಿಯಲ್ಲಿ ಹಾಕು” ಅಂದನು. ಮೋಶೆ ತನ್ನ ಕೈಯನ್ನು ಉಡಿಯಲ್ಲಿ ಹಾಕಿ ಹೊರತೆಗೆದಾಗ ಅದಕ್ಕೆ ತೊನ್ನು ಹಿಡಿದಿತ್ತು.


ರಾಜನಾದ ಅಜರ್ಯನು ಕುಷ್ಠರೋಗ ಪೀಡಿತನಾಗುವಂತೆ ಯೆಹೋವನು ಮಾಡಿದನು. ಅವನು ಸಾಯುವವರೆಗೂ ಕುಷ್ಠರೋಗಿಯಾಗಿಯೇ ಇದ್ದನು. ಅಜರ್ಯನು ಪ್ರತ್ಯೇಕವಾದ ಮನೆಯಲ್ಲಿ ವಾಸಿಸುತ್ತಿದ್ದನು. ರಾಜನ ಮಗನಾದ ಯೋತಾಮನು ರಾಜನ ಅರಮನೆಯನ್ನು ನೋಡಿಕೊಳ್ಳುತ್ತಿದ್ದನು ಮತ್ತು ಜನರನ್ನು ಪಾಲಿಸುತ್ತಿದ್ದನು.


ಮೇಘವು ಗುಡಾರದಿಂದ ಮೇಲಕ್ಕೆ ಎದ್ದಿತು. ಆರೋನನು ಹಿಂತಿರುಗಿ ಮಿರ್ಯಾಮಳನ್ನು ನೋಡಿದನು. ಆಕೆಯ ಚರ್ಮವು ಹಿಮದಂತೆ ಬೆಳ್ಳಗಾಗಿತ್ತು. ಆಕೆಗೆ ಭಯಂಕರವಾದ ಚರ್ಮರೋಗ ಹಿಡಿದಿತ್ತು.


ಆದರೆ ನೀನು ದುಷ್ಟತನವನ್ನು ಬಿತ್ತಿ ಸಂಕಟವೆಂಬ ಬೆಳೆಯನ್ನು ಕೊಯ್ದಿರುವೆ. ನಿನ್ನ ಸುಳ್ಳಿನ ಪ್ರತಿಫಲವನ್ನು ತಿಂದಿರುವೆ. ಯಾಕೆಂದರೆ ನೀನು ನಿನ್ನ ಸಾಮರ್ಥ್ಯ ಮತ್ತು ನಿನ್ನ ಸೈನ್ಯದ ಮೇಲೆ ಭರವಸವಿಟ್ಟಿರುವೆ.


ಅರಾಮ್ಯರ ರಾಜನ ಸೇನೆಯಲ್ಲಿ ನಾಮಾನನೆಂಬ ಸೇನಾಪತಿಯಿದ್ದನು. ನಾಮಾನನು ಅವನ ರಾಜನಿಗೆ ಬಹಳ ಪ್ರಾಮುಖ್ಯ ವ್ಯಕ್ತಿಯಾಗಿದ್ದನು. ಯೆಹೋವನು ನಾಮಾನನ ಮುಖಾಂತರ ಅರಾಮ್ಯರಿಗೆ ವಿಜಯವನ್ನು ತಂದುಕೊಟ್ಟಿದ್ದರಿಂದ ಅವನು ಪ್ರಮುಖನಾಗಿದ್ದನು. ನಾಮಾನನು ಮಹಾಪುರುಷನೂ ಶಕ್ತಿಶಾಲಿಯೂ ಆದ ಮನುಷ್ಯನಾಗಿದ್ದನು. ಆದರೆ ಅವನು ಕುಷ್ಠರೋಗ ಪೀಡಿತನಾಗಿದ್ದನು.


ಯೋವಾಬನು ಮತ್ತು ಅವನ ವಂಶದವರು ಇದಕ್ಕೆ ಜವಾಬ್ದಾರರು. ಅವನ ವಂಶದವರನ್ನು ಇದಕ್ಕಾಗಿ ದೂಷಿಸಬೇಕು. ಯೋವಾಬನ ವಂಶಕ್ಕೆ ಅನೇಕ ಕಷ್ಟಗಳು ಬರಲಿ. ಅವನ ವಂಶದವರಲ್ಲಿ ಕುಷ್ಠರೋಗಿಗಳು, ಊರುಗೋಲು ಬಳಸುವವರು. ಕತ್ತಿಯಿಂದ ಸಾಯುವವರು, ಭಿಕ್ಷೆ ಬೇಡುವವರು ಇದ್ದೇ ಇರಲಿ” ಎಂದು ಹೇಳಿದನು.


ಆಗ ಯೆಹೋಶುವನು ಅವನಿಗೆ, “ನೀನು ನಮಗೆ ಕೇಡನ್ನು ಬರಮಾಡಿರುವೆ! ಆದ್ದರಿಂದ ಯೆಹೋವನು ನಿನಗೂ ಕೇಡನ್ನು ಮಾಡಲಿ!” ಎಂದನು. ಆಗ ಜನರೆಲ್ಲರೂ ಕಲ್ಲುಗಳನ್ನು ತೂರಿ ಆಕಾನನನ್ನೂ ಅವನ ಕುಟುಂಬದವರನ್ನೂ ಕೊಂದರು ಮತ್ತು ಅವನ ಎಲ್ಲ ಸ್ವತ್ತನ್ನು ಸುಟ್ಟುಹಾಕಿದರು.


