Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 5:7 - ಪರಿಶುದ್ದ ಬೈಬಲ್‌

7 ಇಸ್ರೇಲಿನ ರಾಜನು ಪತ್ರವನ್ನು ಓದಿದಾಗ, ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು, “ನಾನು ದೇವರೇನು? ಇಲ್ಲ! ಹುಟ್ಟು ಮತ್ತು ಸಾವುಗಳ ಮೇಲೆ ನನಗೆ ಯಾವ ಶಕ್ತಿಯೂ ಇಲ್ಲ. ಹೀಗಿರುವಾಗ ಅರಾಮ್ಯರ ರಾಜನು ಕುಷ್ಠರೋಗಪೀಡಿತನಾದ ಮನುಷ್ಯನನ್ನು ನನ್ನ ಬಳಿಗೆ ಗುಣಪಡಿಸಲು ಏಕೆ ಕಳುಹಿಸಿದನು? ಇದರ ಬಗ್ಗೆ ನೀವೇ ಯೋಚಿಸಿರಿ. ಇದು ಒಂದು ಕುತಂತ್ರವೆಂಬುದು ನಿಮಗೇ ತಿಳಿಯುತ್ತದೆ. ಅರಾಮ್ಯರ ರಾಜನು ಯುದ್ಧವನ್ನು ಆರಂಭಿಸಲು ಪ್ರಯತ್ನಿಸುತ್ತಿದ್ದಾನೆ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇಸ್ರಾಯೇಲರ ಅರಸನು ಪತ್ರವನ್ನು ಓದಿದ ಕೂಡಲೆ ಬಟ್ಟೆಗಳನ್ನು ಹರಿದುಕೊಂಡು, ತನ್ನ ಪರಿವಾರದವರಿಗೆ, “ಅವನು ಕಳುಹಿಸಿದ ಮನುಷ್ಯನನ್ನು ಕುಷ್ಠರೋಗದಿಂದ ವಾಸಿಮಾಡಬೇಕಂತೆ. ಇದು ಎಂಥ ಅಪ್ಪಣೆ! ನಾನೇನು ದೇವರೋ? ಜೀವದಾನಮಾಡುವುದಕ್ಕಾಗಲಿ, ಸಾಯಿಸುವುದಕ್ಕಾಗಲಿ ನನಗೆ ಸಾಮರ್ಥ್ಯ ಉಂಟೋ? ಇವನು ನನ್ನೊಡನೆ ಜಗಳವಾಡುವುದಕ್ಕೆ ಕಾರಣ ಹುಡುಕುತ್ತಿದ್ದಾನಲ್ಲವೇ ನೀವೇ ಆಲೋಚಿಸಿ ನೋಡಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಇಸ್ರಯೇಲರ ಅರಸನು ಈ ಪತ್ರವನ್ನು ಓದಿದ ಕೂಡಲೆ, ಸಿಟ್ಟಿನಿಂದ ಬಟ್ಟೆಗಳನ್ನು ಹರಿದುಕೊಂಡು, ತನ್ನ ಪರಿವಾರದವರಿಗೆ, “ತಾನು ಕಳುಹಿಸಿದ ವ್ಯಕ್ತಿಯನ್ನು ಚರ್ಮರೋಗದಿಂದ ನಾನು ವಾಸಿಮಾಡಬೇಕಂತೆ! ಇದು ಎಂಥ ಅಪ್ಪಣೆ; ನಾನೇನು ದೇವರೋ? ಜೀವದಾನ ಮಾಡುವುದಕ್ಕಾಗಲಿ ಜೀವಹರಣ ಮಾಡುವುದಕ್ಕಾಗಲಿ ನನಗೆ ಸಾಮರ್ಥ್ಯವುಂಟೇ? ಇವನು ನನ್ನೊಡನೆ ಯುದ್ಧಮಾಡುವುದಕ್ಕೆ ನೆಪ ಹುಡುಕುತ್ತಾನಲ್ಲದೆ ಮತ್ತೇನು? ನೀವೇ ಆಲೋಚಿಸಿ ನೋಡಿ,” ಎಂದು ಹೇಳೀದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇಸ್ರಾಯೇಲ್ಯರ ಅರಸನು ಪತ್ರವನ್ನು ಓದಿದ ಕೂಡಲೆ ಬಟ್ಟೆಗಳನ್ನು ಹರಿದುಕೊಂಡು ತನ್ನ ಪರಿವಾರದವರಿಗೆ - ತಾನು ಕಳುಹಿಸಿದ ಮನುಷ್ಯನನ್ನು ಕುಷ್ಠರೋಗದಿಂದ ವಾಸಿಮಾಡಬೇಕಂತೆ; ಇದು ಎಂಥ ಅಪ್ಪಣೆ! ನಾನೇನು ದೇವರೋ? ಜೀವದಾನ ಮಾಡುವದಕ್ಕಾಗಲಿ ಸಾಯಿಸುವದಕ್ಕಾಗಲಿ ನನಗೆ ಸಾಮರ್ಥ್ಯವುಂಟೋ? ಇವನು ನನ್ನೊಡನೆ ಜಗಳವಾಡುವದಕ್ಕೆ ಕಾರಣ ಹುಡುಕುತ್ತಾನಲ್ಲದೆ ಮತ್ತೇನು? ನೀವೇ ಆಲೋಚಿಸಿ ನೋಡಿರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಇಸ್ರಾಯೇಲಿನ ಅರಸನು ಆ ಪತ್ರವನ್ನು ಓದಿದ ಮೇಲೆ ತನ್ನ ವಸ್ತ್ರಗಳನ್ನು ಹರಿದುಕೊಂಡು, “ಕೊಲ್ಲುವುದಕ್ಕೂ, ಬದುಕಿಸುವುದಕ್ಕೂ ನಾನು ದೇವರೋ? ಇವನ ಕುಷ್ಠರೋಗವನ್ನು ವಾಸಿ ಮಾಡುವುದಕ್ಕೆ ನನ್ನ ಬಳಿಗೆ ಕಳುಹಿಸಿದ್ದೇನು? ಇವನು ನನಗೆ ವಿರೋಧವಾಗಿ ಜಗಳಕ್ಕೆ ಕಾರಣ ಹುಡುಕುವುದನ್ನು ನೀವೇ ನೋಡಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 5:7
19 ತಿಳಿವುಗಳ ಹೋಲಿಕೆ  

