2 ಅರಸುಗಳು 5:6 - ಪರಿಶುದ್ದ ಬೈಬಲ್6 ನಾಮಾನನು ಅರಾಮ್ಯರ ರಾಜನಿಂದ ಇಸ್ರೇಲ್ ರಾಜನಿಗೆ ಪತ್ರವೊಂದನ್ನು ತೆಗೆದುಕೊಂಡು ಹೋದನು. ಆ ಪತ್ರದಲ್ಲಿ, “…ನನ್ನ ಸೇವಕನಾದ ನಾಮಾನನನ್ನು ನಿಮ್ಮ ಬಳಿಗೆ ನಾನು ಕಳುಹಿಸುತ್ತಿದ್ದೇನೆ. ಅವನ ಕುಷ್ಠರೋಗವನ್ನು ಗುಣಪಡಿಸಿ” ಎಂದು ಬರೆದಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಪತ್ರವನ್ನು ಇಸ್ರಾಯೇಲರ ಅರಸನಿಗೆ ಕೊಟ್ಟನು. ಅದರಲ್ಲಿ, “ನನ್ನ ಸೇವಕನಾದ ನಾಮಾನನನ್ನು ನಿನ್ನ ಬಳಿಗೆ ಕಳುಹಿಸಿದ್ದೇನೆ, ನೀನು ಅವನ ಕುಷ್ಠರೋಗವನ್ನು ವಾಸಿಮಾಡತಕ್ಕದ್ದೆಂದು ಈ ಪತ್ರದಿಂದ ತಿಳಿದುಕೋ” ಎಂಬುದಾಗಿ ಬರೆದಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ತಂದ ಪತ್ರವನ್ನು ಇಸ್ರಯೇಲರ ಅರಸನಿಗೆ ಕೊಟ್ಟನು. ಅದರಲ್ಲಿ, “ನನ್ನ ಸೇವಕ ನಾಮಾನನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ; ನೀವು ಅವನ ಚರ್ಮರೋಗವನ್ನು ವಾಸಿಮಾಡತಕ್ಕದ್ದೆಂದು ಈ ಪತ್ರದಿಂದ ತಿಳಿದುಕೊಳ್ಳಿ,” ಎಂಬುದಾಗಿ ಬರೆದಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಸಮಾರ್ಯಕ್ಕೆ ಹೊರಟುಹೋಗಿ ಪತ್ರವನ್ನು ಇಸ್ರಾಯೇಲ್ಯರ ಅರಸನಿಗೆ ಕೊಟ್ಟನು. ಅದರಲ್ಲಿ - ನನ್ನ ಸೇವಕನಾದ ನಾಮಾನನನ್ನು ನಿನ್ನ ಬಳಿಗೆ ಕಳುಹಿಸಿದ್ದೇನೆ; ನೀನು ಅವನ ಕುಷ್ಠರೋಗವನ್ನು ವಾಸಿಮಾಡತಕ್ಕದೆಂದು ಈ ಪತ್ರದಿಂದ ತಿಳಿದುಕೋ ಎಂಬದಾಗಿ ಬರೆದಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅವನು ಇಸ್ರಾಯೇಲಿನ ಅರಸನ ಬಳಿಗೆ ಆ ಪತ್ರವನ್ನು ತೆಗೆದುಕೊಂಡು ಬಂದನು. ಅದರಲ್ಲಿ, “ಈ ಪತ್ರ ನಿನಗೆ ಸೇರುವಾಗ, ನಿನ್ನ ಸೇವಕನಾದ ನಾಮಾನನ ಕುಷ್ಠರೋಗವನ್ನು ವಾಸಿಮಾಡುವ ಹಾಗೆ ನಿನ್ನ ಬಳಿಗೆ ಕಳುಹಿಸಿದ್ದೇನೆ,” ಎಂದು ಬರೆದಿತ್ತು. ಅಧ್ಯಾಯವನ್ನು ನೋಡಿ |
ಇಸ್ರೇಲಿನ ರಾಜನು ಪತ್ರವನ್ನು ಓದಿದಾಗ, ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು, “ನಾನು ದೇವರೇನು? ಇಲ್ಲ! ಹುಟ್ಟು ಮತ್ತು ಸಾವುಗಳ ಮೇಲೆ ನನಗೆ ಯಾವ ಶಕ್ತಿಯೂ ಇಲ್ಲ. ಹೀಗಿರುವಾಗ ಅರಾಮ್ಯರ ರಾಜನು ಕುಷ್ಠರೋಗಪೀಡಿತನಾದ ಮನುಷ್ಯನನ್ನು ನನ್ನ ಬಳಿಗೆ ಗುಣಪಡಿಸಲು ಏಕೆ ಕಳುಹಿಸಿದನು? ಇದರ ಬಗ್ಗೆ ನೀವೇ ಯೋಚಿಸಿರಿ. ಇದು ಒಂದು ಕುತಂತ್ರವೆಂಬುದು ನಿಮಗೇ ತಿಳಿಯುತ್ತದೆ. ಅರಾಮ್ಯರ ರಾಜನು ಯುದ್ಧವನ್ನು ಆರಂಭಿಸಲು ಪ್ರಯತ್ನಿಸುತ್ತಿದ್ದಾನೆ!” ಎಂದು ಹೇಳಿದನು.
“ನಿಮ್ಮ ಕೈಗೆ ಈ ಪತ್ರವು ತಲುಪಿದ ತಕ್ಷಣ, ನಿಮ್ಮ ಒಡೆಯನ ಕುಟುಂಬದಲ್ಲಿ ಬಹಳ ಉತ್ತಮನಾದ ಮತ್ತು ಸಮರ್ಥನಾದ ಒಬ್ಬ ವ್ಯಕ್ತಿಯನ್ನು ಆರಿಸಿರಿ. ನಿಮ್ಮ ಬಳಿ ರಥಗಳೂ ಕುದುರೆಗಳೂ ಇವೆ. ನೀವು ಬಲಾಢ್ಯವಾದ ನಗರದಲ್ಲಿ ವಾಸಿಸುತ್ತಿರುವಿರಿ. ನಿಮ್ಮ ಬಳಿ ಆಯುಧಗಳಿವೆ. ನೀವು ಆರಿಸಿದವನನ್ನು ಅವನ ತಂದೆಯ ಸಿಂಹಾಸನದ ಮೇಲೆ ಕುಳ್ಳಿರಿಸಿರಿ. ನಂತರ ನಿಮ್ಮ ಯಜಮಾನನ ಕುಟುಂಬಕ್ಕಾಗಿ ಹೋರಾಡಿ” ಎಂದು ಬರೆದಿದ್ದನು.