ಆ ಸುಳ್ಳುಬೋಧಕರಿಗೆ ಬೇಕಾಗಿರುವುದು ಕೇವಲ ನಿಮ್ಮ ಹಣವಷ್ಟೆ. ಆದ್ದರಿಂದ ಅವರು ನಿಜವಲ್ಲದ ಸಂಗತಿಗಳನ್ನು ನಿಮಗೆ ಹೇಳಿ ನಿಮ್ಮನ್ನು ಬಳಸಿಕೊಳ್ಳುತ್ತಾರೆ. ಆದರೆ ಬಹಳ ಹಿಂದಿನಿಂದಲೇ ಆ ಸುಳ್ಳುಬೋಧಕರ ವಿರುದ್ಧವಾದ ತೀರ್ಪು ಸಿದ್ಧವಾಗಿದೆ. ಅವರನ್ನು ನಾಶಪಡಿಸುವಾತನಿಂದ (ದೇವರಿಂದ) ಅವರು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.


ಹಣದಾಸೆಯು ಎಲ್ಲಾ ವಿಧವಾದ ಕೆಟ್ಟತನಕ್ಕೆ ಮೂಲವಾಗುತ್ತದೆ. ಕೆಲವು ಜನರು ಹೆಚ್ಚುಹೆಚ್ಚು ಹಣವನ್ನು ಗಳಿಸಿಕೊಳ್ಳುವುದಕ್ಕಾಗಿ ಸತ್ಯೋಪದೇಶವನ್ನು ತೊರೆದುಬಿಟ್ಟಿದ್ದಾರೆ. ಆದರೆ ಅವರು ತಮ್ಮನ್ನು ತಾವೇ ಹೆಚ್ಚು ವೇದನೆಗೆ ಗುರಿಪಡಿಸಿಕೊಂಡಿದ್ದಾರೆ.


ಪೇತ್ರನು ಸಿಮೋನನಿಗೆ, “ನೀನೂ ನಾಶವಾಗು! ನಿನ್ನ ಹಣವೂ ನಾಶವಾಗಲಿ! ದೇವರ ವರವನ್ನು ಹಣದಿಂದ ಕೊಂಡುಕೊಳ್ಳಬಹುದೆಂದು ನೀನು ಭಾವಿಸಿದೆ.


ತಕ್ಷಣವೇ ಸಫೈರಳು ಅವನ ಪಾದಗಳ ಮುಂದೆ ಬಿದ್ದು ಸತ್ತುಹೋದಳು. ಆ ಯೌವನಸ್ಥರು ಒಳಗೆ ಬಂದು ನೋಡಿದಾಗ ಆಕೆ ಸತ್ತುಹೋಗಿದ್ದಳು. ಅವರು ಆಕೆಯನ್ನು ಹೊತ್ತುಕೊಂಡು ಹೋಗಿ, ಆಕೆಯ ಗಂಡನ ಪಕ್ಕದಲ್ಲಿ ಹೂಳಿಟ್ಟರು.


ಅನನೀಯನು ಇದನ್ನು ಕೇಳಿದ ಕೂಡಲೇ ಕೆಳಗೆ ಬಿದ್ದು ಸತ್ತುಹೋದನು. ಕೆಲವು ಯೌವನಸ್ಥರು ಬಂದು ಅವನ ದೇಹವನ್ನು ಬಟ್ಟೆಯಲ್ಲಿ ಸುತ್ತಿದರು. ಅವರು ಅದನ್ನು ಹೊತ್ತುಕೊಂಡು ಹೋಗಿ ಸಮಾಧಿಮಾಡಿದರು. ಇದರ ಬಗ್ಗೆ ಕೇಳಿದ ಪ್ರತಿಯೊಬ್ಬರೂ ಭಯಭ್ರಾಂತರಾದರು.


ಯಾಜಕನು ಆ ವ್ಯಕ್ತಿಯನ್ನು ನೋಡಬೇಕು. ಚರ್ಮದ ಮೇಲೆ ಬೆಳ್ಳಗಾದ ಊತವಿದ್ದರೆ, ರೋಮವು ಬೆಳ್ಳಗಾಗಿದ್ದರೆ ಮತ್ತು ಚರ್ಮವು ಊತದಿಂದ ಹಸಿಯಾಗಿ ಕಂಡರೆ,


ನಿಮ್ಮ ದೇವರಾದ ಯೆಹೋವನೆಂಬ ನನಗೆ ಸಲ್ಲತಕ್ಕ ಗೌರವವನ್ನು ನೀವು ಬೇರೆಯವರಿಗೆ ಸಲ್ಲಿಸಿದರೆ ನಾನು ನಿಮ್ಮನ್ನು ದ್ವೇಷಿಸುತ್ತೇನೆ. ನನಗೆ ವಿರುದ್ಧವಾಗಿ ಪಾಪಮಾಡುವವರ ದೋಷಫಲವನ್ನು ಅವರ ಮೂರು ನಾಲ್ಕು ತಲೆಮಾರುಗಳವರೆಗೂ ಬರಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು