2 ಅರಸುಗಳು 6:9 - ಪರಿಶುದ್ದ ಬೈಬಲ್9 ಆದರೆ ದೇವಮನುಷ್ಯನು (ಎಲೀಷನು) ಇಸ್ರೇಲಿನ ರಾಜನಿಗೆ ಒಂದು ಸಂದೇಶವನ್ನು ಕಳುಹಿಸಿ, “ನೀವು ಜಾಗರೂಕರಾಗಿರಿ! ನೀವು ಆ ಜಾಗದಲ್ಲಿ ತಿರುಗಾಡದಿರಿ! ಅರಾಮ್ಯರ ಸೈನಿಕರು ಅಲ್ಲಿ ಅಡಗಿದ್ದಾರೆ!” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ದೇವರ ಮನುಷ್ಯನು ಇಸ್ರಾಯೇಲರ ಅರಸನಿಗೆ, “ಜಾಗರೂಕತೆಯಿಂದಿರಿ, ನೀವು ಇಂಥಿಂಥ ಸ್ಥಳದಲ್ಲಿ ಹೋಗಬಾರದು. ಅಲ್ಲಿ ಅರಾಮ್ಯರು ಅಡಗಿಕೊಂಡಿದ್ದಾರೆ” ಎಂದು ತಿಳಿಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಆದರೆ ದೈವಪುರುಷನು, ಪ್ರತೀಸಾರಿ ಇಸ್ರಯೇಲರ ಅರಸನಿಗೆ, “ಜಾಗರೂಕತೆಯಿಂದಿರಿ! ನೀವು ಇಂಥಿಂಥ ಸ್ಥಳದಲ್ಲಿ ಹಾಯಬಾರದು, ಅಲ್ಲಿ ಸಿರಿಯಾದವರು ಅಡಗಿಕೊಂಡಿದ್ದಾರೆ,” ಎಂದು ತಿಳಿಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ದೇವರ ಮನುಷ್ಯನು ಇಸ್ರಾಯೇಲ್ಯರ ಅರಸನಿಗೆ - ಜಾಗರೂಕತೆಯಿಂದಿರ್ರಿ; ನೀವು ಇಂಥಿಂಥ ಸ್ಥಳದಲ್ಲಿ ಹಾಯಬಾರದು, ಅಲ್ಲಿ ಅರಾಮ್ಯರು ಅಡಗಿಕೊಂಡಿದ್ದಾರೆ ಎಂದು ತಿಳಿಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆಗ ದೇವರ ಮನುಷ್ಯನು ಇಸ್ರಾಯೇಲಿನ ಅರಸನಿಗೆ, “ಅಂಥಾ ಸ್ಥಳವನ್ನು ಹಾದುಹೋಗದೆ ಜಾಗ್ರತೆಯಾಗಿ ಇರು. ಏಕೆಂದರೆ ಅರಾಮ್ಯರು ಅಲ್ಲಿಗೆ ಇಳಿದು ಬಂದಿದ್ದಾರೆ,” ಎಂದು ಹೇಳಿ ಕಳುಹಿಸಿದನು. ಅಧ್ಯಾಯವನ್ನು ನೋಡಿ |
ಆದರೆ ಶೂನೇಮಿನ ಈ ಸ್ತ್ರೀಯು ದೇವಮನುಷ್ಯನಿದ್ದ ಬೆಟ್ಟದವರೆಗೆ ಹೋದಳು. ಅವಳು ನೆಲಕ್ಕೆ ಬಾಗಿ, ಎಲೀಷನ ಪಾದಗಳನ್ನು ಹಿಡಿದುಕೊಂಡಳು. ಶೂನೇಮಿನ ಆ ಸ್ತ್ರೀಯನ್ನು ತಳ್ಳಿಬಿಡಲು ಗೇಹಜಿಯು ಹತ್ತಿರಕ್ಕೆ ಬಂದನು. ಆದರೆ ದೇವಮನುಷ್ಯನು ಗೇಹಜಿಗೆ, “ಅವಳನ್ನು ತಡೆಯಬೇಡ! ಅವಳು ಬಹಳ ತಳಮಳಗೊಂಡಿದ್ದಾಳೆ. ಯೆಹೋವನು ನನಗೆ ಆಕೆಯ ದುಃಖವನ್ನು ಪ್ರಕಟಿಸಲಿಲ್ಲ; ನನಗೆ ಮರೆಮಾಡಿದ್ದಾನೆ” ಎಂದು ಹೇಳಿದನು.
ಒಂದು ದಿನ ಪ್ರವಾದಿಮಂಡಲಿಯವರಲ್ಲೊಬ್ಬನ ಪತ್ನಿಯು ಗೋಳಾಡುತ್ತಾ ಎಲೀಷನಲ್ಲಿಗೆ ಹೋಗಿ, “ನನ್ನ ಗಂಡನು ನಿನಗೆ ಸೇವಕನಂತಿದ್ದನು. ಈಗ ನನ್ನ ಗಂಡ ಸತ್ತಿದ್ದಾನೆ! ಅವನು ಯೆಹೋವನಲ್ಲಿ ಭಯಭಕ್ತಿ ಉಳ್ಳವನಾಗಿದ್ದದು ನಿನಗೆ ತಿಳಿದಿದೆ. ಆದರೆ ಅವನು ಒಬ್ಬ ಮನುಷ್ಯನಿಗೆ ಹಣವನ್ನು ಕೊಡಬೇಕಾಗಿದೆ. ಈಗ ಆ ಮನುಷ್ಯನು ನನ್ನ ಎರಡು ಗಂಡುಮಕ್ಕಳನ್ನು ತೆಗೆದುಕೊಂಡು ತನ್ನ ಗುಲಾಮರನ್ನಾಗಿ ಮಾಡಿಕೊಳ್ಳಲು ಬರುತ್ತಿದ್ದಾನೆ!” ಎಂದು ಹೇಳಿದಳು.