ಯೆಹೋವನು ಜನರಿಗೆ ಸಾವನ್ನೂ ತರುವನು. ಅಂತೆಯೇ ಅವರಿಗೆ ಜೀವವನ್ನೂ ದಯಪಾಲಿಸುವನು. ಆತನು ಅವರಿಗೆ ಮರುಜೀವವನ್ನು ದಯಪಾಲಿಸಬಲ್ಲನು. ಯೆಹೋವನು ಜನರನ್ನು ಮರಣ ಸ್ಥಳವಾದ ಪಾತಾಳಕ್ಕೆ ತಳ್ಳುವನು.


ಆದ್ದರಿಂದ ಅಹಾಬನು ತನ್ನ ರಾಜ್ಯದ ಹಿರಿಯರೆಲ್ಲರ ಒಂದು ಸಭೆಯನ್ನು ಕರೆದು, “ನೋಡಿ, ಬೆನ್ಹದದನು ಕೇಡುಮಾಡಬೇಕೆಂದಿದ್ದಾನೆ. ನನ್ನ ಪತ್ನಿಯರನ್ನು, ಮಕ್ಕಳನ್ನು ಮತ್ತು ಬೆಳ್ಳಿಬಂಗಾರಗಳನ್ನು ತನಗೆ ಒಪ್ಪಿಸಬೇಕೆಂದು ಅವನು ನನ್ನನ್ನು ಮೊದಲು ಕೇಳಿದ್ದನು. ನಾನು ಅದಕ್ಕೆ ಒಪ್ಪಿಕೊಂಡಿದ್ದೆನು. ಈಗ ಅವನು ಎಲ್ಲವನ್ನೂ ತೆಗೆದುಕೊಳ್ಳಲು ಅಪೇಕ್ಷೆಪಟ್ಟಿದ್ದಾನೆ” ಎಂದು ಹೇಳಿದನು.


ಯಾಕೋಬನಿಗೆ ರಾಹೇಲಳ ಮೇಲೆ ಕೋಪವಾಯಿತು. ಅವನು ಆಕೆಗೆ, “ನಾನು ದೇವರಲ್ಲ. ನಿನಗೆ ಮಕ್ಕಳಾಗದಂತೆ ಮಾಡಿರುವವನು ದೇವರು” ಎಂದು ಹೇಳಿದನು.


