Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 5:8 - ಪರಿಶುದ್ದ ಬೈಬಲ್‌

8 ಇಸ್ರೇಲಿನ ರಾಜನು ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡನೆಂಬುದು ದೇವಮನುಷ್ಯನಾದ ಎಲೀಷನಿಗೆ ತಿಳಿಯಿತು. ಎಲೀಷನು ರಾಜನಿಗೆ ಈ ಸಂದೇಶವನ್ನು ಕಳುಹಿಸಿದನು: “ನೀನು ನಿನ್ನ ಬಟ್ಟೆಗಳನ್ನು ಹರಿದುಕೊಂಡಿದ್ದು ಏಕೆ? ನಾಮಾನನು ನನ್ನ ಬಳಿಗೆ ಬರಲಿ. ಇಸ್ರೇಲಿನಲ್ಲಿ ಒಬ್ಬ ಪ್ರವಾದಿ ಇದ್ದಾನೆಂಬುದು ಅವನಿಗೆ ತಿಳಿಯುತ್ತದೆ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇಸ್ರಾಯೇಲರ ಅರಸನು ತನ್ನ ಬಟ್ಟೆಗಳನ್ನು ಹರಿದುಕೊಂಡನೆಂಬುದನ್ನು ದೇವರ ಮನುಷ್ಯನಾದ ಎಲೀಷನು ಕೇಳಿ ದೂತರ ಮುಖಾಂತರವಾಗಿ ಅವನಿಗೆ, “ನೀನು, ನಿನ್ನ ಬಟ್ಟೆಗಳನ್ನು ಹರಿದುಕೊಂಡದ್ದೇಕೆ? ಅವನನ್ನು ನನ್ನ ಬಳಿಗೆ ಕಳುಹಿಸು, ಇಸ್ರಾಯೇಲರಲ್ಲಿ ಒಬ್ಬ ಪ್ರವಾದಿಯಿದ್ದಾನೆಂಬುದು ಅವನಿಗೆ ಗೊತ್ತಾಗಲಿ” ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಇಸ್ರಯೇಲರ ಅರಸನು ಸಿಟ್ಟಿನಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡನೆಂಬುದನ್ನು ದೈವಪುರುಷ ಎಲೀಷನು ಕೇಳಿದನು. ದೂತರ ಮುಖಾಂತರ ಅವನಿಗೆ, “ನೀವು ನಿಮ್ಮ ಬಟ್ಟೆಗಳನ್ನು ಹರಿದುಕೊಂಡದ್ದೇಕೆ? ಅವನನ್ನು ನನ್ನ ಬಳಿಗೆ ಕಳುಹಿಸಿ; ಇಸ್ರಯಲರಲ್ಲಿ ಒಬ್ಬ ಪ್ರವಾದಿ ಇದ್ದಾನೆಂಬುದು ಅವನಿಗೆ ಗೊತ್ತಾಗಲಿ,” ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇಸ್ರಾಯೇಲ್ಯರ ಅರಸನು ತನ್ನ ಬಟ್ಟೆಗಳನ್ನು ಹರಿದುಕೊಂಡನೆಂಬದನ್ನು ದೇವರ ಮನುಷ್ಯನಾದ ಎಲೀಷನು ಕೇಳಿ ದೂತರ ಮುಖಾಂತರವಾಗಿ ಅವನಿಗೆ - ನೀನು ನಿನ್ನ ಬಟ್ಟೆಗಳನ್ನು ಹರಿದುಕೊಂಡದ್ದೇಕೆ? ಅವನನ್ನು ನನ್ನ ಬಳಿಗೆ ಕಳುಹಿಸು; ಇಸ್ರಾಯೇಲ್ಯರಲ್ಲಿ ಒಬ್ಬ ಪ್ರವಾದಿಯಿದ್ದಾನೆಂಬದು ಅವನಿಗೆ ಗೊತ್ತಾಗಲಿ ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಇಸ್ರಾಯೇಲಿನ ಅರಸನು ತನ್ನ ವಸ್ತ್ರಗಳನ್ನು ಹರಿದುಕೊಂಡನೆಂದು ದೇವರ ಮನುಷ್ಯನಾದ ಎಲೀಷನು ಕೇಳಿದಾಗ, “ನೀನು ನಿನ್ನ ವಸ್ತ್ರಗಳನ್ನು ಹರಿದುಕೊಂಡದ್ದೇನು? ಇಸ್ರಾಯೇಲಿನಲ್ಲಿ ಪ್ರವಾದಿ ಇದ್ದಾನೆಂದು ನಾಮಾನನು ತಿಳಿದುಕೊಳ್ಳುವಂತೆ ಅವನು ನನ್ನ ಬಳಿಗೆ ಬರಲಿ,” ಎಂದು ಅರಸನಿಗೆ ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 5:8
14 ತಿಳಿವುಗಳ ಹೋಲಿಕೆ  

ಈಗ ನಾನು ಯೆಹೂದ್ಯರಲ್ಲದ ಜನರೊಂದಿಗೆ ಮಾತಾಡುತ್ತಿದ್ದೇನೆ. ನಾನು ಅವರಿಗೆ ಅಪೊಸ್ತಲನಾಗಿದ್ದೇನೆ. ಆದ್ದರಿಂದ ನಾನು ಈ ಕೆಲಸವನ್ನು ನನ್ನಿಂದ ಸಾಧ್ಯವಾದಷ್ಟು ಉತ್ತಮವಾಗಿಯೇ ಮಾಡುತ್ತೇನೆ.


ಆದರೆ ದೇವರು ಇಸ್ರೇಲರನ್ನು ಈಜಿಪ್ಟಿನಿಂದ ಹೊರತರುವದಕ್ಕಾಗಿ ಒಬ್ಬ ಪ್ರವಾದಿಯನ್ನು ಉಪಯೋಗಿಸಿದನು. ಇಸ್ರೇಲರನ್ನು ಪ್ರವಾದಿಯ ಮೂಲಕ ಬಿಡಿಸಿದನು.


ಜನರು ನಿನ್ನ ಮಾತನ್ನು ಕೇಳಬಹುದು ಅಥವಾ ಕೇಳದಿರಬಹುದು: ಯಾಕೆಂದರೆ ಅವರು ದಂಗೆಕೋರರಾಗಿದ್ದಾರೆ. ನನ್ನ ಮುಂದೆ ಪಾಪಮಾಡುವುದನ್ನು ನಿಲ್ಲಿಸಲಿಲ್ಲ. ಅವರು ಯಾವಾಗಲೂ ನನ್ನ ವಿರುದ್ಧ ದಂಗೆ ಏಳುವರು. ಆದ್ದರಿಂದ ನಾನು ತಿಳಿಸಿದ್ದನ್ನೆ ನೀನು ಹೇಳಬೇಕು. ಆಗ ಅವರು ತಮ್ಮ ಮಧ್ಯೆ ಒಬ್ಬ ಪ್ರವಾದಿ ಇದ್ದಾನೆಂದು ಗ್ರಹಿಸಿಕೊಳ್ಳುವರು.


ನಾಮಾನನು ತನ್ನ ಗುಂಪಿನೊಂದಿಗೆ ದೇವಮನುಷ್ಯನ ಹತ್ತಿರಕ್ಕೆ ಹಿಂದಿರುಗಿ ಬಂದನು. ಅವನು ಎಲೀಷನ ಮುಂದೆ ನಿಂತು, “ನೋಡಿ, ಇಸ್ರೇಲಿನಲ್ಲಿಯೇ ಹೊರತು ಭೂಮಂಡಲದ ಬೇರೆಲ್ಲಿಯೂ ದೇವರು ಇಲ್ಲವೇ ಇಲ್ಲ ಎಂಬುದು ಈಗ ತಾನೇ ನನಗೆ ತಿಳಿಯಿತು! ಈಗ ದಯಮಾಡಿ ನನ್ನ ಕಾಣಿಕೆಯನ್ನು ಸ್ವೀಕರಿಸಿ!” ಎಂದು ಹೇಳಿದನು.


ಇಸ್ರೇಲಿನ ರಾಜನು ಪತ್ರವನ್ನು ಓದಿದಾಗ, ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು, “ನಾನು ದೇವರೇನು? ಇಲ್ಲ! ಹುಟ್ಟು ಮತ್ತು ಸಾವುಗಳ ಮೇಲೆ ನನಗೆ ಯಾವ ಶಕ್ತಿಯೂ ಇಲ್ಲ. ಹೀಗಿರುವಾಗ ಅರಾಮ್ಯರ ರಾಜನು ಕುಷ್ಠರೋಗಪೀಡಿತನಾದ ಮನುಷ್ಯನನ್ನು ನನ್ನ ಬಳಿಗೆ ಗುಣಪಡಿಸಲು ಏಕೆ ಕಳುಹಿಸಿದನು? ಇದರ ಬಗ್ಗೆ ನೀವೇ ಯೋಚಿಸಿರಿ. ಇದು ಒಂದು ಕುತಂತ್ರವೆಂಬುದು ನಿಮಗೇ ತಿಳಿಯುತ್ತದೆ. ಅರಾಮ್ಯರ ರಾಜನು ಯುದ್ಧವನ್ನು ಆರಂಭಿಸಲು ಪ್ರಯತ್ನಿಸುತ್ತಿದ್ದಾನೆ!” ಎಂದು ಹೇಳಿದನು.


ಈ ಹುಡುಗಿಯು ನಾಮಾನನ ಪತ್ನಿಗೆ, “ನನ್ನ ಒಡೆಯನಾದ ನಾಮಾನನು ಸಮಾರ್ಯದಲ್ಲಿ ವಾಸಿಸುವ ಪ್ರವಾದಿಯಾದ ಎಲೀಷನನ್ನು ಭೇಟಿಮಾಡಬೇಕೆಂದು ನಾನು ಆಶಿಸುತ್ತೇನೆ. ಆ ಪ್ರವಾದಿಯು ನಾಮಾನನ ಕುಷ್ಠರೋಗವನ್ನು ಗುಣಪಡಿಸಬಲ್ಲನು” ಎಂದು ಹೇಳಿದಳು.


ಸಂದೇಶಕರು ಅಹಜ್ಯನಿಗೆ, “ಒಬ್ಬನು ನಮ್ಮನ್ನು ಭೇಟಿಯಾಗಿ ನಿಮ್ಮನ್ನು ಕಳುಹಿಸಿದ ರಾಜನ ಬಳಿಗೆ ಹಿಂದಿರುಗಿ ಹೋಗಿ ಯೆಹೋವನು ಹೇಳುವುದನ್ನು ಅವನಿಗೆ ತಿಳಿಸಿ. ಯೆಹೋವನು ಹೇಳುವುದೇನೆಂದರೆ: ‘ಇಸ್ರೇಲಿನಲ್ಲಿ ಒಬ್ಬ ದೇವರಿದ್ದಾನೆ! ಹೀಗಿರುವಾಗ ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ಸಂದೇಶಕರನ್ನು ಕಳುಹಿಸಿದುದೇಕೆ? ನೀನು ಈ ಕಾರ್ಯವನ್ನು ಮಾಡಿದ್ದರಿಂದ ನಿನ್ನ ಹಾಸಿಗೆಯಿಂದ ಮೇಲಕ್ಕೇಳುವುದಿಲ್ಲ. ನೀನು ಅಲ್ಲೇ ಸಾಯುವೆ!’” ಎಂಬುದಾಗಿ ಹೇಳಿದರು.


ಆ ಸ್ತ್ರೀಯು, “ಈಗ ನಿಜವಾಗಿಯೂ ನೀನು ದೇವಮನುಷ್ಯನೆಂಬುದು ನನಗೆ ತಿಳಿಯಿತು. ಯೆಹೋವನು ನಿನ್ನ ಮೂಲಕ ನಿಜವಾಗಿಯೂ ಮಾತಾಡುತ್ತಾನೆಂಬುದು ನನಗೆ ತಿಳಿದಿದೆ” ಎಂದು ಹೇಳಿದಳು.


ದಾವೀದನು ಯೋವಾಬನಿಗೆ ಮತ್ತು ಅವನ ಜೊತೆಯಲ್ಲಿದ್ದ ಜನರಿಗೆಲ್ಲ, “ನಿಮ್ಮ ಬಟ್ಟೆಗಳನ್ನು ಹರಿದುಕೊಂಡು ಮತ್ತು ಶೋಕಸೂಚಕ ವಸ್ತ್ರಗಳನ್ನು ಧರಿಸಿಕೊಂಡು ಅಬ್ನೇರನಿಗಾಗಿ ಶೋಕಿಸಿ” ಎಂದು ಹೇಳಿದನು. ರಾಜನಾದ ದಾವೀದನೂ ಶವಸಂಸ್ಕಾರಕ್ಕೆ ಹೋದನು. ಅವರು ಅಬ್ನೇರನನ್ನು ಹೆಬ್ರೋನಿನಲ್ಲಿ ಸಮಾಧಿ ಮಾಡಿದರು. ಅಬ್ನೇರನ ಸಮಾಧಿಯ ಹತ್ತಿರ ರಾಜನಾದ ದಾವೀದನೂ ಇತರ ಜನರೂ ಗೋಳಾಡಿದರು.


ಆಗ ನಿಮ್ಮ ಈ ಗುಲಾಮರೆಲ್ಲರೂ (ಈಜಿಪ್ಟಿನ ಅಧಿಕಾರಿಗಳು) ನನ್ನ ಬಳಿಗೆ ಬಂದು ನನಗೆ ಅಡ್ಡಬಿದ್ದು ನನ್ನನ್ನು ಆರಾಧಿಸುವರು.’ ಅವರು, ‘ಹೊರಟುಹೋಗಿ, ನಿಮ್ಮ ಜನರೆಲ್ಲರನ್ನು ನಿಮ್ಮೊಂದಿಗೆ ಕರೆದುಕೊಂಡು ಹೋಗಿರಿ’ ಎಂದು ಹೇಳುವರು. ಆಗ ನಾನು ಫರೋಹನ ಬಳಿಯಿಂದ ಬಿಟ್ಟುಹೋಗುವೆನು” ಅಂದನು.


ಆದರೆ ಆ ಸೇವಕನು, “ಈ ಪಟ್ಟಣದಲ್ಲಿ ಒಬ್ಬ ದೇವರ ಮನುಷ್ಯನಿದ್ದಾನೆ. ಜನರು ಅವನನ್ನು ಗೌರವಿಸುತ್ತಾರೆ. ಅವನು ಹೇಳುವ ವಿಷಯಗಳೆಲ್ಲ ನಿಜವಾಗುತ್ತವೆ. ಆದ್ದರಿಂದ ಈ ಪಟ್ಟಣಕ್ಕೆ ಹೋಗೋಣ ಬಹುಶಃ ನಾವು ಮುಂದೆ ಎಲ್ಲಿಗೆ ಹೋಗಬೇಕೆಂಬುದನ್ನು ಈ ದೇವರ ಮನುಷ್ಯನು ತಿಳಿಸಬಹುದು” ಎಂದು ಉತ್ತರಿಸಿದನು.


ಆದರೆ ಯೆಹೋವನು ದೇವರ ಮನುಷ್ಯನೊಬ್ಬನೊಡನೆ ಮಾತನಾಡಿದನು. ಅವನ ಹೆಸರು ಶೆಮಾಯ. ಯೆಹೋವನು,


ನಾಮಾನನು ತನ್ನ ಕುದುರೆಗಳೊಂದಿಗೆ ಮತ್ತು ರಥಗಳೊಂದಿಗೆ ಎಲೀಷನ ಮನೆಗೆ ಬಂದು, ಬಾಗಿಲಿನ ಹೊರಗಡೆ ನಿಂತುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು