Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 6:12 - ಪರಿಶುದ್ದ ಬೈಬಲ್‌

12 ಅರಾಮ್ಯರ ರಾಜನ ಅಧಿಕಾರಿಗಳಲ್ಲೊಬ್ಬನು, “ನನ್ನ ಒಡೆಯನೇ, ರಾಜನೇ, ನಮ್ಮಲ್ಲಿ ಯಾರೊಬ್ಬರೂ ಗೂಢಚಾರರಲ್ಲ. ಇಸ್ರೇಲಿನ ಪ್ರವಾದಿಯಾದ ಎಲೀಷನು ಅನೇಕ ರಹಸ್ಯ ಸಂಗತಿಗಳನ್ನು ಅಂದರೆ ನೀವು ನಿಮ್ಮ ಮಲಗುವ ಕೊಠಡಿಯಲ್ಲಿ ಮಾತನಾಡುವುದನ್ನೂ ಸಹ ಇಸ್ರೇಲಿನ ರಾಜನಿಗೆ ತಿಳಿಸಬಲ್ಲವನಾಗಿದ್ದಾನೆ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಗ ಅವರಲ್ಲೊಬ್ಬನು ಅವನಿಗೆ, “ನನ್ನ ಒಡೆಯನಾದ ಅರಸನೇ, ಹಾಗಲ್ಲ, ಇಸ್ರಾಯೇಲರಲ್ಲಿ ಎಲೀಷನೆಂಬ ಒಬ್ಬ ಪ್ರವಾದಿಯಿರುತ್ತಾನೆ. ನೀನು ನಿನ್ನ ಮಲಗುವ ಕೋಣೆಯಲ್ಲಿ ಆಡುವ ಮಾತುಗಳನ್ನು ಸಹ ಅವನು ಅರಿತುಕೊಂಡು ಎಲ್ಲವನ್ನೂ ಇಸ್ರಾಯೇಲರ ಅರಸನಿಗೆ ತಿಳಿಸುತ್ತಾನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆಗ ಅವರಲ್ಲೊಬ್ಬನು, “ನನ್ನ ಒಡೆಯರಾದ ಅರಸೇ, ಹಾಗಲ್ಲ; ಇಸ್ರಯೇಲರಲ್ಲಿ ಎಲೀಷನೆಂಬೊಬ್ಬ ಪ್ರವಾದಿಯಿದ್ದಾನೆ; ನೀವು ನಿಮ್ಮ ಮಲಗುವ ಕೋಣೆಯಲ್ಲಿ ಆಡುವ ಮಾತುಗಳನ್ನು ಸಹ ಅವನು ಅರಿತುಕೊಂಡು ಎಲ್ಲವನ್ನೂ ಇಸ್ರಯೇಲರ ಅರಸನಿಗೆ ತಿಳಿಸುತ್ತಾನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆಗ ಅವರಲ್ಲೊಬ್ಬನು ಅವನಿಗೆ - ನನ್ನ ಒಡೆಯನಾದ ಅರಸೇ, ಹಾಗಲ್ಲ; ಇಸ್ರಾಯೇಲ್ಯರಲ್ಲಿ ಎಲೀಷನೆಂಬೊಬ್ಬ ಪ್ರವಾದಿಯಿರುತ್ತಾನೆ; ನೀನು ನಿನ್ನ ಮಲಗುವ ಕೋಣೆಯಲ್ಲಿ ಆಡುವ ಮಾತುಗಳನ್ನು ಸಹ ಅವನು ಅರಿತುಕೊಂಡು ಎಲ್ಲವನ್ನೂ ಇಸ್ರಾಯೇಲ್ಯರ ಅರಸನಿಗೆ ತಿಳಿಸುತ್ತಾನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅವನ ಸೇವಕರಲ್ಲಿ ಒಬ್ಬನು, “ನನ್ನ ಒಡೆಯನೇ, ಅರಸನೇ, ಯಾವನೂ ಇಲ್ಲ. ಆದರೆ ಇಸ್ರಾಯೇಲಿನಲ್ಲಿರುವ ಪ್ರವಾದಿಯಾದ ಎಲೀಷನು ನಿನ್ನ ಮಲಗುವ ಕೋಣೆಯಲ್ಲಿ ನೀನು ಹೇಳುವ ಮಾತುಗಳನ್ನು ಸಹ ಇಸ್ರಾಯೇಲಿನ ಅರಸನಿಗೆ ಹೇಳುತ್ತಾನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 6:12
19 ತಿಳಿವುಗಳ ಹೋಲಿಕೆ  

ನನ್ನ ಒಡೆಯನಾದ ಯೆಹೋವನು ಒಂದು ಕಾರ್ಯವನ್ನು ಮಾಡಲು ನಿರ್ಧರಿಸಬಹುದು. ಆದರೆ ಆತನು ಹಾಗೆ ಮಾಡುವ ಮುಂಚಿತವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ಮುಂತಿಳಿಸುವನು.


“ನಿನ್ನ ದೇವರು ಸರ್ವಶ್ರೇಷ್ಠನು ಮತ್ತು ಪ್ರಬಲನು ಎನ್ನುವದು ನನಗೆ ಖಚಿತವಾಯಿತು. ಆತನು ಎಲ್ಲ ಅರಸರ ಒಡೆಯನಾಗಿದ್ದಾನೆ. ಆತನು ಜನರಿಗೆ ನಿಗೂಢವಾಗಿದ್ದ ರಹಸ್ಯವನ್ನು ತಿಳಿಸುತ್ತಾನೆ. ನೀನು ನನಗೆ ಈ ರಹಸ್ಯವನ್ನು ತಿಳಿಸಲು ಸಮರ್ಥನಾದುದರಿಂದ ಇದೆಲ್ಲ ನಿಜವೆಂದು ನಾನು ನಂಬುತ್ತೇನೆ” ಎಂದು ಹೇಳಿದನು.


ಯೆಹೋವನಿಗೆ ತಮ್ಮ ಆಲೋಚನೆಗಳು ತಿಳಿಯಬಾರದೆಂದು ಕುತಂತ್ರೋಪಾಯಗಳನ್ನು ಮಾಡಿ, ಕತ್ತಲೆಯಲ್ಲಿ ದುಷ್ಕೃತ್ಯಗಳನ್ನು ಮಾಡುತ್ತಾ, “ನಮ್ಮನ್ನು ಯಾರು ನೋಡಬಲ್ಲರು, ನಮ್ಮನ್ನು ಯಾರು ಗುರುತಿಸಬಲ್ಲರು?” ಎಂದುಕೊಳ್ಳುವವರ ಗತಿಯನ್ನು ಏನು ಹೇಳಲಿ.


ರಾಜನನ್ನು ಮನಸ್ಸಿನಲ್ಲಿಯೂ ದೂಷಿಸಬೇಡ; ನಿನ್ನ ಮನೆಯಲ್ಲಿ ಒಬ್ಬಂಟಿಗನಾಗಿರುವಾಗಲೂ ಐಶ್ವರ್ಯವಂತರನ್ನು ದೂಷಿಸಬೇಡ. ಯಾಕೆಂದರೆ ಚಿಕ್ಕ ಪಕ್ಷಿಯೊಂದು ಹಾರಿಹೋಗಿ, ನೀನು ಹೇಳಿದ ಪ್ರತಿಯೊಂದನ್ನು ಅವರಿಗೆ ಹೇಳಬಹುದು.


ಈ ಹುಡುಗಿಯು ನಾಮಾನನ ಪತ್ನಿಗೆ, “ನನ್ನ ಒಡೆಯನಾದ ನಾಮಾನನು ಸಮಾರ್ಯದಲ್ಲಿ ವಾಸಿಸುವ ಪ್ರವಾದಿಯಾದ ಎಲೀಷನನ್ನು ಭೇಟಿಮಾಡಬೇಕೆಂದು ನಾನು ಆಶಿಸುತ್ತೇನೆ. ಆ ಪ್ರವಾದಿಯು ನಾಮಾನನ ಕುಷ್ಠರೋಗವನ್ನು ಗುಣಪಡಿಸಬಲ್ಲನು” ಎಂದು ಹೇಳಿದಳು.


ಇಸ್ರೇಲಿನ ರಾಜನು ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡನೆಂಬುದು ದೇವಮನುಷ್ಯನಾದ ಎಲೀಷನಿಗೆ ತಿಳಿಯಿತು. ಎಲೀಷನು ರಾಜನಿಗೆ ಈ ಸಂದೇಶವನ್ನು ಕಳುಹಿಸಿದನು: “ನೀನು ನಿನ್ನ ಬಟ್ಟೆಗಳನ್ನು ಹರಿದುಕೊಂಡಿದ್ದು ಏಕೆ? ನಾಮಾನನು ನನ್ನ ಬಳಿಗೆ ಬರಲಿ. ಇಸ್ರೇಲಿನಲ್ಲಿ ಒಬ್ಬ ಪ್ರವಾದಿ ಇದ್ದಾನೆಂಬುದು ಅವನಿಗೆ ತಿಳಿಯುತ್ತದೆ!”


ನೈಲ್ ನದಿಯು ಕಪ್ಪೆಗಳಿಂದ ತುಂಬಿ ಹೋಗುವುದು. ಕಪ್ಪೆಗಳು ನದಿಯಿಂದ ಬಂದು ನಿಮ್ಮ ಮನೆಗಳನ್ನು ಪ್ರವೇಶಿಸುವವು; ನಿಮ್ಮ ಮಲಗುವ ಕೋಣೆಯಲ್ಲಿಯೂ ನಿಮ್ಮ ಹಾಸಿಗೆಗಳಲ್ಲಿಯೂ ನಿಮ್ಮ ಅಧಿಕಾರಿಗಳ ಮನೆಗಳಲ್ಲಿಯೂ ನಿಮ್ಮ ಒಲೆಗಳಲ್ಲಿಯೂ ನೀರಿನ ಜಾಡಿಗಳಲ್ಲಿಯೂ ಹಿಟ್ಟುನಾದುವ ತಟ್ಟೆಗಳಲ್ಲಿಯೂ ಇರುವವು;


ಅರಾಮ್ಯರ ರಾಜನು ಇದರಿಂದ ಬಹಳ ತಳಮಳಗೊಂಡನು. ಅರಾಮ್ಯರ ರಾಜನು ತನ್ನ ಸೇನಾಧಿಕಾರಿಗಳನ್ನು ಕರೆದು ಅವರಿಗೆ, “ಇಸ್ರೇಲಿನ ರಾಜನಿಗಾಗಿ ಗೂಢಚರ್ಯ ನಡೆಸುತ್ತಿರುವವರು ಯಾರೆಂಬುದನ್ನು ಹೇಳಿ?” ಎಂದು ಕೇಳಿದನು.


ಅರಾಮ್ಯರ ರಾಜನು, “ಎಲೀಷನನ್ನು ಕಂಡುಹಿಡಿಯಿರಿ. ಅವನನ್ನು ಸೆರೆಹಿಡಿಯಲು ನಾನು ಸೈನಿಕರನ್ನು ಕಳುಹಿಸುತ್ತೇನೆ” ಎಂದನು. ಸೇವಕರು ಅರಾಮ್ಯರ ರಾಜನಿಗೆ, “ಎಲೀಷನು ದೋತಾನಿನಲ್ಲಿದ್ದಾನೆ” ಎಂದು ಹೇಳಿದರು.


ಎಲೀಷನು ಗೇಹಜಿಗೆ, “ಅದು ನಿಜವಲ್ಲ! ನಾಮಾನನು ನಿನ್ನನ್ನು ಸಂಧಿಸಲು ತನ್ನ ರಥದಿಂದ ಹಿಂದಕ್ಕೆ ತಿರುಗಿದಾಗ ನನ್ನ ಹೃದಯವು ನಿನ್ನ ಹತ್ತಿರದಲ್ಲಿಯೇ ಇತ್ತು. ಹಣವನ್ನು, ಬಟ್ಟೆಗಳನ್ನು, ಆಲೀವನ್ನು, ದ್ರಾಕ್ಷಿಯನ್ನು, ಕುರಿಗಳನ್ನು, ಹಸುಗಳನ್ನು ಅಥವಾ ಸೇವಕಸೇವಕಿಯರನ್ನು ತೆಗೆದುಕೊಳ್ಳುವ ಕಾಲ ಇದಲ್ಲ.


ಯೆಹೋವನೇ ವಿರೋಧವಾಗಿದ್ದರೆ, ಜಯಪ್ರಧವಾಗಬಲ್ಲ ಯೋಜನೆಯನ್ನು ಮಾಡುವಂಥ ಜ್ಞಾನ ಯಾರಿಗೂ ಇಲ್ಲ.


ಯುದ್ಧ ಮಾಡಲು ಯೋಜನೆ ಹಾಕಿರಿ. ಆದರೆ ನಿಮ್ಮ ಯೋಜನೆಯೆಲ್ಲಾ ನಿಷ್ಫಲವಾಗುವುದು. ನಿಮ್ಮ ಸೈನ್ಯಕ್ಕೆ ಆಜ್ಞೆಕೊಡಿರಿ. ಆದರೆ ಅದು ನಿಷ್ಪ್ರಯೋಜಕವಾಗುವುದು. ಯಾಕೆಂದರೆ ದೇವರು ನಮ್ಮೊಂದಿಗಿದ್ದಾನೆ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು