2 ಅರಸುಗಳು 6:11 - ಪರಿಶುದ್ದ ಬೈಬಲ್11 ಅರಾಮ್ಯರ ರಾಜನು ಇದರಿಂದ ಬಹಳ ತಳಮಳಗೊಂಡನು. ಅರಾಮ್ಯರ ರಾಜನು ತನ್ನ ಸೇನಾಧಿಕಾರಿಗಳನ್ನು ಕರೆದು ಅವರಿಗೆ, “ಇಸ್ರೇಲಿನ ರಾಜನಿಗಾಗಿ ಗೂಢಚರ್ಯ ನಡೆಸುತ್ತಿರುವವರು ಯಾರೆಂಬುದನ್ನು ಹೇಳಿ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಇದರ ದೆಸೆಯಿಂದ ಅರಾಮ್ಯರ ಅರಸನು ಕಳವಳಗೊಂಡು ತನ್ನ ಸೇನಾಧಿಪತಿಗಳನ್ನು ಕರೆದು ಅವರನ್ನು, “ನಮ್ಮವರಲ್ಲಿ ಇಸ್ರಾಯೇಲರ ಅರಸನ ಪಕ್ಷದವರು ಯಾರು? ನನಗೆ ತಿಳಿಸುವುದಿಲ್ಲವೋ” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಈ ಕಾರಣ ಸಿರಿಯಾದ ಅರಸನು ಕಳವಳಗೊಂಡು, ತನ್ನ ಸೇನಾಪತಿಗಳನ್ನು ಕರೆದು, “ನಮ್ಮವರಲ್ಲಿ ಇಸ್ರಯೇಲರ ಅರಸನ ಪಕ್ಷದವರು ಯಾರೋ ಇದ್ದಾರೆ; ನನಗೆ ನೀವು ಯಾರೂ ತಿಳಿಸುವುದಿಲ್ಲವೇ?’ ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಇದರ ದೆಸೆಯಿಂದ ಅರಾಮ್ಯರ ಅರಸನು ಕಳವಳಗೊಂಡು ತನ್ನ ಸೇನಾಪತಿಗಳನ್ನು ಕರೆದು ಅವರನ್ನು - ನಮ್ಮವರಲ್ಲಿ ಇಸ್ರಾಯೇಲ್ಯರ ಅರಸನ ಪಕ್ಷದವರು ಯಾರು? ನನಗೆ ತಿಳಿಸುವದಿಲ್ಲವೋ ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆದ್ದರಿಂದ ಅರಾಮ್ಯರ ಅರಸನ ಹೃದಯವು ಇದರ ನಿಮಿತ್ತ ಕಳವಳಗೊಂಡು, ಅವನು ತನ್ನ ಸೇವಕರನ್ನು ಕರೆದು ಅವರಿಗೆ, “ನಮ್ಮಲ್ಲಿ ಇಸ್ರಾಯೇಲಿನ ಅರಸನ ಕಡೆಯವನು ಯಾರು? ನೀವು ನನಗೆ ತಿಳಿಸುವುದಿಲ್ಲವೋ?” ಎಂದನು. ಅಧ್ಯಾಯವನ್ನು ನೋಡಿ |
ನೀವು ನನ್ನ ವಿರುದ್ಧವಾಗಿ ಸಂಚುನಡೆಸುತ್ತಿರುವಿರಿ! ನೀವು ರಹಸ್ಯಯೋಜನೆಗಳನ್ನು ಮಾಡಿದ್ದೀರಿ. ನನ್ನ ಮಗ ಯೋನಾತಾನನ ಬಗ್ಗೆ ನಿಮ್ಮಲ್ಲಿ ಒಬ್ಬರೂ ನನಗೆ ತಿಳಿಸಲಿಲ್ಲ! ಅವನು ಇಷಯನ ಮಗನ ಜೊತೆ ಒಪ್ಪಂದ ಮಾಡಿಕೊಂಡಿದ್ದಾನೆಂದು ನಿಮ್ಮಲ್ಲಿ ಒಬ್ಬರೂ ನನಗೆ ತಿಳಿಸಲಿಲ್ಲ! ನಿಮ್ಮಲ್ಲಿ ಒಬ್ಬರೂ ನನ್ನ ಬಗ್ಗೆ ಚಿಂತಿಸುವುದಿಲ್ಲ! ನನ್ನ ಮಗ ಯೋನಾತಾನನು ದಾವೀದನನ್ನು ಪ್ರೋತ್ಸಾಹಿಸಿದ್ದಾನೆಂದು ನಿಮ್ಮಲ್ಲಿ ಒಬ್ಬರೂ ನನಗೆ ತಿಳಿಸಲಿಲ್ಲ. ಅಡಗಿಕೊಂಡು ನನ್ನ ಮೇಲೆ ಆಕ್ರಮಣ ಮಾಡುವಂತೆ ನನ್ನ ಸೇವಕನಾದ ದಾವೀದನಿಗೆ ಯೋನಾತಾನನು ಹೇಳಿಕೊಟ್ಟಿದ್ದಾನೆ! ಈಗ ದಾವೀದನು ಮಾಡುತ್ತಿರುವುದು ಅದನ್ನೇ!” ಎಂದು ಹೇಳಿದನು.