2 ಅರಸುಗಳು 6:2 - ಪರಿಶುದ್ದ ಬೈಬಲ್2 ನಾವೆಲ್ಲಾ ಜೋರ್ಡನ್ ನದಿಗೆ ಹೋಗಿ ಸ್ವಲ್ಪ ಮರವನ್ನು ಕಡಿದುಕೊಂಡು ಬರೋಣ. ಪ್ರತಿಯೊಬ್ಬರೂ ಒಂದೊಂದು ದಿಮ್ಮಿಯನ್ನು ತಂದು ನಾವು ವಾಸಿಸಲು ಒಂದು ಮನೆಯನ್ನು ಕಟ್ಟೋಣ” ಎಂದು ಹೇಳಿದರು. ಎಲೀಷನು, “ಸರಿ, ಹಾಗೆಯೇ ಮಾಡಿ” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆದುದರಿಂದ ನಾವು ಯೊರ್ದನಿಗೆ ಹೋಗಿ, ಅಲ್ಲಿ ಪ್ರತಿಯೊಬ್ಬನೂ ಒಂದೊಂದು ತೊಲೆಯನ್ನು ಕಡಿದುಕೊಂಡು ಬಂದು, ನಮ್ಮ ವಾಸಕ್ಕಾಗಿ ಒಂದು ಮನೆಯನ್ನು ಮಾಡಿಕೊಳ್ಳೋಣ” ಎಂದರು. ಎಲೀಷನು ಅವರಿಗೆ, “ಹೋಗಿಬನ್ನಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆದುದರಿಂದ ನಾವು ಜೋರ್ಡನಿಗೆ ಹೋಗಿ ಅಲ್ಲಿ ಪ್ರತಿಯೊಬ್ಬನೂ ಒಂದೊಂದು ದಿಮ್ಮಿಯನ್ನು ಕಡಿದುಕೊಂಡು ಬಂದು ನಮಗೆ ಇರಲು ಒಂದು ಮನೆಯನ್ನು ಕಟ್ಟಿಕೊಳ್ಳೋಣ,” ಎಂದರು. ಅವನು ಅವರಿಗೆ, “ಹೋಗಬಹುದು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆದದರಿಂದ ನಾವು ಯೊರ್ದನಿಗೆ ಹೋಗಿ ಅಲ್ಲಿ ಪ್ರತಿಯೊಬ್ಬನೂ ಒಂದೊಂದು ತೊಲೆಯನ್ನು ಕಡಿದುಕೊಂಡು ಬಂದು ನಮಗೋಸ್ಕರ ಒಂದು ಮನೆಯನ್ನು ಮಾಡಿಕೊಳ್ಳೋಣ ಅಂದರು; ಅವನು ಅವರಿಗೆ ಹೋಗಬಹುದು ಎಂದು ಹೇಳಲು ಅವರಲ್ಲೊಬ್ಬನು - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನಾವು ಯೊರ್ದನಿನವರೆಗೂ ಹೋಗಿ, ಪ್ರತಿ ಮನುಷ್ಯನು ಅಲ್ಲಿಂದ ಒಂದೊಂದು ತೊಲೆಯನ್ನು ತೆಗೆದುಕೊಂಡು ಬಂದು, ವಾಸವಾಗಿರುವುದಕ್ಕೆ ನಮಗೋಸ್ಕರ ಒಂದು ಸ್ಥಳವನ್ನು ಅಲ್ಲಿ ಮಾಡುವೆವು,” ಎಂದರು. ಅವನು, “ಹೋಗಿರಿ,” ಎಂದನು. ಅಧ್ಯಾಯವನ್ನು ನೋಡಿ |