Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 6:33 - ಪರಿಶುದ್ದ ಬೈಬಲ್‌

33 ಎಲೀಷನು ಹಿರಿಯರೊಂದಿಗೆ ಇನ್ನೂ ಮಾತನಾಡುತ್ತಿರುವಾಗ ಸಂದೇಶಕನು ಅವನ ಬಳಿಗೆ ಬಂದನು. ಅವನ ಸಂದೇಶವು ಹೀಗಿತ್ತು: “ಈ ಆಪತ್ತು ಯೆಹೋವನಿಂದಲೇ ಬಂದಿದೆ! ನಾನೇಕೆ ಆತನನ್ನು ನಿರೀಕ್ಷಿಸಿಕೊಂಡಿರಬೇಕು?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಅವನು ಅವರೊಡನೆ ಮಾತನಾಡುತ್ತಿರುವಾಗಲೇ, ಸೇವಕನು ಅರಸನೊಂದಿಗೆ ಬಂದನು. ಅರಸನು ಎಲೀಷನಿಗೆ, “ನೋಡು, ಈ ಆಪತ್ತು ಯೆಹೋವನಿಂದಲೇ ಬಂದದ್ದು, ಇನ್ನು ಮುಂದೆ ನಾನೇಕೆ ಆತನನ್ನು ನಿರೀಕ್ಷಿಸಿಕೊಂಡಿರಬೇಕು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಅವನು ಅವರೊಡನೆ ಮಾತಾಡುತ್ತಿರುವಾಗಲೇ ಆ ಆಳೂ ಅವನ ಹಿಂದಿನಿಂದ ಅರಸನೂ ಅಲ್ಲಿಗೆ ಬಂದರು. ಅರಸನು ಎಲೀಷನಿಗೆ, “ನೋಡು, ಈ ಆಪತ್ತು ಸರ್ವೇಶ್ವರನಿಂದಲೇ ಬಂದದ್ದು. ಇನ್ನು ಮುಂದೆ ನಾನೇಕೆ ಆತನನ್ನು ನಂಬಿ ನಿರೀಕ್ಷಿಸಿಕೊಂಡಿರಬೇಕು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಅವನು ಅವರೊಡನೆ ಮಾತಾಡುತ್ತಿರುವಾಗಲೇ ಆಳೂ [ಅವನ ಹಿಂದಿನಿಂದ ಅರಸನೂ] ಅಲ್ಲಿಗೆ ಬಂದರು. ಅರಸನು ಎಲೀಷನಿಗೆ - ನೋಡು, ಈ ಆಪತ್ತು ಯೆಹೋವನಿಂದಲೇ ಬಂದದ್ದು. ಇನ್ನು ಮುಂದೆ ನಾನೇಕೆ ಆತನನ್ನು ನಿರೀಕ್ಷಿಸಿಕೊಂಡಿರಬೇಕು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಎಲೀಷನು ಅವರೊಡನೆ ಮಾತನಾಡುತ್ತಿರುವಾಗಲೇ ಆ ದೂತನೂ ಅವನ ಹಿಂದಿನಿಂದ ಅರಸನೂ ಅಲ್ಲಿಗೆ ಬಂದರು. ಅರಸನು ಎಲೀಷನಿಗೆ, “ನೋಡು, ಈ ಆಪತ್ತು ಯೆಹೋವ ದೇವರಿಂದಲೇ ಬಂದದ್ದು. ಇನ್ನು ಮುಂದೆ ನಾನೇಕೆ ಅವರನ್ನು ನಂಬಿ ನಿರೀಕ್ಷಿಸಿಕೊಂಡಿರಬೇಕು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 6:33
32 ತಿಳಿವುಗಳ ಹೋಲಿಕೆ  

ಯೋಬನ ಹೆಂಡತಿಯು ಅವನಿಗೆ, “ನೀನು ಇನ್ನೂ ದೇವರಿಗೆ ನಂಬಿಗಸ್ತನಾಗಿರುವೆಯೋ? ದೇವರನ್ನು ದೂಷಿಸಿ ಸಾಯಿ” ಎಂದು ಹೇಳಿದಳು.


ನೀವು ಆ ತಪ್ಪಾದ ಆಜ್ಞೆಗಳನ್ನು ಅನುಸರಿಸಿದರೆ ನಿಮ್ಮ ದೇಶದಲ್ಲಿ ಸಂಕಟವೂ ಹಸಿವೆಯೂ ಉಂಟಾಗುತ್ತವೆ. ಜನರು ಹಸಿವಿನಿಂದ ಬಳಲುವರು. ಆಗ ಅವರಲ್ಲಿ ಸಿಟ್ಟು ಉಂಟಾಗಿ ತಮ್ಮ ಅರಸನನ್ನೂ ಅವನ ದೇವರುಗಳನ್ನೂ ಬೈಯುವರು ಮತ್ತು ಸಹಾಯಕ್ಕಾಗಿ ದೇವರಿಗೆ ಮೊರೆಯಿಡುವರು.


ಸೈತಾನನು ನಮ್ಮಿಂದ ಯಾವುದನ್ನೂ ಕಸಿದುಕೊಳ್ಳಬಾರದೆಂದು ನಾನು ಹೀಗೆ ಮಾಡಿದೆನು. ಸೈತಾನನ ಯೋಜನೆಗಳು ಯಾವುವೆಂದು ನಮಗೆ ಚೆನ್ನಾಗಿ ತಿಳಿದಿವೆ.


ಆದರೆ ಈಗ ನೀವು ಅವನನ್ನು ಕ್ಷಮಿಸಬೇಕು ಮತ್ತು ಸಂತೈಸಬೇಕು. ಆಗ ಅವನು ಅತೀವ ದುಃಖದಿಂದ ಸಂಪೂರ್ಣವಾಗಿ ಸೋತುಹೋಗಲು ಸಾಧ್ಯವಾಗುವುದಿಲ್ಲ.


ನಿರಾಶರಾಗದೆ ಯಾವಾಗಲೂ ಪ್ರಾರ್ಥಿಸಬೇಕೆಂದು ಯೇಸು ತನ್ನ ಶಿಷ್ಯರಿಗೆ ಈ ಸಾಮ್ಯದ ಮೂಲಕ ಉಪದೇಶಿಸಿದನು:


ಭವಿಷ್ಯದ ಒಂದು ವಿಶೇಷ ಸಮಯದ ಕುರಿತಾಗಿ ಈ ಸಂದೇಶ. ಈ ಸಂದೇಶವು ಅಂತ್ಯದ ವಿಷಯವಾಗಿ ಇದೆ. ಇದು ಖಂಡಿತವಾಗಿಯೂ ನೆರವೇರುತ್ತದೆ. ಆ ಸಮಯವು ಎಂದಿಗೂ ಬರುವುದಿಲ್ಲ ಎಂಬಂತೆ ಕಾಣಬಹುದು. ಆದರೆ ತಾಳ್ಮೆಯಿಂದಿರು; ಅದನ್ನು ನಿರೀಕ್ಷಿಸುತ್ತಾ ಇರು. ಆ ಸಮಯವು ಬರುವದು. ಅದು ತಡವಾಗುವುದಿಲ್ಲ.


ಯೆಹೂದವೇ, ವಿಗ್ರಹಗಳ ಬೆನ್ನುಹತ್ತಿ ಹೋಗುವದನ್ನು ನಿಲ್ಲಿಸು! ಆ ಅನ್ಯದೇವರುಗಳ ಬಗ್ಗೆ ನಿನ್ನಲ್ಲಿರುವ ಬಯಕೆಯನ್ನು ತೊರೆದುಬಿಡು. ಆದರೆ ನೀನು ‘ಹಾಗೆ ಮಾಡಿದರೆ ಪ್ರಯೋಜನವೇನು? ನಾನು ಅವುಗಳನ್ನು ಬಿಡಲಾರೆ. ನಾನು ಆ ಅನ್ಯದೇವರುಗಳನ್ನು ಪ್ರೀತಿಸುತ್ತೇನೆ. ನಾನು ಅವುಗಳನ್ನು ಪೂಜಿಸಬಯಸುತ್ತೇನೆ’ ಎಂದು ಹೇಳುವೆ.


