2 ಅರಸುಗಳು 6:31 - ಪರಿಶುದ್ದ ಬೈಬಲ್31 ಇದಲ್ಲದೆ ರಾಜನು, “ಈ ದಿನದ ಅಂತ್ಯದೊಳಗೆ ನಾನು ಶಾಫಾಟನ ಮಗನಾದ ಎಲೀಷನ ತಲೆಯನ್ನು ಅವನ ದೇಹದ ಮೇಲೆ ಉಳಿಯುವಂತೆ ಮಾಡಿದರೆ ದೇವರು ನನ್ನನ್ನು ದಂಡಿಸಲಿ!” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಇದಲ್ಲದೆ ಅವನು, “ನಾನು ಈ ಹೊತ್ತು ಶಾಫಾಟನ ಮಗನಾದ ಎಲೀಷನ ತಲೆಯನ್ನು ಅವನ ದೇಹದಿಂದ ಬೇರ್ಪಡಿಸದೆ ಹೋದರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ” ಎಂದು ಆಣೆಯಿಟ್ಟುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಇದಲ್ಲದೆ ಅವನು, “ನಾನು ಈ ದಿನ ಶಾಫಾಟನ ಮಗ ಎಲೀಷನ ತಲೆಯನ್ನು ಹಾರಿಸದಿದ್ದರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ!” ಎಂದು ಆಣೆಯಿಟ್ಟುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಇದಲ್ಲದೆ ಅವನು - ನಾನು ಈಹೊತ್ತು ಶಾಫಾಟನ ಮಗನಾದ ಎಲೀಷನ ತಲೆಯನ್ನು ಹಾರಿಸದಿದ್ದರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ ಎಂದು ಆಣೆಯಿಟ್ಟುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಆಗ ಅವನು, “ಶಾಫಾಟನ ಮಗ ಎಲೀಷನ ತಲೆಯನ್ನು ಹಾರಿಸದಿದ್ದರೆ, ದೇವರು ನನಗೆ ಇದರಂತೆಯೂ ಇನ್ನೂ ಹೆಚ್ಚಾಗಿಯೂ ಮಾಡಲಿ,” ಎಂದನು. ಅಧ್ಯಾಯವನ್ನು ನೋಡಿ |
ರಾಜನಾದ ಅಹಾಬನು, “ಬೇರೊಬ್ಬ ಪ್ರವಾದಿಯು ಇಲ್ಲಿದ್ದಾನೆ. ಅವನು ಇಮ್ಲನ ಮಗನಾದ ಮೀಕಾಯೆಹು ಎಂಬ ಹೆಸರಿನವನು. ಆದರೆ ನಾನು ಅವನನ್ನು ದ್ವೇಷಿಸುತ್ತೇನೆ. ಯೆಹೋವನ ಪ್ರತಿನಿಧಿಯಾಗಿ ಅವನು ಮಾತನಾಡುವಾಗ ಅವನೆಂದೂ ನನಗೆ ಒಳ್ಳೆಯವುಗಳನ್ನು ಪ್ರವಾದಿಸುವುದಿಲ್ಲ. ಅವನು ಯಾವಾಗಲೂ ನನಗೆ ಕೆಟ್ಟವುಗಳನ್ನೇ ಪ್ರವಾದಿಸುತ್ತಾನೆ” ಎಂದು ಉತ್ತರಿಸಿದನು. ಯೆಹೋಷಾಫಾಟನು, “ರಾಜನಾದ ಅಹಾಬನೇ, ನೀನು ಆ ಸಂಗತಿಗಳನ್ನು ಹೇಳಲೇಬಾರದು!” ಎಂದು ಹೇಳಿದನು.
ಯೆಹೋವನು ಹೇಳಿರುವ ಸಂಗತಿಗಳು ನಿಜವಾಗಿಯೂ ಸಂಭವಿಸುತ್ತವೆ ಎಂದು ನಾನು ಪ್ರಮಾಣ ಮಾಡುತ್ತೇನೆ. ಸೌಲನ ವಂಶದವರಿಂದ ರಾಜ್ಯಾಧಿಕಾರವನ್ನು ಕಿತ್ತುಕೊಂಡು ದಾವೀದನಿಗೆ ಕೊಡುವುದಾಗಿ ಯೆಹೋವನು ಹೇಳಿದ್ದಾನೆ. ಯೆಹೋವನು ಇಸ್ರೇಲಿಗೂ ಯೆಹೂದಕ್ಕೂ ದಾವೀದನನ್ನು ರಾಜನನ್ನಾಗಿ ಮಾಡುತ್ತಾನೆ. ಅವನು ದಾನಿನಿಂದ ಬೇರ್ಷೆಬದವರೆಗೆ ಆಳುತ್ತಾನೆ. ಈ ಸಂಗತಿಗಳು ನೆರವೇರುವುದಕ್ಕೆ ನಾನು ಸಹಾಯ ಮಾಡದಿದ್ದರೆ ದೇವರು ನನಗೆ ಕೆಟ್ಟದ್ದನ್ನು ಮಾಡಲಿ” ಎಂದು ಹೇಳಿದನು.
ನಂತರ ಅವರು ಬೆನ್ಹದದನ ಮತ್ತೊಂದು ಸಂದೇಶದೊಂದಿಗೆ ಹಿಂದಿರುಗಿ ಬಂದರು. ಆ ಸಂದೇಶವು ಹೀಗಿತ್ತು: “ನಾನು ಸಮಾರ್ಯವನ್ನು ಸಂಪೂರ್ಣವಾಗಿ ನಾಶಗೊಳಿಸುತ್ತೇನೆ. ಆ ನಗರದಲ್ಲಿ ಏನನ್ನೂ ಉಳಿಸುವುದಿಲ್ಲವೆಂದು ನಾನು ಪ್ರಮಾಣ ಮಾಡುತ್ತೇನೆ. ನನ್ನ ಜನರು, ಆ ನಗರವನ್ನು ಕಂಡುಹಿಡಿಯಲಾಗದಂತೆ ಮತ್ತು ಮನೆಗೆ ತೆಗೆದುಕೊಂಡು ಹೋಗಲು ಒಂದು ಹಿಡಿ ಧೂಳೂ ಉಳಿಯದಂತೆ ಮಾಡಿಬಿಡುತ್ತಾರೆ. ನಾನು ಇದನ್ನು ಮಾಡದೆ ಹೋದರೆ ದೇವರು ನನ್ನನ್ನು ನಾಶಪಡಿಸಲಿ!”