“‘ನಾನೇ ದೇವರು, ನನ್ನ ಹೊರತು ಬೇರೆ ದೇವರಿಲ್ಲ. ಜನರಿಗೆ ಮರಣವನ್ನೂ ಜೀವವನ್ನೂ ಕೊಡುವವನು ನಾನೇ. ಅವರಿಗೆ ಗಾಯ ಮಾಡುವವನೂ ನಾನೇ, ಅದನ್ನು ಗುಣಮಾಡುವವನೂ ನಾನೇ. ನನ್ನ ಶಕ್ತಿಯ ಹಿಡಿತದಿಂದ ಇನ್ನೊಬ್ಬನನ್ನು ರಕ್ಷಿಸಲು ಯಾರಿಗೂ ಸಾಧ್ಯವಿಲ್ಲ.


ಯೇಸುವನ್ನು ಮಾತಿನಲ್ಲಿ ಹಿಡಿಯಬೇಕೆಂದು ಯೋಚಿಸಿ, ಆತನು ಏನಾದರೂ ತಪ್ಪು ಹೇಳುವಂತೆ ಮಾಡಲು ಪ್ರಯತ್ನಿಸುತ್ತಿದ್ದರು.


“ಬನ್ನಿರಿ, ನಾವು ಯೆಹೋವನ ಬಳಿಗೆ ಹಿಂತಿರುಗೋಣ. ಆತನು ನಮಗೆ ಗಾಯ ಮಾಡಿದರೂ ಗುಣಮಾಡುವನು. ನಮ್ಮ ಗಾಯಗಳಿಗೆ ಬಟ್ಟೆಯನ್ನು ಸುತ್ತುವನು.


ಮಹಾಪ್ರಭುಗಳು ಕೇಳುವ ವಿಷಯ ಅತಿ ಕಠಿಣವಾದದ್ದು. ದೇವತೆಗಳು ಮಾತ್ರ ಅರಸನ ಕನಸನ್ನೂ ಅದರ ಅರ್ಥವನ್ನೂ ತಿಳಿಸಲು ಸಾಧ್ಯ. ಆದರೆ ದೇವತೆಗಳು ಮಾನವರೊಂದಿಗೆ ವಾಸಮಾಡುವುದಿಲ್ಲ” ಎಂದರು.


ಇದನ್ನು ಕೇಳಿದ ಪೌಲ ಬಾರ್ನಬರು ತಮ್ಮ ಬಟ್ಟೆಗಳನ್ನು ಹರಿದುಕೊಂಡು ಜನಸಮೂಹದೊಳಕ್ಕೆ ಓಡಿಹೋಗಿ ಹೀಗೆಂದು ಕೂಗಿ ಹೇಳಿದರು:


ಪ್ರಧಾನಯಾಜಕನು ಇದನ್ನು ಕೇಳಿ ಬಹಳ ಕೋಪಗೊಂಡು ತನ್ನ ಬಟ್ಟೆಗಳನ್ನು ಹರಿದುಕೊಂಡು, “ಈ ಮನುಷ್ಯನು ದೇವದೂಷಣೆ ಮಾಡಿದ್ದಾನೆ. ನಮಗೆ ಇನ್ನು ಯಾವ ಸಾಕ್ಷಿಗಳ ಅಗತ್ಯವೂ ಇಲ್ಲ. ಇವನು ಮಾಡಿದ ದೇವದೂಷಣೆಯನ್ನು ನೀವೇ ಕೇಳಿದಿರಿ.


ಈ ಸುರುಳಿಯಲ್ಲಿದ್ದ ಸಂದೇಶವನ್ನು ಕೇಳಿ ರಾಜನಾದ ಯೆಹೋಯಾಕೀಮನು ಮತ್ತು ಅವನ ಸೇವಕರು ಗಾಬರಿಯಾಗಲಿಲ್ಲ. ತಾವು ತಪ್ಪು ಮಾಡಿದ್ದಕ್ಕಾಗಿ ದುಃಖವನ್ನು ಸೂಚಿಸಲು ಅವರು ತಮ್ಮ ವಸ್ತ್ರಗಳನ್ನು ಹರಿದುಕೊಳ್ಳಲಿಲ್ಲ.


ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಅದ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ ಮತ್ತು ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಹಿಜ್ಕೀಯನ ಬಳಿಗೆ ಬಂದರು. ಅವರು ದುಃಖದಿಂದ ತಮ್ಮ ಬಟ್ಟೆಗಳನ್ನು ಹರಿದುಕೊಂಡಿದ್ದರು. ಅಶ್ಶೂರದ ಸೇನಾಧಿಪತಿಯಾದ ರಬ್ಷಾಕೆಯು ಹೇಳಿದ ಸಂಗತಿಗಳನ್ನು ಅವರು ಹಿಜ್ಕೀಯನಿಗೆ ತಿಳಿಸಿದರು.


ರಾಜನು ಪದ್ಧತಿಯಂತೆ ಸ್ತಂಭದ ಬಳಿ ನಿಂತಿರುವುದನ್ನೂ ಜನರು ಮತ್ತು ನಾಯಕರು ರಾಜನಿಗಾಗಿ ತುತ್ತೂರಿ ಊದುತ್ತಿರುವುದನ್ನೂ ಜನರೆಲ್ಲರೂ ಬಹಳ ಸಂತೋಷದಿಂದಿರುವುದನ್ನೂ ಅವಳು ನೋಡಿ ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು “ದ್ರೋಹ, ದ್ರೋಹ!” ಎಂದು ಕೂಗಿಕೊಂಡಳು.


ಅವರು ಬುದ್ಧಿವಂತರಾಗಿದ್ದಲ್ಲಿ ಅವರಿಗೆ ಏನು ಸಂಭವಿಸುವುದೆಂದು ಅವರು ತಿಳಿಯುತ್ತಿದ್ದರು.


ನೂನನ ಮಗನಾದ ಯೆಹೋಶುವನೂ ಯೆಫುನ್ನೆಯ ಮಗನಾದ ಕಾಲೇಬನೂ ದೇಶದ ವಿಷಯವನ್ನು ಸಂಗ್ರಹಿಸಿಕೊಂಡು ಬಂದವರಲ್ಲಿ ಇಬ್ಬರಾಗಿದ್ದರು. ಅವರು ಬೇಸರಗೊಂಡು ತಮ್ಮ ಬಟ್ಟೆಗಳನ್ನು ಹರಿದುಕೊಂಡರು.


ಆ ಸಮಯದಲ್ಲಿ ರೂಬೇನನು ತನ್ನ ಸಹೋದರರೊಡನೆ ಇರಲಿಲ್ಲ. ಅವರು ಯೋಸೇಫನನ್ನು ಮಾರಿದ್ದು ಅವನಿಗೆ ಗೊತ್ತಿರಲಿಲ್ಲ. ರೂಬೇನನು ಬಾವಿಗೆ ಹಿಂತಿರುಗಿ ಬಂದಾಗ, ಯೋಸೇಫನನ್ನು ಅಲ್ಲಿ ಕಾಣದೆ ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡನು.


ನಾಮಾನನು ಅರಾಮ್ಯರ ರಾಜನಿಂದ ಇಸ್ರೇಲ್ ರಾಜನಿಗೆ ಪತ್ರವೊಂದನ್ನು ತೆಗೆದುಕೊಂಡು ಹೋದನು. ಆ ಪತ್ರದಲ್ಲಿ, “…ನನ್ನ ಸೇವಕನಾದ ನಾಮಾನನನ್ನು ನಿಮ್ಮ ಬಳಿಗೆ ನಾನು ಕಳುಹಿಸುತ್ತಿದ್ದೇನೆ. ಅವನ ಕುಷ್ಠರೋಗವನ್ನು ಗುಣಪಡಿಸಿ” ಎಂದು ಬರೆದಿತ್ತು.


ಆಗ ಯೋಸೇಫನು ಅವರಿಗೆ, “ಭಯಪಡಬೇಡಿ. ನಾನು ದೇವರಲ್ಲ; ನಿಮ್ಮನ್ನು ಶಿಕ್ಷಿಸಲು ನನಗೆ ಅಧಿಕಾರವಿಲ್ಲ.


ಆಗ ದಾವೀದನು ದುಃಖದಿಂದ ತನ್ನ ಬಟ್ಟೆಗಳನ್ನೆಲ್ಲ ಹರಿದುಕೊಂಡನು. ದಾವೀದನ ಜೊತೆಯಲ್ಲಿದ್ದವರೂ ತಮ್ಮ ಬಟ್ಟೆಗಳನ್ನು ಹರಿದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು