2 ಅರಸುಗಳು 6:15 - ಪರಿಶುದ್ದ ಬೈಬಲ್15 ಎಲೀಷನ ಸೇವಕನು ಹೊತ್ತಾರೆ ನಸುಕಿನಲ್ಲಿಯೇ ಮೇಲಕ್ಕೆದ್ದನು. ಸೇವಕನು ಹೊರಕ್ಕೆ ಹೋದಾಗ ರಥಗಳಿಂದ ಮತ್ತು ಕುದುರೆಗಳಿಂದ ಕೂಡಿದ ಸೈನ್ಯವು ನಗರವನ್ನು ಸುತ್ತುವರಿದಿರುವುದನ್ನು ನೋಡಿದನು! ಆ ಸೇವಕನು ಎಲೀಷನಿಗೆ, “ಅಯ್ಯೋ, ನನ್ನ ಒಡೆಯನೇ, ನಾವು ಈಗ ಏನು ಮಾಡೋಣ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ದೇವರ ಮನುಷ್ಯನ ಸೇವಕನು ಬೆಳಿಗ್ಗೆ ಎದ್ದು ಹೊರಗೆ ಬಂದು ನೋಡಿದಾಗ ರಥರಥಾಶ್ವಸಹಿತವಾದ ಮಹಾಸೈನ್ಯವು ಬಂದು ಪಟ್ಟಣದ ಸುತ್ತಲೂ ನಿಂತಿರುವುದನ್ನು ಕಂಡು ತನ್ನ ಯಜಮಾನನಿಗೆ, “ಅಯ್ಯೋ, ಸ್ವಾಮಿ ನಾವು ಏನು ಮಾಡೋಣ?” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ದೈವಪುರುಷನ ಸೇವಕನು ಬೆಳಿಗ್ಗೆ ಎದ್ದು ಹೊರಗೆ ಹೋದಾಗ ರಥರಥಾಶ್ವಸಹಿತವಾದ ಮಹಾಸೈನ್ಯವು ಬಂದು, ಪಟ್ಟಣದ ಸುತ್ತಲೂ ನಿಂತಿರುವುದನ್ನು ಕಂಡು, ತನ್ನ ಯಜಮಾನನಿಗೆ, “ಅಯ್ಯೋ! ಗುರುವೇ, ಏನು ಮಾಡೋಣ?” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ದೇವರ ಮನುಷ್ಯನ ಸೇವಕನು ಬೆಳಿಗ್ಗೆ ಎದ್ದು ಹೊರಗೆ ಹೋದಾಗ ರಥರಥಾಶ್ವಸಹಿತವಾದ ಮಹಾಸೈನ್ಯವು ಬಂದು ಪಟ್ಟಣದ ಸುತ್ತಲೂ ನಿಂತಿರುವದನ್ನು ಕಂಡು ತನ್ನ ಯಜಮಾನನಿಗೆ - ಅಯ್ಯೋ, ಸ್ವಾಮೀ, ಏನು ಮಾಡೋಣ ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ದೇವರ ಮನುಷ್ಯನ ಸೇವಕನು ಉದಯದಲ್ಲಿ ಎದ್ದು ಹೊರಗೆ ಹೊರಟಾಗ, ಕುದುರೆಗಳೂ ರಥಗಳೂ ಉಳ್ಳ ಸೈನ್ಯ ಪಟ್ಟಣವನ್ನು ಸುತ್ತಿಕೊಂಡಿರುವುದನ್ನು ಕಂಡು ಎಲೀಷನಿಗೆ, “ಅಯ್ಯೋ! ನನ್ನ ಯಜಮಾನನೇ, ನಾವು ಏನು ಮಾಡುವುದು?” ಎಂದನು. ಅಧ್ಯಾಯವನ್ನು ನೋಡಿ |