2 ಅರಸುಗಳು 6:18 - ಪರಿಶುದ್ದ ಬೈಬಲ್18 ಆ ಬೆಂಕಿಯಂತಿರುವ ಕುದುರೆಗಳು ಮತ್ತು ರಥಗಳು ಎಲೀಷನ ಬಳಿಗೆ ಇಳಿದುಬಂದವು. ಎಲೀಷನು ಯೆಹೋವನನ್ನು ಪ್ರಾರ್ಥಿಸಿ, “ಈ ಜನರನ್ನು ಕುರುಡರನ್ನಾಗಿ ಮಾಡಬೇಕೆಂದು ನಾನು ನಿನ್ನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಹೇಳಿದನು. ಆಗ ಯೆಹೋವನು ಎಲೀಷನ ಪ್ರಾರ್ಥನೆಯಂತೆ ಅರಾಮ್ಯರ ಸೇನೆಯು ಕುರುಡರಾಗುವಂತೆ ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಶತ್ರುಗಳಾದ ಅರಾಮ್ಯರು ಸಮೀಪಕ್ಕೆ ಬಂದಾಗ ಎಲೀಷನು, “ಸ್ವಾಮಿ, ಈ ಜನರನ್ನು ಕುರುಡರನ್ನಾಗಿ ಮಾಡು” ಎಂದು ಯೆಹೋವನನ್ನು ಪ್ರಾರ್ಥಿಸಿದನು. ಯೆಹೋವನು ಅವನ ಮೊರೆಯನ್ನು ಲಾಲಿಸಿ ಅವರನ್ನು ಕುರುಡರನ್ನಾಗಿ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಶತ್ರುಗಳು ಸಮೀಪಕ್ಕೆ ಬಂದಾಗ ಎಲೀಷನು, “ಸ್ವಾಮೀ, ಈ ಜನರನ್ನು ಕುರುಡರನ್ನಾಗಿ ಮಾಡಿ,” ಎಂದು ಸರ್ವೇಶ್ವರನನ್ನು ಪ್ರಾರ್ಥಿಸಿದನು. ಅವರು ಅವನ ಮೊರೆಯನ್ನು ಆಲಿಸಿ ಆ ಜನರನ್ನು ಕುರುಡರನ್ನಾಗಿ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಶತ್ರುಗಳು ಸಮೀಪಕ್ಕೆ ಬಂದಾಗ ಎಲೀಷನು - ಸ್ವಾಮೀ, ಈ ಜನರನ್ನು ಕುರುಡರನ್ನಾಗಿಮಾಡು ಎಂದು ಯೆಹೋವನನ್ನು ಪ್ರಾರ್ಥಿಸಿದನು. ಆತನು ಅವನ ಮೊರೆಯನ್ನು ಲಾಲಿಸಿ ಅವರನ್ನು ಕುರುಡರನ್ನಾಗಿ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಶತ್ರುಗಳು ಸಮೀಪಕ್ಕೆ ಬಂದಾಗ ಎಲೀಷನು, “ಯೆಹೋವ ದೇವರೇ, ನೀವು ದಯಮಾಡಿ ಈ ಜನರನ್ನು ಕುರುಡರನ್ನಾಗಿ ಮಾಡಿರಿ,” ಎಂದು ಪ್ರಾರ್ಥಿಸಿದನು. ಎಲೀಷನ ಮಾತಿನ ಹಾಗೆಯೇ ದೇವರು ಅವರನ್ನು ಕುರುಡರನ್ನಾಗಿ ಮಾಡಿದರು. ಅಧ್ಯಾಯವನ್ನು ನೋಡಿ |