2 ಅರಸುಗಳು 6:23 - ಪರಿಶುದ್ದ ಬೈಬಲ್23 ಇಸ್ರೇಲಿನ ರಾಜನು ಅರಾಮ್ಯರ ಸೇನೆಗೆ ಆಹಾರವನ್ನು ಹೇರಳವಾಗಿ ಸಿದ್ಧಪಡಿಸಿದನು. ಅರಾಮ್ಯರ ಸೇನೆಯು ಊಟಮಾಡಿ, ನೀರನ್ನು ಕುಡಿದರು. ನಂತರ ಇಸ್ರೇಲಿನ ರಾಜನು ಅರಾಮ್ಯರ ಸೇನೆಗೆ ತಮ್ಮ ಒಡೆಯನ ಬಳಿಗೆ ಹೋಗಲು ಆಜ್ಞಾಪಿಸಿದನು. ಅಂದಿನಿಂದ ಇಸ್ರೇಲ್ ದೇಶದ ಮೇಲೆ ಧಾಳಿಮಾಡಲು ಯಾವ ಸೈನಿಕರನ್ನೂ ಅರಾಮ್ಯರು ಕಳುಹಿಸಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆಗ ಅರಸನು ಅವರಿಗಾಗಿ ಒಂದು ದೊಡ್ಡ ಔತಣವನ್ನು ಮಾಡಿಸಿ ಅವರು ಅನ್ನ ಪಾನಗಳನ್ನು ತೆಗೆದುಕೊಂಡಾದ ಮೇಲೆ ಅವರನ್ನು ಅವರ ಯಜಮಾನನ ಬಳಿಗೆ ಕಳುಹಿಸಿದನು. ಅಂದಿನಿಂದ ಸುಲಿಗೆ ಮಾಡುವ ಅರಾಮ್ಯರ ಗುಂಪುಗಳು ಇಸ್ರಾಯೇಲರ ಪ್ರಾಂತ್ಯದೊಳಗೆ ಮತ್ತೆ ಬರಲೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಆಗ ಅರಸನು ಅವರಿಗಾಗಿ ಒಂದು ದೊಡ್ಡ ಔತಣವನ್ನು ಮಾಡಿಸಿ, ಅವರು ಅನ್ನಪಾನಗಳನ್ನು ತೆಗೆದುಕೊಂಡ ಮೇಲೆ, ಅವರನ್ನು ಅವರ ಯಜಮಾನನ ಬಳಿಗೆ ಕಳುಹಿಸಿದನು. ಅಂದಿನಿಂದ ಸುಲಿಗೆಮಾಡುವ ಸಿರಿಯಾದ ಗುಂಪುಗಳು ಇಸ್ರಯೇಲರ ಪ್ರಾಂತದೊಳಗೆ ಮತ್ತೆ ಬರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಆಗ ಅರಸನು ಅವರಿಗೋಸ್ಕರ ದೊಡ್ಡ ಔತಣವನ್ನು ಮಾಡಿಸಿ ಅವರು ಅನ್ನಪಾನಗಳನ್ನು ತೆಗೆದುಕೊಂಡ ಮೇಲೆ ಅವರನ್ನು ಅವರ ಯಜಮಾನನ ಬಳಿಗೆ ಕಳುಹಿಸಿದನು. ಅಂದಿನಿಂದ ಸುಲಿಗೆಮಾಡುವ ಅರಾಮ್ಯರ ಗುಂಪುಗಳು ಇಸ್ರಾಯೇಲ್ಯರ ಪ್ರಾಂತದೊಳಗೆ ತಿರಿಗಿ ಬರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆಗ ಅವರಿಗೋಸ್ಕರ ದೊಡ್ಡ ಔತಣ ಮಾಡಿಸಿದನು. ಅವರು ತಿಂದು ಕುಡಿದ ತರುವಾಯ ಅವರನ್ನು ಕಳುಹಿಸಿಬಿಟ್ಟನು. ಅವರು ತಮ್ಮ ಯಜಮಾನನ ಬಳಿಗೆ ಹೋದರು. ಅರಾಮ್ಯರ ದಂಡುಗಳು ಇಸ್ರಾಯೇಲ್ ದೇಶದ ಮೇಲೆ ಮತ್ತೆ ದಾಳಿಮಾಡಲಿಲ್ಲ. ಅಧ್ಯಾಯವನ್ನು ನೋಡಿ |
ಆ ನಾಯಕರುಗಳು ಎದ್ದು ಸೆರೆಯವರಿಗೆ ಸಹಾಯ ಮಾಡಿದರು. ಇಸ್ರೇಲ್ ಸೈನಿಕರು ಸೂರೆಮಾಡಿದ ಬಟ್ಟೆಬರೆಗಳನ್ನು ಈ ನಾಯಕರು ಪಡೆದುಕೊಂಡು ಬೆತ್ತಲೆಯಾಗಿದ್ದ ಸೆರೆಯವರಿಗೆ ಕೊಟ್ಟರು. ಅವರ ಕಾಲಿಗೆ ಕೆರಗಳನ್ನು ಕೊಟ್ಟು, ಊಟೋಪಚಾರಗಳಿಂದ ಸತ್ಕರಿಸಿದರು. ಗಾಯಗೊಂಡವರಿಗೆ ಎಣ್ಣೆ ಹಚ್ಚಿ ಅವರಲ್ಲಿದ್ದ ಬಲಹೀನರನ್ನು ಕತ್ತೆಯ ಮೇಲೆ ಕುಳ್ಳಿರಿಸಿ ಜೆರಿಕೊವಿನಲ್ಲಿದ್ದ ಅವರವರ ಮನೆಗಳಿಗೆ ಕರೆದುಕೊಂಡು ಹೋದರು. ಜೆರಿಕೊವಿಗೆ “ಖರ್ಜೂರ ಮರಗಳ ಊರು” ಎಂಬ ಹೆಸರಿದೆ. ಅನಂತರ ಆ ನಾಲ್ಕು ಮಂದಿ ನಾಯಕರು ಸಮಾರ್ಯದಲ್ಲಿದ್ದ ತಮ್ಮ ಮನೆಗೆ ಹೋದರು.