ಯೆಹೋವನನ್ನು ಗೌರವಿಸುವ ಜನರು ಆತನ ಸೇವಕನ ಮಾತನ್ನು ಕೇಳುವರು. ಆ ಸೇವಕನು ಮುಂದೆ ಸಂಭವಿಸುವುದರ ಬಗ್ಗೆ ಚಿಂತೆ ಇಲ್ಲದೆ ಸಂಪೂರ್ಣವಾಗಿ ದೇವರ ಮೇಲೆ ನಂಬಿಕೆ ಇಡುವನು. ಅವನು ಪರಿಪೂರ್ಣವಾಗಿ ಯೆಹೋವನ ಹೆಸರಿನಲ್ಲಿ ನಂಬಿಕೆ ಇಟ್ಟು ತನ್ನ ದೇವರ ಮೇಲೆ ಅವಲಂಬಿಸಿಕೊಳ್ಳುವನು.


ಯೆಹೋವನೇ, ನಿನ್ನಲ್ಲಿ ಭರವಸವಿಟ್ಟವರಿಗೆ ನೀನು ನಿಜವಾದ ಸಮಾಧಾನವನ್ನು ಅನುಗ್ರಹಿಸುವೆ.


ಆ ಒಡಂಬಡಿಕೆಯು ಹೀಗಿತ್ತು: ನನ್ನ ದೇವರಾದ ಯೆಹೋವನ ಸಹಾಯಕ್ಕಾಗಿ ನಾನು ಕಾಯುತ್ತಿರುವೆನು. ಯಾಕೋಬನ ಕುಟುಂಬದ ಬಗ್ಗೆ ಯೆಹೋವನು ನಾಚಿಕೊಂಡಿದ್ದಾನೆ. ಅವರ ಕಡೆ ನೋಡಲು ಆತನು ನಿರಾಕರಿಸುತ್ತಾನೆ. ಆದರೆ ನಾನು ಯೆಹೋವನನ್ನು ನಿರೀಕ್ಷಿಸುವೆನು. ಆತನು ನನ್ನನ್ನು ರಕ್ಷಿಸುವನು.


ಮೂಢನ ಮೂಢತನವು ಅವನ ಜೀವನವನ್ನೇ ನಾಶಪಡಿಸುತ್ತದೆ. ಆದರೆ ಅವನು ದೂಷಿಸುವುದು ಯೆಹೋವನನ್ನೇ.


ನನ್ನ ಮನವೇ, ದೇವರನ್ನೇ ನಂಬಿ ಶಾಂತವಾಗಿರು. ನನ್ನ ನಿರೀಕ್ಷೆ ದೇವರಲ್ಲಿಯೇ.


ದುಷ್ಟರಾದರೋ ನಾಶವಾಗುವರು. ಯೆಹೋವನಲ್ಲಿ ಮೊರೆಯಿಡುವವರಾದರೋ ವಾಗ್ದಾನ ಮಾಡಲ್ಪಟ್ಟ ಭೂಮಿಯನ್ನು ಪಡೆದುಕೊಳ್ಳುವರು.


ಯೆಹೋವನಲ್ಲಿ ಭರವಸವಿಟ್ಟು ಆತನ ಸಹಾಯಕ್ಕಾಗಿ ಕಾದುಕೊಂಡಿರು. ಕೆಡುಕರ ಅಭಿವೃದ್ಧಿಯನ್ನು ಕಂಡು ಉರಿಗೊಳ್ಳಬೇಡ. ಕೆಡುಕರ ಕುಯುಕ್ತಿಗಳು ನೆರವೇರಿದರೂ ಹೊಟ್ಟೆಕಿಚ್ಚುಪಡಬೇಡ.


ಯೆಹೋವನ ಸಹಾಯಕ್ಕಾಗಿ ಕಾದುಕೊಂಡಿರಿ! ಬಲವಾಗಿಯೂ ಧೈರ್ಯವಾಗಿಯೂ ಇರಿ! ಯೆಹೋವನ ಸಹಾಯಕ್ಕಾಗಿ ಕಾದುಕೊಂಡಿರಿ!


ಆದರೆ ನೀನು ಕೈಚಾಚಿ ಅವನ ಮಾಂಸವನ್ನೂ ಮೂಳೆಗಳನ್ನೂ ಹೊಡೆ. ಅವನು ನಿನ್ನ ಮುಖದೆದುರಿಗೆ ನಿನ್ನನ್ನು ಖಂಡಿತವಾಗಿ ದೂಷಿಸುವನು” ಎಂದು ಉತ್ತರಕೊಟ್ಟನು.


“ನಾನು ತಾಯಿಯ ಗರ್ಭದಿಂದ ಜನಿಸಿದಾಗ ಏನೂ ಇಲ್ಲದವನಾಗಿದ್ದೆನು; ಈ ಲೋಕವನ್ನು ಬಿಟ್ಟು ಹೋಗುವಾಗಲೂ ಏನೂ ಇಲ್ಲದವನಾಗಿಯೇ ಹೋಗುವೆನು. ಯೆಹೋವನೇ ಕೊಟ್ಟನು, ಯೆಹೋವನೇ ತೆಗೆದುಕೊಂಡನು. ಆತನ ನಾಮಕ್ಕೆ ಸ್ತೋತ್ರವಾಗಲಿ!” ಎಂದು ಹೇಳಿದನು.


ಆದರೆ ಈಗ ನೀನು ನಿನ್ನ ಕೈಚಾಚಿ ಅವನ ಆಸ್ತಿಯನ್ನೆಲ್ಲಾ ನಾಶಮಾಡು. ಆಗ ಅವನು ನಿನ್ನ ಮುಖದೆದುರಿಗೆ ನಿನ್ನನ್ನು ಖಂಡಿತವಾಗಿ ದೂಷಿಸುವನು” ಎಂದು ಉತರಕೊಟ್ಟನು.


ಸೌಲನು ತನ್ನ ಅಯುಧವಾಹಕನಿಗೆ, “ನಿನ್ನ ಖಡ್ಗದಿಂದ ಇರಿದು ನನ್ನನ್ನು ಕೊಂದುಬಿಡು. ಆಗ, ಈ ಪರದೇಶೀಯರು ನನ್ನನ್ನು ಗಾಯಗೊಳಿಸುವುದಕ್ಕಾಗಲಿ ಅಪಹಾಸ್ಯ ಮಾಡುವುದಕ್ಕಾಗಲಿ ಸಾಧ್ಯವಾಗುವುದಿಲ್ಲ” ಎಂದನು. ಆದರೆ ಸೌಲನ ಆಯುಧವಾಹಕನು ನಿರಾಕರಿಸಿದನು. ಸೌಲನ ಸಹಾಯಕನು ಬಹಳ ಭಯಗೊಂಡಿದ್ದನು. ಆದ್ದರಿಂದ ಸೌಲನು ತನ್ನ ಸ್ವಂತ ಖಡ್ಗದಿಂದಲೇ ಇರಿದು ಆತ್ಮಹತ್ಯೆ ಮಾಡಿಕೊಂಡನು.


ಅದಕ್ಕೆ ಕಾಯಿನನು ಯೆಹೋವನಿಗೆ, “ಈ ಶಿಕ್ಷೆಯನ್ನು ನಾನು ಸಹಿಸಲಾರೆ!


“ಆದ್ದರಿಂದ ನರಪುತ್ರನೇ, ನನ್ನ ಪರವಾಗಿ ಇಸ್ರೇಲ್ ಜನರೊಂದಿಗೆ ಮಾತನಾಡು. ‘ನಾವು ಪಾಪಮಾಡಿದ್ದೇವೆ. ಕಟ್ಟಳೆಗಳನ್ನು ಮೀರಿದ್ದೇವೆ. ನಮ್ಮ ಪಾಪಗಳು ಹೊರಲಾರದಷ್ಟು ಭಾರವಾಗಿವೆ. ನಾವು ಆ ಪಾಪಗಳಿಂದಾಗಿ ಕ್ಷೀಣಿಸುತ್ತಿದ್ದೇವೆ. ನಾವು ಜೀವಿಸಬೇಕಾದರೆ ಏನು ಮಾಡಬೇಕು?’ ಎಂದು ಅವರು ಕೇಳಿಯಾರು.


ಎಲೀಷನು ಅವನಿಗೆ, “ಯೆಹೋವನ ಸಂದೇಶವನ್ನು ಕೇಳು: ‘ನಾಳೆ ಇದೇ ಸಮಯಕ್ಕೆ, ಅಧಿಕವಾದ ಆಹಾರವು ಬಹಳ ಕಡಿಮೆ ಬೆಲೆಗೆ ಸಿಗುತ್ತದೆ. ಒಂದು ರೂಪಾಯಿಗೆ ಒಂದು ಬುಟ್ಟಿ ಹಿಟ್ಟನ್ನೂ ಎರಡು ಬುಟ್ಟಿ ಜವೆಗೋಧಿಯನ್ನೂ ಸಮಾರ್ಯನಗರದ ಊರ ಬಾಗಿಲಿನಲ್ಲಿರುವ ಮಾರುಕಟ್ಟೆಯಲ್ಲಿ ಮಾರಲಾಗುವುದು’” ಎಂದನು.


ಆಗ ಇಸ್ರೇಲಿನ ರಾಜನಾದ ಯೋರಾಮನು, “ಅಯ್ಯೋ, ಮೂವರು ರಾಜರಾದ ನಮ್ಮನ್ನು ನಿಜವಾಗಿಯೂ ಒಟ್ಟಿಗೆ ಬರಮಾಡಿದ ಯೆಹೋವನು ನಮ್ಮನ್ನು ಮೋವಾಬ್ಯರು ಸೋಲಿಸುವಂತೆ ಮಾಡಿದನಲ್ಲಾ!” ಎಂದು ಹೇಳಿದನು.


ನೀನು ದೇವರ ಮೇಲೆ ಕೋಪಗೊಂಡು ನಿನ್ನ ಬಾಯಿಂದ ಅಂತಹ ಮಾತುಗಳನ್ನು ಸುರಿಸುತ್ತಿರುವೆ!


ಯಾರೇ ಆಗಲಿ ತಾವು ಮುಂತಿಳಿಸಿದ್ದನ್ನು ಯೆಹೋವನು ಆಜ್ಞಾಪಿಸದ ಹೊರತು ಅದು ನೆರವೇರುವುದಿಲ್ಲ.


ಜೀವಂತವಾಗಿರುವ ಯಾವ ವ್ಯಕ್ತಿಯೇ ಆಗಲಿ ತನ್ನ ಪಾಪಗಳ ನಿಮಿತ್ತ ಯೆಹೋವನ ಶಿಕ್ಷೆಗೆ ಗುರಿಯಾಗುವಾಗ ದೂರು ಹೇಳಕೂಡದು.


ತುತ್ತೂರಿಯ ಎಚ್ಚರಿಕೆಯ ಶಬ್ಧವನ್ನು ಕೇಳಿದ ಜನರು ಖಂಡಿತವಾಗಿ ಹೆದರಿ ನಡುಗುವರು. ಒಂದು ಗಂಡಾಂತರವು ಪಟ್ಟಣಕ್ಕೆ ಬಂದಿರುವುದಾದರೆ ಅದನ್ನು ಬರಮಾಡಿದಾತನು ಯೆಹೋವನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು