2 ಅರಸುಗಳು 6:26 - ಪರಿಶುದ್ದ ಬೈಬಲ್26 ಇಸ್ರೇಲಿನ ರಾಜನು ನಗರದ ಸುತ್ತಲಿನ ಗೋಡೆಯ ಮೇಲೆ ನಡೆಯುತ್ತಿರಲು ಸ್ತ್ರೀಯೊಬ್ಬಳು ಅವನನ್ನು, “ನನ್ನ ಪ್ರಭುವೇ, ರಾಜನೇ, ದಯವಿಟ್ಟು ನನಗೆ ಸಹಾಯಮಾಡು” ಎಂದು ಕೂಗಿಕೊಂಡಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಒಂದು ದಿನ ಇಸ್ರಾಯೇಲರ ಅರಸನು ಪೌಳಿಗೋಡೆಯ ಮೇಲೆ ಹಾದುಹೋಗುತ್ತಿರುವಾಗ, ಒಬ್ಬ ಸ್ತ್ರೀಯು, “ಅರಸನೇ, ನನ್ನ ಒಡೆಯನೇ, ನನ್ನನ್ನು ರಕ್ಷಿಸು” ಎಂದು ಮೊರೆಯಿಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಒಂದು ದಿನ ಇಸ್ರಯೇಲರ ಅರಸನು ಕೋಟೆಯ ಮೇಲೆ ತಿರುಗಾಡುತ್ತಿರುವಾಗ ಒಬ್ಬ ಮಹಿಳೆ, “ಅರಸರೇ, ನಮ್ಮ ಒಡೆಯರೇ, ನನ್ನನ್ನು ಕಾಪಾಡಿ,” ಎಂದು ಮೊರೆಯಿಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಒಂದು ದಿವಸ ಇಸ್ರಾಯೇಲ್ಯರ ಅರಸನು ಪೌಳಿಗೋಡೆಯ ಮೇಲೆ ಹಾದುಹೋಗುತ್ತಿರುವಾಗ ಒಬ್ಬ ಸ್ತ್ರೀಯು - ಅರಸೇ, ನನ್ನ ಒಡೆಯನೇ, ನನ್ನನ್ನು ರಕ್ಷಿಸು ಎಂದು ಮೊರೆಯಿಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಇಸ್ರಾಯೇಲಿನ ಅರಸನು ಗೋಡೆಯ ಮೇಲೆ ಹಾದು ಹೋಗುತ್ತಿರುವಾಗ, ಒಬ್ಬ ಸ್ತ್ರೀಯು ಅವನನ್ನು ಕೂಗಿ, “ನನ್ನ ಯಜಮಾನನೇ, ಅರಸನೇ, ಸಹಾಯ ಮಾಡಿ,” ಎಂದಳು. ಅಧ್ಯಾಯವನ್ನು ನೋಡಿ |